ಬೆಂಗಳೂರು : ಕಳೆದ ವರ್ಷ ಬೆಂಗಳೂರಿನಲ್ಲಿ ಪಾಕಿಸ್ತಾನ ಪ್ರಜೆಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಕೋರ್ಟಿಗೆ ಜಿಗಣಿ ಠಾಣೆ ಪೊಲೀಸರು ಜಾರ್ಜ್ ಶೀಟ್ ಸಲ್ಲಿಸಿದ್ದಾರೆ.ಆನೇಕಲ್ ನ ಜಿಗಣಿ ಪೊಲೀಸ್ ಠಾಣೆಯಲ್ಲಿ ಪಾಕಿಸ್ತಾನ ಪ್ರಜೆಗಳ ಬಂಧನ ಕುರಿತು ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ 10 ಆರೋಪಿಗಳ ವಿರುದ್ಧ ಇದೀಗ 1,200 ಪುಟಗಳಷ್ಟು ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಕರಣ ಹಿನ್ನೆಲೆ?
ಕಳೆದ ಡಿಸೇಂಬರ್ ನಲ್ಲಿ ಆನೇಕಲ್ ತಾಲ್ಲೂಕಿನ ಜಿಗಣಿಯಲ್ಲಿ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ ಆರೋಪದ ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರು 1200 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಆರೋಪಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು, ಯೂಟ್ಯೂಬ್ ಮೂಲಕ ಧರ್ಮ ಪ್ರಚಾರ ಮಾಡುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ಪಾಕಿಸ್ತಾನದ ಶಾಶ್ವತ ನಿವಾಸ ಪ್ರಮಾಣಪತ್ರಗಳು ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಮುಸ್ಲಿಂ ಹೆಸರುಗಳನ್ನ ಹಿಂದೂಗಳ ಹೆಸರುಗಳನ್ನಾಗಿ ಬದಲಿಸಿಕೊಂಡು, ದೆಹಲಿ, ಬೆಂಗಳೂರು, ಹೈದರಾಬಾದ್ ಸೇರಿ ಹಲವೆಡೆ ವಾಸವಾಗಿದ್ದರು. ಕಳೆದ ಮೂರ್ನಾಲ್ಕು ವರ್ಷಗಳ ಹಿಂದೆ ರಾಜ್ಯಕ್ಕೆ ಬಂದಿದ್ದ ಪಾಕಿಸ್ತಾನ ಪ್ರಜೆಗಳು ದಾವಣಗೆರೆ ನಂತರ ಬೆಂಗಳೂರಿಗೆ ಬಂದು ನೆಲೆಸಿದ್ದಾರೆ.ಬೆಂಗಳೂರಿನ ಆನೇಕಲ್ ಸಮೀಪದ ಜಿಗಣಿ ಹಾಗೂ ಪೀಣ್ಯದಲ್ಲಿ ನೆಲೆಸಿದ್ದ ಆರೋಪಿಗಳು, ಯೂಟ್ಯೂಬ್ ಚಾನೆಲ್ನಲ್ಲಿ ಧರ್ಮ ಬೋಧನೆ ಮಾಡುತ್ತಿದ್ದರು. ತಮ್ಮದೇ ಯೂಟ್ಯೂಬ್ ತೆರೆದು ಅದರಲ್ಲಿ ಧರ್ಮ ಪ್ರಚೋದನೆಯಲ್ಲಿ ತೊಡಗಿದ್ದರು. ಆರೋಪಿಗಳೆಲ್ಲರೂ ಮೆಹದಿ ಫೌಂಡೇಶನ್ನ ಸದಸ್ಯರಾಗಿದ್ದಾರೆ ಎಂದು ದೋಷಾರೋ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.