Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಜನರ ಆಶೀರ್ವಾದ ಇರೋವರ್ಗು ನಾನೇ ‘CM’ : ಮುಂದಿನ ಬಜೆಟ್ ಸಹ ನಾನೇ ಮಂಡಿಸುತ್ತೇನೆ : ಸಿಎಂ ಸಿದ್ದರಾಮಯ್ಯ

20/11/2025 1:46 PM

ALERT : ಈ `ಪಾಸ್ ವರ್ಡ್’ಗಳನ್ನು ಬಳಸಿದ್ರೆ ನಿಮ್ಮ `ಡೇಟಾ ಲೀಕ್’ ಆಗಬಹುದು ಎಚ್ಚರ.!

20/11/2025 1:45 PM

BREAKING : ರಾಜ್ಯ ಸಚಿವ ಸಂಪುಟ ಪುನಾರಚನೆ ಸದ್ಯಕ್ಕಿಲ್ಲ : CM ಸಿದ್ದರಾಮಯ್ಯ ಸ್ಪಷ್ಟನೆ

20/11/2025 1:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: SSLC ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಪರೀಕ್ಷೆ-1ಕ್ಕೆ ಅಂತಿಮ ಪ್ರವೇಶ ಪತ್ರ ಬಿಡುಗಡೆ | Karnataka SSLC Exam
KARNATAKA

BREAKING: SSLC ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಪರೀಕ್ಷೆ-1ಕ್ಕೆ ಅಂತಿಮ ಪ್ರವೇಶ ಪತ್ರ ಬಿಡುಗಡೆ | Karnataka SSLC Exam

By kannadanewsnow0910/03/2025 7:51 PM

ಬೆಂಗಳೂರು: ಮಾರ್ಚ್, ಏಪ್ರಿಲ್ 2025ರಲ್ಲಿ ನಡೆಯುತ್ತಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ಹಾಜರಾಗುತ್ತಿರುವಂತ ವಿದ್ಯಾರ್ಥಿಗಳಿಗೆ ಅಂತಿಮ ಪ್ರವೇಶ ಪತ್ರವನ್ನು ವಿತರಣೆ ಮಾಡುತ್ತಿರುವುದಾಗಿ ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ.

ಈ ಬಗ್ಗೆ ಸುತ್ತೋಲೆಯಲ್ಲಿ ಮಾಹಿತಿ ನೀಡಿದ್ದು, 2025ರ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ದಿನಾಂಕ: 10.03.2025 ರಂದು ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ನಲ್ಲಿ ಅಪ್ ಲೋಡ್ ಮಾಡಲಾಗುವುದು. ಶಾಲಾ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಮಂಡಲಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿತರಿಸುವುದು.

1. ತಮ್ಮ ಶಾಲೆಯ ಮುಖಾಂತರ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆ, ಡೌನ್‌ಲೋಡ್ ಮಾಡಿಕೊಂಡ ಪ್ರವೇಶ ಪತ್ರಗಳ ಸಂಖ್ಯೆಗೆ ಸರಿ ಹೊಂದುತ್ತಿದೆಯೇ ಎಂದು ಪರಿಶೀಲಿಸಿಕೊಳ್ಳುವುದು. ಒಂದು ವೇಳೆ ಯಾವುದಾದರು ವಿದ್ಯಾರ್ಥಿಯ ಪ್ರವೇಶ ಪತ್ರ ಬಂದಿಲ್ಲದಿದ್ದರೆ, ಸದರಿ ವಿದ್ಯಾರ್ಥಿಯ ವಿವರವನ್ನು ಸಮರ್ಥನೆಯೊಂದಿಗೆ / ದಾಖಲೆಗಳೊಂದಿಗೆ ಕೂಡಲೇ ಮಂಡಲಿಗೆ ಕಳುಹಿಸಿಕೊಡುವುದು.

