ಬೆಂಗಳೂರು : ದೇಶದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ( ASRTU) 2023-24ನೇ ಸಾಲಿನ ಒಟ್ಟು *3 ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳು ( National Transport Excellence Award) ಸಿಕ್ಕಿವೆ.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ ( ASRTU)ದ ವ್ಯಾಪ್ತಿಯಲ್ಲಿ ದೇಶದ 62 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಸದಸ್ಯತ್ವವನ್ನು ಹೊಂದಿವೆ. ಸದರಿ ಒಕ್ಕೂಟವು 13ನೇ ಆಗಸ್ಟ್ 1965 ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು ,ಭಾರತ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ನಿರ್ದೇಶನದ ಅನುಸಾರ ಕಾರ್ಯನಿರ್ವಹಿಸುತ್ತದೆ ಈ ಸಂಸ್ಥೆಯು 59 ವರ್ಷಗಳ ಅನುಭವವನ್ನು ಹೊಂದಿದ್ದು, ದೇಶದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ.
ಕೆ ಎಸ್ ಆರ್ ಟಿ ಸಿ ಗೆ ಅಶ್ವಮೇಧ ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಯೋಜನೆಗಳು ಹಾಗೂ ಗಣಕೀಕರಣ ಉಪಕ್ರಮಗಳಿಗಾಗಿ*ಮೂರು ಪ್ರಶಸ್ತಿಗಳು ಲಭಿಸಿರುತ್ತದೆ.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ ( ASRTU)ದ ವತಿಯಿಂದ ನವದೆಹಲಿಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಡಾ.. ಕಿರಣ್ ಬೇಡಿ IPS(ನಿವೃತ್ತ ) ರವರು ಪ್ರಶಸ್ತಿ ಪ್ರಧಾನ ಮಾಡಿದ್ದು, ಈ ಸಂದರ್ಭದಲ್ಲಿ ಪ್ರಿಯಾಂಗ ಭಾಆಸೇ, ವ್ಯವಸ್ಥಾಪಕ ನಿರ್ದೇಶಕರು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಸೂರ್ಯಕಿರಣ್, ನಿರ್ವಾಹಕ ನಿರ್ದೇಶಕರು , ASRTU ರವರು ಉಪಸ್ಥಿತರಿದ್ದು, ಗುರುರಾಜ ಹೆಚ್, ಉಪಮುಖ್ಯ ಸಂಚಾರ ವ್ಯವಸ್ಥಾಪಕರು ಹಾಗೂ ರಾಧ, ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ರವರು ನಿಗಮದ ಪರವಾಗಿ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ.
ಇದೆ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಸುಲೋಚನಾ ದೇವಿ ಚಾಲಕ ಕಂ ನಿರ್ವಹಕಿ, ಆನೇಕಲ್ ಘಟಕರವರು ಸಾರಿಗೆ ಸಂಸ್ಥೆಯಲ್ಲಿ ಸಲ್ಲಿಸಿರುವ 26 ವರ್ಷಗಳ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಗಿರುತ್ತದೆ.