ಬೆಂಗಳೂರು : ‘ಗ್ರೇಟರ್ ಬೆಂಗಳೂರು’ ಕುರಿತು ಇಂದು ವಿಧಾನಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಹತ್ವದ ಗ್ರೇಟರ್ ಬೆಂಗಳೂರು ವಿಧೇಯಕ ವಿಧೇಯಕ ಮಂಡಿಸಿದ್ದಾರೆ.
ಗ್ರೇಟರ್ ಬೆಂಗಳೂರು ಎಂದರೇನು?
ಬೆಂಗಳೂರನ್ನು ಏಳು ಭಾಗವಾಗಿ ಅಥವಾ ಇರುವ ಒಂದು ಪಾಲಿಕೆಯನ್ನು 7 ಪಾಲಿಕೆಗಳನ್ನಾಗಿ ಮಾಡಲು ಸರ್ಕಾರ ಮುಂದಾಗಿದೆ. ಈ ಬೆಳವಣಿಗೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024 ಅನ್ನು ಸರ್ಕಾರ ಪರಿಚಯಿಸಿದೆ. ಇದರ ಅಡಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಆಗಲಿದೆ. ಬೆಂಗಳೂರಿಗೆ ಮೂರು ಹಂತದ ಆಡಳಿತ ನೀಡುವುದು ಇದರ ಉದ್ದೇಶವಾಗಿದೆ.ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಅವರ ಅಧ್ಯಕ್ಷತೆಯಲ್ಲಿ ಈ ಸಂಬಂಧ ಸರಣಿ ಸಭೆಗಳು ನಡೆದಿದ್ದವು. ಗ್ರೇಟರ್ ಬೆಂಗಳೂರು ಬಿಲ್ ಅನ್ನು ಈಚೆಗೆ ರಾಜ್ಯ ಸರ್ಕಾರವು ಪ್ರಸ್ತಾಪಿಸಿತ್ತು.