ಹುಬ್ಬಳ್ಳಿ: ಜಿಲ್ಲೆಯಲ್ಲಿ ಅಂಗನವಾಡಿ ಮಕ್ಕಳಿಗೆ ವಿತರಣೆ ಮಾಡಬೇಕಿದ್ದಂತ ಆಹಾರವನ್ನು ಅಕ್ರಮವಾಗಿ ಗೋದಾಮು ಒಂದರಲ್ಲಿ ಸಂಗ್ರಹಿಸಿದ್ದನ್ನು ಅಧಿಕಾರಿಗಳು ದಾಳಿ ನಡೆಸಿ ಪತ್ತೆ ಹಚ್ಚಿದ್ದರು. ಈ ಪ್ರಕರಣ ಸಂಬಂಧ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನುತೊಗೊಳಿಸಲಾಗಿದೆ.
ಈ ಸಂಬಂಧ ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಕರ್ತವ್ಯ ಲೋಪ ಹಾಗೂ ಗುಪ್ತ ಮಾಹಿತಿ ಸಂಗ್ರಹಿಸುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ಕಸಬಾ ಪೊಲೀಸ್ ಠಾಣೆಯ ಮಾಬು ಸಾಬ್ ವಾಲೀಕರ್, ಗೊಣೆಪ್ಪನವರ್ ಎನ್ನುವಂತ ಪೊಲೀಸ್ ಕಾನ್ ಸ್ಟೇಬಲ್ ಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಅಂದಹಾಗೇ ಹುಬ್ಬಳ್ಳಿಯ ಗಬ್ಬೂರಲ್ಲಿ ಗೋದಾಮಿನ ಮೇಲೆ ಅಂಗನವಾಡಿ ಮಕ್ಕಳ ಆಹಾರ ಅಕ್ರಮ ದಾಸ್ತಾನು ಸಂಬಂಧ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಅಂಗನವಾಡಿ ಮಕ್ಕಳಿಗೆ ಸರಬರಾಜು ಆಗಬೇಕಿದ್ದಂತ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿದ್ದು ಪತ್ತೆಯಾಗಿತ್ತು. ಈ ಸಂಬಂಧ ಹತ್ತಕ್ಕೂ ಹೆಚ್ಚು ಜನರ ವಿರುದ್ಧ ಕೇಸ್ ದಾಖಲಾಗಿತ್ತು. ಕೆಲವನ್ನು ಬಂಧಿಸಲಾಗಿದೆ. ಇನ್ನೂ ಕೆಲವರು ನಾಪತ್ತೆಯಾಗಿದ್ದಾರೆ. ಈ ಪ್ರಕರಣದಲ್ಲೇ ಇಬ್ಬರು ಪಿಸಿಗಳನ್ನು ಕರ್ತವ್ಯ ಲೋಪದ ಮೇಲೆ ಅಮಾನತುಗೊಳಿಸಲಾಗಿದೆ.
ದಲಿತರ ಹಣ ಅನ್ಯ ಉದ್ದೇಶಕ್ಕೆ ಬಳಕೆ ವಿರುದ್ಧ ಜನಾಂದೋಲನ: ಛಲವಾದಿ ನಾರಾಯಣಸ್ವಾಮಿ
ಮ್ಯೂಚುವಲ್ ಫಂಡ್ ಹೂಡಿಕೆಯಲ್ಲಿ ಪುರುಷರಿಗಿಂತ ಮಹಿಳಾ ಹೂಡಿಕೆದಾರರು ಮೇಲುಗೈ ಸಾಧಿಸಿದ್ದಾರೆ: ವರದಿ | Mutual fund