2. ಒಂದು ವೇಳೆ CCERF ವಿದ್ಯಾರ್ಥಿ CCEPF ಆಗಿದ್ದು, ಅಥವಾ CCEPF ವಿದ್ಯಾರ್ಥಿ CCERF ಆಗಿದ್ದು ಹೀಗೆ ವಿದ್ಯಾರ್ಥಿಯ ವಿಧ ಬದಲಾಗಿದ್ದಲ್ಲಿ ಅಂತಹ ಪುವೇಶ ಪತ್ರಗಳನ್ನು ಸೂಕ್ತ ದಾಖಲೆಗಳ ಸಮರ್ಥನೆಯೊಂದಿಗೆ ತಿದ್ದುಪಡಿಗಾಗಿ ಮಂಡಲಿಗೆ ಕಳುಹಿಸಿಕೊಡುವುದು.

3. ಉಲ್ಲೇಖಿತ-2ರ ಅಧಿಸೂಚನೆಯಲ್ಲಿ ವಿವರಿಸಿರುವಂತೆ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯ/ವಿನಾಯಿತಿ ನೀಡುವ ಸಂಬಂಧ ಉಪನಿರ್ದೇಶಕರ ಜ್ಞಾಪನದನ್ವಯ ದೈಹಿಕ ಸ್ಥಿತಿ, ಭಾಷಾ ವಿನಾಯಿತಿ, ಬದಲಿ ವಿಷಯಗಳ ಮಾಹಿತಿಗಳು ಪುವೇಶ ಪತ್ರದಲ್ಲಿ ಮುದ್ರಿತವಾಗಿರುವ ಬಗ್ಗೆ ಮುಖ್ಯಶಿಕ್ಷಕರು ಖಚಿತಪಡಿಸಿಕೊಳ್ಳುವುದು. ಇಲ್ಲವಾದಲ್ಲಿ ಉಪನಿರ್ದೇಶಕರ [ಆಡಳಿತ]ರವರ ಜ್ಞಾಪನದ ಪ್ರತಿಯನ್ನು ದೃಢೀಕರಿಸಿ ಸಮರ್ಥನೆಯೊಂದಿಗೆ ಸಂಬಂಧಿಸಿದ ಶಾಖಾಧಿಕಾರಿಗಳಿಗೆ ಕಳುಹಿಸಿ ವಿನಾಯಿತಿ ಪಡೆದುಕೊಳ್ಳುವುದು.

