ಶಿವಮೊಗ್ಗ: ಜಿಲ್ಲೆಯ ಸಾಗರ ಹಾಗೂ ಹೊಸನಗರ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಆಟ ಆಡಲಾಗುತ್ತಿದೆ. ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಕಾರಣ ರೈತರ ಬೆಳೆ ಒಣಗುತ್ತಿದ್ದರೇ, ಕುಡಿಯುವ ನೀರಿಗೂ ಆಹಾಹಾಕಾರ ಏಳುವಂತೆ ಆಗಿದೆ. ಇದನ್ನು ಖಂಡಿಸಿ ಇಂದು ಬೆಳಗ್ಗೆ 10 ಗಂಟೆಗೆ ಸಾಗರ ತಾಲ್ಲೂಕು ಬಿಜೆಪಿ ವತಿಯಿಂದ ಮೆಸ್ಕಾಂ ಕಚೇರಿ ಮುಂದೆ ಮಾಜಿ ಸಚಿವ ಹರತಾಳು ಹಾಲಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.
ಈ ಬಗ್ಗೆ ಸಾಗರ ತಾಲ್ಲೂಕು ಬಿಜೆಪಿ ಅಧ್ಯಕ್ಷ ಗಣೇಶ್ ಪ್ರಸಾದ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ದಿನಾಂಕ 10-03-2025ರ ಸೋಮವಾರದ ಇಂದು ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ಸಾಗರ ಮತ್ತು ಹೊಸನಗರ ಭಾಗದ ರೈತ ಬಾಂಧವರು ಅತಿಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಾಜಿ ಸಚಿವ ಹರತಾಳು ಹಾಲಪ್ಪ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ.
ಇಂದು ಬೆಳಗ್ಗೆ 10 ಗಂಟೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಅವರ ನೇತೃತ್ವದಲ್ಲಿ ಜೋಗ ರಸ್ತೆಯಲ್ಲಿರುವಂತ ಮೆಸ್ಕಾಂ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಗೊಳ್ಳಲಾಗಿದೆ. ಅಸಮರ್ಪಕ ವಿದ್ಯುತ್ ಪೂರೈಕೆಯನ್ನು ಖಂಡಿಸಿ, ಈ ಪ್ರತಿಭಟನೆ ಹಮ್ಮಿಕೊಂಡಿರೋದಾಗಿ ಹೇಳಿದ್ದಾರೆ.
ಇಂದಿನ ಬಿಜೆಪಿ ಪ್ರತಿಭಟನೆಯಲ್ಲಿ ಸ್ವಾಮಿ ರಾವ್, ಟಿ.ಡಿ ಮೇಘರಾಜ್, ದೇವೇಂದ್ರಪ್ಪ ಯಲಕುಂದ್ಲಿ, ರತ್ನಾಕರ ಹೊನಗೋಡು, ಸುರೇಶ್ ಸ್ವಾಮಿರಾವ್, ಪ್ರಸನ್ನ ಕೆರೆ ಕೈ, ಹಕ್ರೆ ಮಲ್ಲಿಕಾರ್ಜುನ್, ವೀರೇಶ್ ಆಲಹಳ್ಳಿ, ಡಾ.ರಾಜನಂದಿನಿ ಕಾಗೋಡು, ಸುಬ್ರಮಣಿ ಮತ್ತಿಮನೆ, ಗಣಪತಿ ಕರಂಬೆ ಮನೆ, ಆರ್.ಎಸ್ ಗಿರಿ, ಎನ್ ಆರ್ ದೇವಾನಂದ್ ಸೇರಿದಂತೆ ಇತರೆ ಬಿಜೆಪಿ ಮುಖಂಡರು ಭಾಗಿಯಾಗಲಿದ್ದಾರೆ.
ಸಾಗರದ ಮೆಸ್ಕಾಂ ಕಚೇರಿಯ ಮುಂಭಾಗದಲ್ಲಿ ಇಂದು ನಡೆಯುವಂತ ಬಿಜೆಪಿ ಪ್ರತಿಭಟನೆಯಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