ಅಹಮದಾಬಾದ್: ಗುಜರಾತ್ನ ವಲ್ಸಾದ್ ಜಿಲ್ಲೆಯ ವಾಪಿ ಪ್ರದೇಶದಲ್ಲಿ ಶನಿವಾರ ಮುಂಜಾನೆ ಭಾರಿ ಬೆಂಕಿ ಅವಘಡ ಸಂಭವಿಸಿದೆ.
ಅಧಿಕಾರಿಗಳ ಪ್ರಕಾರ, 15 ಕ್ಕೂ ಹೆಚ್ಚು ಸ್ಕ್ರ್ಯಾಪ್ ಗೋದಾಮುಗಳು ಬೆಂಕಿಯಲ್ಲಿ ಸುಟ್ಟುಹೋಗಿವೆ.ಸ್ಥಳಕ್ಕೆ 10 ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಇದಕ್ಕೂ ಮುನ್ನ ಶುಕ್ರವಾರ ಗುಜರಾತ್ನ ಗಾಂಧಿಧಾಮದಲ್ಲಿರುವ ಕಾಮಧೇನು ಗೋ ಸೇವಾ ಟ್ರಸ್ಟ್ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
ಇತ್ತೀಚೆಗೆ ಮಾರ್ಚ್ 4 ರಂದು ಗೋಧ್ರಾ ರೈಲ್ವೆ ನಿಲ್ದಾಣದ ಬಳಿಯ ಹಳೆಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ವಾಹನಗಳು 5 ರಿಂದ 6 ಗಂಟೆಗಳ ಪ್ರಯತ್ನದ ನಂತರ ಬೆಂಕಿಯನ್ನು ನಂದಿಸಿದವು.








