ಬೆಂಗಳೂರು : ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಎಡಿಜಿಪಿ ಚಂದ್ರಶೇಖರ್ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಆದೇಶ ನೀಡಿದೆ.
ಕೇಂದ್ರ ಸಚಿವ ಕುಮಾರಸ್ವಾಮಿಗೆ ಮಧ್ಯಂತರ ರಿಲೀಫ್ ವಿಸ್ತರಿಸಿದ ಹೈಕೋರ್ಟ್, ಮುಂದಿನ ವಿಚಾರಣೆ ಅವರಿಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಎಫ್ಐಆರ್ ಆಧರಿಸಿ ನಿರೀಕ್ಷಣಾ ಜಾಮೀನು ರದ್ದುಪಡಿಸಲು ಕೇಳುವಂತಿಲ್ಲ. 10 ವರ್ಷ ಹಳೆಯ ನಿರೀಕ್ಷಣಾ ಜಾಮೀನು ರದ್ದುಪಡಿಸಲು ಕೇಳುವಂತಿಲ್ಲ.
ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ಏಕ ಸದಸ್ಯ ಪೀಠದ ನಿಬಂಧ ವಿಸ್ತರಣೆ ಮಾಡಿದ್ದು, ನವೆಂಬರ್ 6ರ ನಿರ್ಬಂಧ ತಿರವಿಗೆ ಲೋಕಾಯುಕ್ತ ಪರ ವಕೀಲ ವೆಂಕಟೇಶ್ ಅರಬಟ್ಟಿ ಮನವಿ ಮಾಡಿದ್ದಾರೆ. ಈ ಬಗ್ಗೆ ಸೂಕ್ತ ಅರ್ಜಿ ಸಲ್ಲಿಸಿದರೆ ವಿಚಾರಣೆ ನಡೆಸಲಾಗುವುದು ಎಂದು ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಪೀಠ ಅಭಿಪ್ರಾಯ ವ್ಯಕ್ತಪಡಿಸಿತು.ಬಳಿಕ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿ ಆದೇಶ ಹೊರಡಿಸಿದರು.