Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತಾತ್ಕಾಲಿಕ ಕದನ ವಿರಾಮಕ್ಕೆ ಒಪ್ಪದ ಇರಾನ್: ಹಾರ್ಮುಜ್ ಜಲಸಂಧಿ ತೆರೆಯಲು ನಕಾರ!

06/04/2026 2:50 PM

ಸಾಮಾಜಿಕ ಜಾಲತಾಣದ ‘ಸ್ನೇಹ’ದ ಬಗ್ಗೆ ಇರಲಿ ಎಚ್ಚರ: ಬೆಳಗಾವಿಯ ಈ ಘಟನೆ ನಿಮಗೊಂದು ಪಾಠ!

06/04/2026 2:42 PM

ರಾಜ್ಯದ ರೈತರ ಗಮನಕ್ಕೆ: ಇನ್ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ‘FID ಸಂಖ್ಯೆ’ ಕಡ್ಡಾಯ

06/04/2026 2:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 2024-25ನೇ ಸಾಲಿನ `ಶಿಕ್ಷಕರ ಸಾಮಾನ್ಯ ವರ್ಗಾವಣೆ’ : ಶಿಕ್ಷಣ ಇಲಾಖೆ ಮಹತ್ವದ ಆದೇಶ | Teacher transfer
KARNATAKA

BIG NEWS : 2024-25ನೇ ಸಾಲಿನ `ಶಿಕ್ಷಕರ ಸಾಮಾನ್ಯ ವರ್ಗಾವಣೆ’ : ಶಿಕ್ಷಣ ಇಲಾಖೆ ಮಹತ್ವದ ಆದೇಶ | Teacher transfer

By kannadanewsnow5711/03/2025 6:25 AM

ಬೆಂಗಳೂರು : 2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ ಪೂರ್ವಭಾವಿ ಚಟುವಟಿಕೆಗಳ ಭಾಗವಾಗಿ ಡಿಸೆಂಬರ್ 2024ರ ಅಂತ್ಯಕ್ಕೆ ಶಿಕ್ಷಕರ ವೇಟೆಡ್ ಅಂಕಗಳನ್ನು (Weighted score) ತಂತ್ರಾಂಶದಲ್ಲಿ ಪ್ರಕಟಿಸಿರುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ ಮತ್ತು ಉಲ್ಲೇಖಗಳನ್ವಯ, 2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಸಂಬಂಧ ದತ್ತಾಂಶಗಳ ಇಂದೀಕರಣ, ಶಿಕ್ಷಕರ ವೇಟೆಡ್ ಅಂಕಗಳ ಪ್ರಕಟಣೆ, ಆಕ್ಷೇಪಣೆ ಸ್ವೀಕಾರ, ಸದರಿ ಆಕ್ಷೇಪಣೆಗಳನ್ನು ಡಿ.ಡಿ.ಒ ರವರು ದಾಖಲೆಗಳೊಂದಿಗೆ ಪರಿಶೀಲನೆ ಮತ್ತು ಸರಿಯಾದ ಮಾಹಿತಿಯನ್ನು ತಂತ್ರಾಂಶದಲ್ಲಿ ಇಂದೀಕರಣ ಮಾಡಬೇಕಾಗಿರುತ್ತದೆ. ತದನಂತರ ದತ್ತಾಂಶಗಳನ್ನು ಸ್ಥಿರೀಕರಿಸಿ ಮುಂದಿನ ಚಟುವಟಿಕೆಗಳಾದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಒಳಬರುವವರಿಗೆ ಆಯ್ಕೆ ಪ್ರಕ್ರಿಯೆ, ಹುದ್ದೆಗಳ ಸರ್ಮಪಕ ಮರುಹಂಚಿಕೆ(Rationalisation), ತದನಂತರ ಸಾಮಾನ್ಯ ವರ್ಗಾವಣೆಗೆ ವೇಳಾಪಟ್ಟಿ ಬಿಡುಗಡೆ ಮಾಡಬೇಕಾಗಿದೆ.

ಇದರ ಭಾಗವಾಗಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ನಿಯಮಗಳು, 2020ರ ನಿಯಮ 4ರಂತೆ, ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ / ಪ್ರೌಢಶಾಲಾ ಸಹಶಿಕ್ಷಕರ ಮತ್ತು ಮುಖ್ಯ ಶಿಕ್ಷಕರುಗಳ, ಡಿಸೆಂಬ‌ರ್ ತಿಂಗಳವರೆಗೂ ನವೀಕರಿಸಿದ ಶಿಕ್ಷಕರ ಸೇವಾ ವಿವರದ ಆಧಾರದ ಮೇಲೆ ಗಣನೆಗೆ ತೆಗೆದುಕೊಂಡು ಕರಡು ವೇಟೆಡ್ ಅಂಕಗಳನ್ನು ಪ್ರಕಟಿಸಬೇಕಾಗಿರುತ್ತದೆ. ಅದರಂತೆ ಡಿಸೆಂಬರ್ 2024ರ ಅಂತ್ಯಕ್ಕೆ ಶಿಕ್ಷಕರ ಕರಡು ಸೇವಾ ಅಂಕಗಳನ್ನು (weighted score) ಇ.ಇ.ಡಿ.ಎಸ್. ತಂತ್ರಾಂಶದಲ್ಲಿನ ಶಿಕ್ಷಕರ ಲಾಗಿನ್, ಶಿಕ್ಷಕರ ವರ್ಗಾವಣಾ ತಂತ್ರಾಂಶದ BEO ರವರ ಲಾಗಿನ್ ಹಾಗೂ ಇಲಾಖಾ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಪ್ರಕಟಿತ ಸೇವಾ ಅಂಕಗಳನ್ನು (weighted score), ಪರಿಶೀಲಿಸಿಕೊಳ್ಳಲು ಎಲ್ಲಾ ಶಿಕ್ಷಕರುಗಳಿಗೆ ಸಂಬಂಧಿತ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಡಿ.ಡಿ.ಒ ರವರು ಮಾಹಿತಿ ನೀಡುವುದು. ಎಲ್ಲಾ ಶಿಕ್ಷಕರು ತಮ್ಮ ಸೇವಾ ಅಂಕಗಳನ್ನು ಪರಿಶೀಲಿಸಿಕೊಂಡು ಯಾವುದೇ ವ್ಯತ್ಯಾಸಗಳು ಇದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ / ವೇತನ ಬಟವಾಡೆ ಮಾಡುವ ಅಧಿಕಾರಿಗಳಿಗೆ (DDO) ಸೇವಾ ಅಂಕಗಳನ್ನು ಸರಿಪಡಿಸಿಕೊಳ್ಳಲು ಅಗತ್ಯ ದಾಖಲೆಗಳನ್ನು ಸಲ್ಲಿಸಲು ತಿಳಿಸಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು / ವೇತನ ಬಟವಾಡೆ ಮಾಡುವ ಅಧಿಕಾರಿಗಳು (DDO) ಶಿಕ್ಷಕರು ಸಲ್ಲಿಸಿದ ದಾಖಲೆಗಳನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ತಿದ್ದುಪಡಿ ಮಾಡುವುದು ಮತ್ತು ಶಿಕ್ಷಕರು ಸಲ್ಲಿಸಿದ ದಾಖಲೆಗಳನ್ನು ಹಾಗೂ ತಿದ್ದುಪಡಿ ಮಾಡಿ ಸರಿಪಡಿಸಿದ ಮಾಹಿತಿಯನ್ನು ತಮ್ಮಲ್ಲಿ ಕಾಯ್ದಿರಿಸಿಕೊಂಡು ಮುಂದಿನ ದಿನಗಳಲ್ಲಿ ಅಗತ್ಯವಿದ್ದಲ್ಲಿ ಹಾಜರುಪಡಿಸಲು ಸೂಚಿಸಿದೆ.

BIG NEWS: General Transfer of Teachers for the year 2024-25: Important order from the Education Department!
Share. Facebook Twitter LinkedIn WhatsApp Email

Related Posts

ಸಾಮಾಜಿಕ ಜಾಲತಾಣದ ‘ಸ್ನೇಹ’ದ ಬಗ್ಗೆ ಇರಲಿ ಎಚ್ಚರ: ಬೆಳಗಾವಿಯ ಈ ಘಟನೆ ನಿಮಗೊಂದು ಪಾಠ!

06/04/2026 2:42 PM2 Mins Read

ರಾಜ್ಯದ ರೈತರ ಗಮನಕ್ಕೆ: ಇನ್ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ‘FID ಸಂಖ್ಯೆ’ ಕಡ್ಡಾಯ

06/04/2026 2:32 PM1 Min Read

BIG NEWS: ಭ್ರಷ್ಟಾಚಾರಿಗೆ ಕೋರ್ಟ್ ಶಾಕ್: ಲಂಚ ಪಡೆದಿದ್ದ ಸರ್ಕಾರಿ ಅಧಿಕಾರಿಗೆ 2 ವರ್ಷ ಜೈಲು ಶಿಕ್ಷೆ, 40,000 ದಂಡ

06/04/2026 2:24 PM2 Mins Read
Recent News

ತಾತ್ಕಾಲಿಕ ಕದನ ವಿರಾಮಕ್ಕೆ ಒಪ್ಪದ ಇರಾನ್: ಹಾರ್ಮುಜ್ ಜಲಸಂಧಿ ತೆರೆಯಲು ನಕಾರ!

06/04/2026 2:50 PM

ಸಾಮಾಜಿಕ ಜಾಲತಾಣದ ‘ಸ್ನೇಹ’ದ ಬಗ್ಗೆ ಇರಲಿ ಎಚ್ಚರ: ಬೆಳಗಾವಿಯ ಈ ಘಟನೆ ನಿಮಗೊಂದು ಪಾಠ!

06/04/2026 2:42 PM

ರಾಜ್ಯದ ರೈತರ ಗಮನಕ್ಕೆ: ಇನ್ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ‘FID ಸಂಖ್ಯೆ’ ಕಡ್ಡಾಯ

06/04/2026 2:32 PM

BIG NEWS: ಭ್ರಷ್ಟಾಚಾರಿಗೆ ಕೋರ್ಟ್ ಶಾಕ್: ಲಂಚ ಪಡೆದಿದ್ದ ಸರ್ಕಾರಿ ಅಧಿಕಾರಿಗೆ 2 ವರ್ಷ ಜೈಲು ಶಿಕ್ಷೆ, 40,000 ದಂಡ

06/04/2026 2:24 PM
State News
KARNATAKA

ಸಾಮಾಜಿಕ ಜಾಲತಾಣದ ‘ಸ್ನೇಹ’ದ ಬಗ್ಗೆ ಇರಲಿ ಎಚ್ಚರ: ಬೆಳಗಾವಿಯ ಈ ಘಟನೆ ನಿಮಗೊಂದು ಪಾಠ!

By kannadanewsnow0906/04/2026 2:42 PM KARNATAKA 2 Mins Read

ಬೆಳಗಾವಿ: “ಪ್ರೀತಿ ಕುರುಡು” ಎನ್ನುವ ಮಾತಿದೆ. ಆದರೆ ಇಂದಿನ ಕಾಲದಲ್ಲಿ ಪ್ರೀತಿಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಗಳನ್ನು ನೋಡಿದರೆ, ಪ್ರೀತಿ ಮಾಡುವಾಗ…

ರಾಜ್ಯದ ರೈತರ ಗಮನಕ್ಕೆ: ಇನ್ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ‘FID ಸಂಖ್ಯೆ’ ಕಡ್ಡಾಯ

06/04/2026 2:32 PM

BIG NEWS: ಭ್ರಷ್ಟಾಚಾರಿಗೆ ಕೋರ್ಟ್ ಶಾಕ್: ಲಂಚ ಪಡೆದಿದ್ದ ಸರ್ಕಾರಿ ಅಧಿಕಾರಿಗೆ 2 ವರ್ಷ ಜೈಲು ಶಿಕ್ಷೆ, 40,000 ದಂಡ

06/04/2026 2:24 PM

PUC ಬಳಿಕ ಯಾವ ಕೋರ್ಸ್ ಆಯ್ಕೆ ಮಾಡಬೇಕು ಎನ್ನುವ ಗೊಂದಲದಲ್ಲಿದ್ದೀರಾ? : ಹಾಗಾದ್ರೆ ಇಲ್ಲಿದೆ ಉಪಯುಕ್ತ ಮಾಹಿತಿ!

06/04/2026 2:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.