ಕೊಪ್ಪಳ : ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರದಲ್ಲಿ ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಕಾಮುಕರು ಹಲ್ಲೆ ನಡೆಸಿ ಅತ್ಯಾಚಾರವೆಸಗಿರುವ ಘಟನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದುಷ್ಕರ್ಮಿಗಳಿಂದ ಕಾಲುವೆಗೆ ಬಿದ್ದಿದ್ದ ಒರಿಸ್ಸಾ ಬಿಬಾಸ್ ಎಂಬಾತ ಶವವಾಗಿ ಪತ್ತೆಯಾಗಿದ್ದಾನೆ.
ದುಷ್ಕರ್ಮಿಗಳು ವಿದೇಶಿ ಮಹಿಳೆ ಮತ್ತು ಹೋಟೆಲ್ ಮಾಲೀಕರ ಮೇಲೆ ಅತ್ಯಾಚಾರ ನಡೆಸಿದ ದುಷ್ಕರ್ಮಿಗಳು ಅಮೆರಿಕಾದ ಡ್ಯಾನಿಯಲ್ ಮತ್ತು ಬಿಬಾಸ್ ಹಾಗೂ ಮಹಾರಾಷ್ಟ್ರದ ಪಂಕಜ್‌ರನ್ನು ಕಾಲುವೆಗೆ ತಳ್ಳಿದ್ದಾರೆ. ಪಂಕಜ್ ಮತ್ತು ಡ್ಯಾನಿಯಲ್ ಕಾಲುವೆಯಿಂದ ಹೊರಬಂದರೆ, ಒರಿಸ್ಸಾ ಮೂಲದ ಬಿಬಾಸ್ ನಾಪತ್ತೆಯಾಗಿದ್ದರು. ವಿಷಯ ತಿಳಿದ ಕೂಡಲೇ ಪೊಲೀಸರು, ಅಗ್ನಿಶಾಮಕ ದಳ ಮತ್ತು ಸ್ಥಳೀಯ ಮೀನುಗಾರರು ಬಿಬಾಸ್‌ಗಾಗಿ ಶೋಧ ಕಾರ್ಯ ಆರಂಭಿಸಿದರು. ಆದರೆ, ಇದೀಗ ಬಿಬಾಸ್ ಮೃತದೇಹ ಪತ್ತೆಯಾಗಿದೆ. ಘಟನೆ ಸಂಬಂಧ ಹೋಟೆಲ್ ಮಾಲೀಕೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಘಟನೆ ಹಿನ್ನೆಲೆ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಪ್ರವಾಸಿ ತಾಣ ಸಾಣಾಪುರ ಕೆರೆ ಬಳಿ ಜಂಗ್ಲಿಗೆ ಹೋಗುವ ರಸ್ತೆ ಮಧ್ಯದಲ್ಲಿನ ತುಂಗಾಭದ್ರ ಎಡದಂಡೆ ಕಾಲುವೆ ಪಕ್ಕ ಈ ಘಟನೆ ನಡೆದಿದೆ. ಗಿಟಾರ್ ಬಾರಿಸುತ್ತಾ ಕುಳಿತಿದ್ದ ಇಬ್ಬರು ವಿದೇಶಿ ಹಾಗೂ ಮೂವರು ದೇಶಿಯ ಪ್ರವಾಸಿಗರ ಮೇಲೆ ಗುರುವಾರ ತಡರಾತ್ರಿ ಹಲ್ಲೆಯಾಗಿದೆ.
ವಾಯುವಿಹಾರಕ್ಕೆಂದು ಹೋಗಿದ್ದ ಸಂದರ್ಭದಲ್ಲಿ ವಿದೇಶಿಯರಿದ್ದ ಗುಂಪಿನ ಮೇಲೆ ದಾಳಿ ಮಾಡಿರುವ ಕೆಲ ಸ್ಥಳೀಯ ಯುವಕರು, ಗುಂಪಿನಲ್ಲಿದ್ದ ಪುರುಷರನ್ನು ಕಾಲುವೆಗೆ ದೂಡಿ, ಒಬ್ಬ ವಿದೇಶಿ ಮತ್ತು ಒಬ್ಬ ಸ್ಥಳೀಯ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.
ಘಟನೆಯಲ್ಲಿ ಕಾಲುವೆಗೆ ಬಿದ್ದಿದ್ದ ಒಬ್ಬ ಸ್ವದೇಶಿ ಯುವಕ ನಾಪತ್ತೆಯಾಗಿದ್ದು, ಇನ್ನುಳಿದವರಿಗೆ ಗಾಯಗಳಾಗಿವೆ. ಅಮೆರಿಕ ಮೂಲದ ಡೇನಿಯಲ್, ಇಸ್ರೇಲ್ನ ಸೀಮಾ, ಗಂಗಾವತಿ ತಾಲ್ಲೂಕಿನ ಆನೆಗೊಂದಿಯ ಹಾರ್ಟ್ ಲೈನ್ ಹೋಂ ಸ್ಟೇ ಒಂದರ ಮಾಲಕಿ ಅಂಬಿಕಾ ನಾಯ್ಕ್, ಮಹಾರಾಷ್ಟ್ರದ ನಾಸಿಕ್ನ ಪಂಕಜ್ ಪಟೇಲ್ ಹಾಗೂ ಒಡಿಶಾದ ಬಿ.ಬಾಸ್ ಹಲ್ಲೆಗೆ ಒಳಗಾದವರು ಎಂದು ಪೊಲೀಸರು ತಿಳಿಸಿದ್ದಾರೆ.







