ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಮಿಸ್ಟರಿಯ ನಂತ್ರ ನಟ ದರ್ಶನ್ ಮಾಧ್ಯಮಗಳಿಂದ ಅಂತರವನ್ನು ಕಾಯ್ದುಕೊಂಡಿದ್ದಾರೆ. ಆದರೇ ಸೋಷಿಯಲ್ ಮೀಡಿಯಾದಲ್ಲಿ ಸಕ್ರೀಯವಾಗಿದ್ದಾರೆ. ಅವರು ಇನ್ಟಾಗ್ರಾಂ ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಈಗ ಸಖತ್ ವೈರಲ್ ಆಗಿದೆ. ಜೊತೆಗೆ ತಮ್ಮ ಅಭಿಮಾನಿಗಳಿಗೆ ಎಚ್ಚರಿಕೆಯೋಪಾದಿಯ ತಿಳುವಳಿಕೆಯನ್ನು ಹೇಳಿದ್ದಾರೆ.
ನಾಳೆಯಿಂದ ಮೈಸೂರಿನಲ್ಲಿ ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರದ ಶೂಟಿಂಗ್ ಆರಂಭವಾಗಲಿದೆ. ಮೈಸೂರಿನಲ್ಲಿ ಶೂಟಿಂಗ್ ಗೆ ಚಾಲನೆ ನೀಡಲಾಗುತ್ತಿದೆ. ಈ ಬೆನ್ನಲ್ಲೇ ಅಭಿಮಾನಿಗಳಿಗೆ ನಟ ದರ್ಶನ್ ಅವರು ತಮ್ಮ ಅಭಿಮಾನಿಗಳಿಗೆ ಖಡಕ್ ಸಂದೇಶವೊಂದನ್ನು ನೀಡಿದ್ದಾರೆ.
ಈ ಬಗ್ಗೆ ತಮ್ಮ ಇನ್ಟಾ ಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, ನನ್ನ ಸೆಲೆಬ್ರಿಟಿಸ್ ಗಳಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ನನ್ನ ಮತ್ತು ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ ಅಭಿಮಾನಕ್ಕೆ ನಾವು ಸದಾ ಚಿರಋಣಿ. ಆದರೆ, ಈ ವೀಡಿಯೊದಲ್ಲಿ ನಮ್ಮ ಮೇಲಿರುವ ಅಭಿಮಾನದಿಂದ ಇನ್ನೂ ಏನು ಸಾಧನೆ ಮಾಡದಿರುವ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ನನ್ನ ಮನಸಿಗೆ ತುಂಬಾ ನೋವಾಗಿದೆ ಎಂದಿದ್ದಾರೆ.
ಅದರಿಂದ ಡೆವಿಲ್ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಬೇಕಿದ್ದ ಚಂದುನನ್ನು ಈ ಚಿತ್ರದಿಂದ ಹೊರಗಿಡಲಾಗಿದೆ. ಚಂದು ಅಥವಾ ನನ್ನ ಮಗ ವಿನೀಶ್ ಗೆ ನೀವು ಅಭಿಮಾನದಿಂದಲೋ ಅಥವಾ ಅವರೊಂದಿಗೆ ಚೆನ್ನಾಗಿ ಗುರುತಿಸಿಕೊಂಡರೆ ನನಗೆ ಹತ್ತಿರವಾಗಬಹುದು ಎಂದು ನೀವು ಭಾವಿಸಿದರೆ, ಅದನ್ನು ನಿಮ್ಮ ