ಕಲಬುರ್ಗಿ : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದ್ದು, ಕಲಬುರ್ಗಿಯಲ್ಲಿ ಒಂದೇ ಹಗ್ಗಕ್ಕೆ ಬಾಲಕ ಮತ್ತು ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಯಡ್ರಾಮಿಯಲ್ಲಿ ನಡೆದಿದೆ.
ಹೌದು ಯಡ್ರಾಮಿ ತಾಲೂಕಿನ ಮಳ್ಳಿ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತರಿಬ್ಬರು ಬಳ್ಳಿ ಗ್ರಾಮದ ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎಂದು ತಿಳಿದುಬಂದಿದ್ದು ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ತಮ್ಮ ಪ್ರೀತಿ ವಿಚಾರ ಮನೆಯವರಿಗೆ ತಿಳಿಯಬಹುದು ಎಂಬ ಅತಂಕಕ್ಕೆ ಒಳಗಾಗಿದ್ದರು.
ಈ ಹಿನ್ನೆಲೆಯಲ್ಲಿ ಅಪ್ರಾಪ್ತರಿಬ್ಬರೂ ನೇಣಿಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಯಾವದೇ ಡೆತ್ ನೋಟ್ ಪತ್ತೆಯಾಗಿಲ್ಲವಾದ್ದರಿಂದ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.