4. ವಿದ್ಯಾರ್ಥಿಯ ಭಾವಚಿತ್ರ ಸಹಿ ಮತ್ತು ಇತರ ತಿದ್ದುಪಡಿಗಳಿದಲ್ಲಿ ಸೂಕ್ತ ದಾಖಲೆಗಳೊಂದಿಗೆ ಮಂಡಲಿಗೆ ಸಲ್ಲಿಸಿ ಸರಿಪಡಿಸಿಕೊಳ್ಳುವುದು. ಒಂದು ವೇಳೆ ಸರಿಪಡಿಸಿಕೊಳ್ಳದೇ ಇದ್ದಲ್ಲಿ ಇದರಿಂದ ವಿದ್ಯಾರ್ಥಿಗೆ ಮುಂದೆ ಅಂಕಪಟ್ಟಿಯಲ್ಲಾಗುವ ತೊಂದರೆಗೆ ಸಂಬಂಧಿಸಿದ ಶಾಲಾ ಮುಖ್ಯಸ್ಥರೇ ಜವಾಬ್ದಾರರಾಗಿದ್ದು, ಮಂಡಲಿಯು ಇದರ ಜವಾಬ್ದಾರಿ ಹೊರುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ. 5. ಯಾವುದೇ ವಿದ್ಯಾರ್ಥಿಯ ಭಾವಚಿತ್ರ ಬದಲಾವಣೆಗೆ ಸಂಬಂಧಿಸಿದಂತೆ, ಪರೀಕ್ಷೆಗೆ ಪೂರ್ವದಲ್ಲಿ ಮಾಡಲಾದ ಬದಲಾವಣೆಗಳನ್ನು ಮಾತ್ರ ಮಂಡಲಿಯು ಪರಿಗಣಿಸುತ್ತದೆ. ಪರೀಕ್ಷಾ ನಂತರದಲ್ಲಿ ಬರುವ ವಿದ್ಯಾರ್ಥಿಗಳ ಭಾವಚಿತ್ರ ಬದಲಾವಣೆ ಕುರಿತ ಯಾವುದೇ ಮನವಿಗಳನ್ನು ಮಂಡಲಿ ಪುರಸ್ಕರಿಸುವುದಿಲ್ಲ. ಇದಕ್ಕೆ ಸಂಬಂಧಿಸಿದ ಶಾಲಾ ಮುಖ್ಯಸ್ಥರು ಹಾಗೂ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರುಗಳು ನೇರ ಜವಾಬ್ದಾರರಾಗಿರುತ್ತಾರೆ. ಒಂದು ವೇಳೆ ಇದಕ್ಕೆ ವ್ಯತಿರಿಕ್ತವಾಗಿ ಬದಲಿ, ವಿದ್ಯಾರ್ಥಿ ಪರೀಕ್ಷೆ ಬರೆಯಲು ಸಹಕರಿಸಿ ಪರೀಕ್ಷಾ ಅವ್ಯವಹಾರದಲ್ಲಿ ಭಾಗಿಯಾಗಿದಲ್ಲಿ ಸಂಬಂಧಿಸಿದ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರ ಮತ್ತು ಶಾಲಾ ಮುಖ್ಯಸ್ಥರ ಮೇಲೆ ಕೆ.ಸಿ.ಎಸ್ (ಸಿ.ಸಿ.ಎ.) ನಿಯಮ-1957 ಮತ್ತು 1983ರ ಕರ್ನಾಟಕ ಶಿಕ್ಷಣ ಕಾಯ್ದೆ ಹಾಗೂ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಕಾಯ್ದೆ-1966 ರನ್ವಯ ಕಮ `ಜರುಗಿಸಲಾಗುವುದು.

6. ಒಂದೇ, ವಿದ್ಯಾರ್ಥಿಗೆ ಎರಡು ನೋಂದಣಿ ಸಂಖ್ಯೆಯ ಪ್ರವೇಶ ಪತ್ರಗಳು ಬಂದಿದ್ದಲ್ಲಿ ಒಂದನ್ನು ಉಳಿಸಿಕೊಂಡು ಮತ್ತೊಂದನ್ನು ರದ್ದುಪಡಿಸಿ ದೃಢೀಕರಿಸಿ ಸೂಕ್ತ ಷರಾದೊಂದಿಗೆ ಪರಿಶೀಲನಾ ಶಾಖೆಯ ಶಾಖಾಧಿಕಾರಿಗಳ ವಿಳಾಸಕ್ಕೆ ಹಿಂದಿರುಗಿಸುವುದು.

7. CCERF, CCERR, CCEPF & CCEPR ಅಭ್ಯರ್ಥಿಗಳನ್ನು ಸಾಮಾನ್ಯ ಪರೀಕ್ಷಾ ಕೇಂದ್ರಗಳಲ್ಲಿ ಹಂಚಿಕೆ ಮಾಡಲಾಗಿರುತ್ತದೆ. ಶಾಲಾ ಮುಖ್ಯ ಶಿಕ್ಷಕರು ಸಂಬಂಧಿಸಿದ ವಿದ್ಯಾರ್ಥಿಗಳಿಗೆ ಈ ಕುರಿತು ಮಾಹಿತಿಯನ್ನು ನೀಡುವುದು.

8. ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರಗಳಲ್ಲಿ ವಿದ್ಯಾಥಿಯ ಹೆಸರು, ತಂದೆ ಹೆಸರು, ತಾಯಿ ಹೆಸರು, ಭಾವಚಿತ್ರ, ಸಹಿ, ಇತರ ತಿದ್ದುಪಡಿಗಳಿದ್ದಲ್ಲಿ, CCERF ವಿದ್ಯಾರ್ಥಿಗಳಿಗೆ . ಎಸ್.ಎ.ಟಿ.ಎಸ್ ನಲ್ಲಿ ತಿದ್ದುಪಡಿ ಮಾಡಿದ ಪ್ರತಿಯೊಂದಿಗೆ ಮತ್ತು ಇತರೆ ದಾಖಲೆಗಳೊಂದಿಗೆ ಪ್ರತಿ ತಿದ್ದುಪಡಿಗೆ ರೂ.100/- ದಂಡ ಶುಲ್ಕ ಹಾಗೂ ಮಾಧ್ಯಮ ಬದಲಾವಣೆ ಇದಲ್ಲಿ ಪ್ರತಿ ತಿದ್ದುಪಡಿಗೆ ಮಂಡಲಿ ನಿಯಮ 1966ರ Annexure-III ರ ನಿಯಮ 24ರಡಿ ರೂ.500/- ದಂಡ ಶುಲ್ಕವನ್ನು ನೆಫ್ಟ್ ಚಲನ್ ಮೂಲಕ ಪಾವತಿಸಿ ದಿನಾಂಕ: 17.03.2025 ರ ಸಂಜೆ 5.00 ಗಂಟೆಯೊಳಗೆ ಮಂಡಳಿಗೆ ತಲುಪುವಂತೆ ಪ್ರಸ್ತಾವನೆಯನ್ನು ಸಲ್ಲಿಸುವುದು.

9. ಯಾವುದೇ ಅಭ್ಯರ್ಥಿಯು ತಿದ್ದುಪಡಿಗಳಿಗಾಗಿ ಮಂಡಲಿಗೆ ಪ್ರಸ್ತಾವನೆ ಸಲ್ಲಿಸಿದ್ದಲ್ಲಿ (ವಿಷಯ, ಮಾಧ್ಯಮ, ದೈಹಿಕ ಸ್ಥಿತಿ, ಭಾವಚಿತ್ರ ಹಾಗೂ ಸಹಿ) ಅಂತಹ ಅಭ್ಯರ್ಥಿಗಳ Updated Final Admission Ticket Final Admission Ticket for 2025 SSLC Exam- 1 (Student Wise) sub-menu 22 download ŽOKJW).

10. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಾಯ್ದೆ – 1966 Chapter Vi -ನಿಯಮ 36 ಮತ್ತು 37ರನ್ವಯ ಮಾನ್ಯತೆ ಪಡೆದ ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ನೋಂದಾಯಿಸಲು ಅವಕಾಶವಿರುತ್ತದೆ. ಆದರೆ ಈ ದಿನಾಂಕದವರೆವಿಗೂ ಕೆಲವು ‘ಪ್ರೌಢಶಾಲೆಗಳು 2024-25ನೇ ಸಾಲಿಗೆ ಮಾನ್ಯತೆ ನವೀಕರಣವಾಗದಿರುವುದು ಕಂಡುಬಂದಿರುತ್ತದೆ. ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ರವರ ಸುತ್ತೋಲೆ ODPI-CPI0C7-2/14/2024-E-1469456 ದಿನಾಂಕ:28.02.2025ರನ್ವಯ ಶಾಲಾ ಆಡಳಿತ ಮಂಡಲಿಗಳಿಗೆ ಮಾನ್ಯತೆ ನವೀಕರಣಕ್ಕೆ ಪ್ರಸ್ತಾವನೆ ಸಲ್ಲಿಸಲು ದಿನಾಂಕ:20.03.2025ರವರೆಗೆ ಅವಕಾಶ ಕಲ್ಪಿಸಲಾಗಿರುತ್ತದೆ. ಆದರೆ, ರಿಂದ ಪರೀಕ್ಷೆ-1 ಪ್ರಾರಂಭವಾಗಲಿದ್ದು, ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗದಂತೆ ಹಾಗೂ ಅವರ ಮುಂದಿನ ಶೈಕ್ಷಣಿಕ ವಿದ್ಯಾಭ್ಯಾಸದ ಹಿತದೃಷ್ಟಿಯಿಂದ ಅಂತಹ ಶಾಲೆಗಳ ವಿದ್ಯಾರ್ಥಿಗಳನ್ನು ಪರೀಕ್ಷೆ-1ಕ್ಕೆ ಅದೇ ಶಾಲೆಯಿಂದ ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರಗಳನ್ನು ಉಲ್ಲೇಖ-1ರಲ್ಲಿ ಸರ್ಕಾರ ಅನುಮತಿಸಿರುವಂತೆ ಅದೇ ಶಾಲೆಗೆ ಬಿಡುಗಡೆ ಮಾಡಲಾಗಿದೆ. ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಣೆಮಾಡುವ ದಿನಾಂಕದೊಳಗೆ ಮಾನ್ಯತೆ ನವೀಕರಣವಾಗದ ಶಾಲೆಗಳು 2024-25ನೇ ಸಾಲಿನ ಮಾನ್ಯತೆ ನವೀಕರಣ ಪ್ರತಿಯನ್ನು ಸಂಬಂಧಪಟ್ಟ ಪ್ರಾಧಿಕಾರದಿಂದ ಪಡೆದು ಸಲ್ಲಿಸಿದ್ದಲ್ಲಿ ಫಲಿತಾಂಶವನ್ನು ಅದೇ ಶಾಲೆಗೆ ಬಿಡುಗಡೆ ಮಾಡಲಾಗುವುದು. ಇಲ್ಲವಾದಲ್ಲಿ ಸದರಿ ಶಾಲೆಗಳ ಪರೀಕ್ಷೆ-1ರ ಫಲಿತಾಂಶವನ್ನು ಉಪನಿರ್ದೇಶಕರು (ಆಡಳಿತ)ರವರು ಸೂಚಿಸುವ ಹತ್ತಿರದ ಸರ್ಕಾರಿ ಅಥವಾ ಮಾನ್ಯತೆ ಪಡೆದ ಶಾಲೆಗಳ ಮುಖಾಂತರ ಫಲಿತಾಂಶ ಪ್ರಕಟಿಸಲಾಗುವುದು ಎಂದಿದೆ.

‘ಸಾರಿಗೆ ಇಲಾಖೆ’ಯಲ್ಲಿನ ಭ್ರಷ್ಟಾಚಾರ ಸಹಿಸುವುದಿಲ್ಲ: ‘RTO’ಗಳಿಗೆ ‘ಸಚಿವ ರಾಮಲಿಂಗಾರೆಡ್ಡಿ’ ವಾರ್ನಿಂಗ್

BIG NEWS: ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಕರ್ತವ್ಯ ನಿರ್ವಹಣೆ ಕಡ್ಡಾಯ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್

Share. Facebook Twitter LinkedIn WhatsApp Email

Related Posts

BIG NEWS : ಜನರ ಆಶೀರ್ವಾದ ಇರೋವರ್ಗು ನಾನೇ ‘CM’ : ಮುಂದಿನ ಬಜೆಟ್ ಸಹ ನಾನೇ ಮಂಡಿಸುತ್ತೇನೆ : ಸಿಎಂ ಸಿದ್ದರಾಮಯ್ಯ

20/11/2025 1:46 PM1 Min Read

ALERT : ಈ `ಪಾಸ್ ವರ್ಡ್’ಗಳನ್ನು ಬಳಸಿದ್ರೆ ನಿಮ್ಮ `ಡೇಟಾ ಲೀಕ್’ ಆಗಬಹುದು ಎಚ್ಚರ.!

