ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ಸಾಗರ ತಾಲೂಕಿನ ಬಿ ಎಚ್ ರಸ್ತೆಯಲ್ಲಿರುವ ಕಾಂಪ್ಲೆಕ್ಸ್ ನಲ್ಲಿ ಆಕಸ್ಮಿಕ ಅಗ್ನಿ ದುರಂತದಿಂದ ಸಂಪೂರ್ಣವಾಗಿ ಕಾಂಪ್ಲೆಕ್ಸ್ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಹೌದು ಶಿವಮೊಗ್ಗ ಜಿಲ್ಲೆಯ ಸಾಗರದ ಬಿಹೆಚ್ ರಸ್ತೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸ್ಲಾಬ್ ನಲ್ಲಿ ಬೆಂಕಿ ಕಾಣಿಸಿಕೊಂಡು ಕಾಂಪ್ಲೆಕ್ಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಉರ್ದು ಶಾಲೆಯ ಮುಂಭಾಗದ ಕಾಂಪ್ಲೆಕ್ಸ್ ನಲ್ಲಿ ಈ ಒಂದು ಘಟನೆ ನಡೆದಿದೆ. ಕಾಂಪ್ಲೆಕ್ಸ್ ನಲ್ಲಿದ್ದ ಎಲ್ಲಾ ವಸ್ತುಗಳು ಸುಟ್ಟು ಭಸ್ಮವಾಗಿವೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.