ಬೆಂಗಳೂರು : ರಾಜ್ಯದ ಎಲ್ಲಾ ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ ಇನ್ನು ಮುಂದೆ ಸೋಪು ಹಾಗೂ ಶಾಂಪೂ ಮಾರಾಟ ಮಾಡದಂತೆ ನಿಷೇಧಿಸಿ ಅರಣ್ಯ ಇಲಾಖೆ ಈ ಕುರಿತು ಆದೇಶ ಹೊರಡಿಸಿದೆ. ಹಾಗಾಗಿ ಇನ್ಮುಂದೆ ಪುಣ್ಯಕ್ಷೇತ್ರಗಳ ನದಿ ದಡದಲ್ಲಿ ಭಕ್ತರು ಯಾವುದೇ ರೀತಿಯಾಗಿ ಶಾಂಪು ಸೋಪು ಹಾಗೂ ಇತರೆ ಪರಿಸರ ಮಾಲಿನ್ಯಕಾರಕ ವಸ್ತುಗಳನ್ನು ಬಳಸುವಂತಿಲ್ಲ ಇವುಗಳ ಮಾರಾಟ ನಿಷೇಧ ಮಾಡಿ ಇದೀಗ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ.
ಈ ಕುರಿತು ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ಅವರು ಆದೇಶ ಹೊರಡಿಸಿದ್ದು, ನದಿ ದಡಗಳಲ್ಲಿ ಸೋಪು, ಶಾಂಪು ಮಾರಾಟ ಮಾಡದಂತೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ಅಲ್ಲಸದೆ ಭಕ್ತರಿಗೆ ಮಾಲಿನ್ಯಕಾರಕ ವಸ್ತುಗಳನ್ನು ನದಿಗಳಲ್ಲಿ ವಿಸರ್ಜನೆ ಮಾಡದಂತೆ ಸೂಚನೆ ನೀಡಲಾಗಿದೆ. ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.
ಅರಣ್ಯ ಮತ್ತು ಪರಿಸರ ಇಲಾಖೆ, ಈ ಕುರಿತು ಆದೇಶ ಹೊರಡಿಸಿದ್ದು, ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ ಸೋಪು ಮತ್ತು ಶಾಂಪು ಬಳಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆ ಇದೀಗ ಸೋಪು ಮತ್ತು ಶಾಂಪು ಮಾರಾಟ ನಿಷೇಧಗೊಳಿಸಿ ಆದೇಶ ಹೊರಡಿಸಿದೆ.