ಬೆಂಗಳೂರು: ನಗರದಲ್ಲಿ ಕಂಪನಿಯೊಂದರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ಜೆಪಿ ನಗರದ 7ನೇ ಹಂತದಲ್ಲಿ ನಡೆದಿದೆ. ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದಂತ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನ ಜೆಪಿ ನಗರದ 7ನೇ ಹಂತದಲ್ಲಿರುವಂತ ಖಾಸಗಿ ಕಂಪನಿಯೊಂದರಲ್ಲಿ ನಂದೀಶ್ ಎಂಬಾತ ಕೆಲಸ ಮಾಡುತ್ತಿದ್ದರು. ಅವರನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿತ್ತು. ಅಲ್ಲದೇ ಕಳೆದ ಒಂದು ತಿಂಗಳಿನಿಂದ ಸ್ಯಾಲರಿ ಕೂಡ ನೀಡದೇ ಕಿರುಕುಳ ನೀಡುತ್ತಿತ್ತಂತೆ. ಇದೇ ಕಾರಣಕ್ಕೆ ಕಂಪನಿಯ ಕಿರುಕುಳಕ್ಕೆ ಬೇಸತ್ತು ಇಂದು ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ನಂದೀಶ್ ಯತ್ನಿಸಿದ್ದಾನೆ.
ಕಂಪನಿಯ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದಂತ ನಂದೀಶ್ ನ ಬೆನ್ನು ಮೂಳೆ ಮುರಿತಗೊಂಡಿದೆ. ಹೀಗಾಗಿ ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಈಗ ನಂದೀಶ್ ಸ್ಥಿತಿ ಗಂಭೀರವಾಗಿರೋದಾಗಿ ಹೇಳಲಾಗುತ್ತಿದೆ.
ಮ್ಯೂಚುವಲ್ ಫಂಡ್ ಹೂಡಿಕೆಯಲ್ಲಿ ಪುರುಷರಿಗಿಂತ ಮಹಿಳಾ ಹೂಡಿಕೆದಾರರು ಮೇಲುಗೈ ಸಾಧಿಸಿದ್ದಾರೆ: ವರದಿ | Mutual fund