20/11/2025 1:45 PM1 Min Read

BREAKING : ರಾಜ್ಯ ಸಚಿವ ಸಂಪುಟ ಪುನಾರಚನೆ ಸದ್ಯಕ್ಕಿಲ್ಲ : CM ಸಿದ್ದರಾಮಯ್ಯ ಸ್ಪಷ್ಟನೆ

20/11/2025 1:42 PM1 Min Read
Recent News

BIG NEWS : ಜನರ ಆಶೀರ್ವಾದ ಇರೋವರ್ಗು ನಾನೇ ‘CM’ : ಮುಂದಿನ ಬಜೆಟ್ ಸಹ ನಾನೇ ಮಂಡಿಸುತ್ತೇನೆ : ಸಿಎಂ ಸಿದ್ದರಾಮಯ್ಯ

20/11/2025 1:46 PM

ALERT : ಈ `ಪಾಸ್ ವರ್ಡ್’ಗಳನ್ನು ಬಳಸಿದ್ರೆ ನಿಮ್ಮ `ಡೇಟಾ ಲೀಕ್’ ಆಗಬಹುದು ಎಚ್ಚರ.!

20/11/2025 1:45 PM

BREAKING : ರಾಜ್ಯ ಸಚಿವ ಸಂಪುಟ ಪುನಾರಚನೆ ಸದ್ಯಕ್ಕಿಲ್ಲ : CM ಸಿದ್ದರಾಮಯ್ಯ ಸ್ಪಷ್ಟನೆ

20/11/2025 1:42 PM

BIG NEWS : `ಬೆಂಗಳೂರು ಟೆಕ್ ಸಮ್ಮಿಟ್’ನಲ್ಲಿ 2,600 ಕೋಟಿ ರೂ. ಮೌಲ್ಯದ ಒಡಂಬಡಿಕೆ : 3,500 ಉದ್ಯೋಗ ಸೃಷ್ಟಿ

20/11/2025 1:40 PM
State News
KARNATAKA

BIG NEWS : ಜನರ ಆಶೀರ್ವಾದ ಇರೋವರ್ಗು ನಾನೇ ‘CM’ : ಮುಂದಿನ ಬಜೆಟ್ ಸಹ ನಾನೇ ಮಂಡಿಸುತ್ತೇನೆ : ಸಿಎಂ ಸಿದ್ದರಾಮಯ್ಯ

By kannadanewsnow0520/11/2025 1:46 PM KARNATAKA 1 Min Read

ಚಾಮರಾಜನಗರ : ರಾಜ್ಯದಲ್ಲಿ ನವೆಂಬರ್ಕ್ರಾಂತಿ ಆಗಲಿದೆ ನಾಯಕತ್ವ ಬದಲಾವಣೆ ಆಗಲಿದೆ ಎಂದು ಕಾಂಗ್ರೆಸ್ ಬಿಜೆಪಿ ನಾಯಕರು ಇತ್ತೀಚಿಗೆ ಈ ಹೇಳಿಕೆಗಳನ್ನು…

ALERT : ಈ `ಪಾಸ್ ವರ್ಡ್’ಗಳನ್ನು ಬಳಸಿದ್ರೆ ನಿಮ್ಮ `ಡೇಟಾ ಲೀಕ್’ ಆಗಬಹುದು ಎಚ್ಚರ.!

20/11/2025 1:45 PM

BREAKING : ರಾಜ್ಯ ಸಚಿವ ಸಂಪುಟ ಪುನಾರಚನೆ ಸದ್ಯಕ್ಕಿಲ್ಲ : CM ಸಿದ್ದರಾಮಯ್ಯ ಸ್ಪಷ್ಟನೆ

20/11/2025 1:42 PM

BIG NEWS : `ಬೆಂಗಳೂರು ಟೆಕ್ ಸಮ್ಮಿಟ್’ನಲ್ಲಿ 2,600 ಕೋಟಿ ರೂ. ಮೌಲ್ಯದ ಒಡಂಬಡಿಕೆ : 3,500 ಉದ್ಯೋಗ ಸೃಷ್ಟಿ

20/11/2025 1:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.