ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಅವರನ್ನು ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಅವರು ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ನಾಳೆಗೆ ಮುಂದೂಡಿಕೆ ಮಾಡಲಾಗಿದೆ.
ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ ಸಂಬಂಧ ನಟಿ ರನ್ಯಾ ರಾವ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಕೋರ್ಟ್ ನಡೆಸಿತು.
ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ಕೋರ್ಟ್, ನಾಳೆಗೆ ನಟಿ ರನ್ಯಾ ರಾವ್ ಜಾಮೀನು ಅರ್ಜಿಯನ್ನು ಮುಂದೂಡಿಕೆ ಮಾಡಲಾಗಿದೆ. ನಾಳೆ ನಟಿ ರನ್ಯಾ ರಾವ್ ಅವರಿಗೆ ಜಾಮೀನು ನೀಡುತ್ತಾ ಎಂಬುದನ್ನು ಕಾದು ನೋಡಬೇಕಿದೆ.
ಸಾಗರದ ಬಿಹೆಚ್ ರಸ್ತೆಯ ಅಂಗಡಿಯಲ್ಲಿ ಅಗ್ನಿ ಅವಘಡ: ಧಗಧಗಿಸಿ ಹೊತ್ತಿ ಉರಿಯುತ್ತಿರುವ ಮಳಿಗೆ