ಬೆಂಗಳೂರು : ವಿಧಾನಸಭೆಯಲ್ಲಿ ಮಹತ್ವದ ಗ್ರೇಟರ್ ಬೆಂಗಳೂರು ವಿಧೇಯಕ ಮಂಡನೆಯಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಇಂದು ಮಹತ್ವದ ಗ್ರೇಟರ್ ಬೆಂಗಳೂರು ವಿಧೇಯಕ ಮಂಡಿಸಿದ್ದಾರೆ. ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಗ್ರೇಟರ್ ಬೆಂಗಳೂರು ವಿಧೇಯಕ ಮಂಡಿಸಿದ ನಂತರ ಪೊಲೀಸರನ್ನು ಗ್ರೇಟರ್ ಬೆಂಗಳೂರು ಆಡಳಿತದ ಅಡಿ ತರಲು ಚಿಂತನೆ ನಡೆಸಲಾಗಿತ್ತಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ಗ್ರೇಟರ್ ಬೆಂಗಳೂರು ಅಧ್ಯಕ್ಷರಾಗಿ ಇರುತ್ತಾರೆ. ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ತೆರಿಗೆ ವಿಚಾರವನ್ನು ಕೂಡ ಇದರಲ್ಲಿ ಪ್ರಸ್ತಾಪ ಮಾಡಲಾಗಿದೆ. ಪೊಲೀಸರನ್ನು ಗ್ರೇಟರ್ ಬೆಂಗಳೂರು ಆಡಳಿತದ ಅಡಿ ತರಲು ಚಿಂತನೆ ನಡೆಸಲಾಗಿದೆ. ಬಿಡಿಎ ಅಧ್ಯಕ್ಷರು ಸಹ ಗ್ರೇಟರ್ ಬೆಂಗಳೂರು ಸದಸ್ಯರಾಗಿರುತ್ತಾರೆ. ಬಿಬಿಎಂಪಿ ಮುಖ್ಯ ಆಯುಕ್ತರು ಡಿಫ್ಯಾಕ್ಟೋ ಸದಸ್ಯರಾಗಿರುತ್ತಾರೆ. ಸದಸ್ಯರು ಹಾಗೂ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುತ್ತೇವೆ ಎಂದರು.
ವಿಶೇಷ ತಜ್ಞರ ಸಮಿತಿ ಮಾಡುತ್ತಿದ್ದೇವೆ. ಆರ್ ವೆಂಕಟೇಶ ಸಮಿತಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಇರುತ್ತದೆ. ಮೂಲಭೂತ ಸೌಕರ್ಯ ಸಾಮಾಜಿಕ ವ್ಯವಸ್ಥೆ ನಿರ್ವಹಣೆ ಸೇರಿದಂತೆ ಒಟ್ಟು 6 ಸಮಿತಿ ಇರಲಿದೆ. ಒಂದು ಪಾಲಿಕೆ ಕನಿಷ್ಠ 10 ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆ ಇರಬೇಕು. ಪಾಲಿಕೆ ಆದಾಯವನ್ನು ಸಹ ಪರಿಗಣಿಸಿ ವಿಂಗಡಣೆ ಮಾಡಬಹುದು. ಬಿಬಿಎಂಪಿ ಕೇಂದ್ರ, ದಕ್ಷಿಣ, ಉತ್ತರ ಹೀಗೆ ಬೆಂಗಳೂರು ಹೆಸರೇ ಇರುತ್ತದೆ. ಯಾವುದೇ ಖಾಸಗಿ ವ್ಯಕ್ತಿಯ ಹೆಸರನ್ನು ಪಾಲಿಕೆಗಳಿಗೆ ಇಡುವಂತಿಲ್ಲ ಎಂದು ತಿಳಿಸಿದರು.
ಗ್ರೇಟರ್ ಬೆಂಗಳೂರು ಎಂದರೇನು?
ಬೆಂಗಳೂರನ್ನು ಏಳು ಭಾಗವಾಗಿ ಅಥವಾ ಇರುವ ಒಂದು ಪಾಲಿಕೆಯನ್ನು 7 ಪಾಲಿಕೆಗಳನ್ನಾಗಿ ಮಾಡಲು ಸರ್ಕಾರ ಮುಂದಾಗಿದೆ. ಈ ಬೆಳವಣಿಗೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024 ಅನ್ನು ಸರ್ಕಾರ ಪರಿಚಯಿಸಿದೆ. ಇದರ ಅಡಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಆಗಲಿದೆ. ಬೆಂಗಳೂರಿಗೆ ಮೂರು ಹಂತದ ಆಡಳಿತ ನೀಡುವುದು ಇದರ ಉದ್ದೇಶವಾಗಿದೆ.ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಅವರ ಅಧ್ಯಕ್ಷತೆಯಲ್ಲಿ ಈ ಸಂಬಂಧ ಸರಣಿ ಸಭೆಗಳು ನಡೆದಿದ್ದವು. ಗ್ರೇಟರ್ ಬೆಂಗಳೂರು ಬಿಲ್ ಅನ್ನು ಈಚೆಗೆ ರಾಜ್ಯ ಸರ್ಕಾರವು ಪ್ರಸ್ತಾಪಿಸಿತ್ತು.