ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ ಬೆಳಕಿಗೆ ಬಂದಿದ್ದು, ಬಾಲಕಿಯನ್ನು ಪುಸಲಾಯಿಸಿ ಗರ್ಭಿಣಿ ಮಾಡಿದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಬೆಳಗಾವಿಯ ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬಸಪ್ಪ ಅಡಿವೆಪ್ಪ ಹಳ್ಳೂರ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈತನಿಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ.
ಬಾಲಕಿಯೊಂದಿಗೆ ನಿರಂತರ ದೈಹಿಕ ಸಂಪರ್ಕ ಬೆಳೆಸಿದ ಹಿನ್ನೆಲೆ ಬಾಲಕಿ 8 ತಿಂಗಳ ಗರ್ಭಿಣಿಯಾಗಿದ್ದಾಳೆ. ಆಸ್ಪತ್ರೆಗೆ ಬಾಲಕಿಯನ್ನು ಕರೆದುಕೊಂಡು ಹೋಗಿ ಪರೀಕ್ಷೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.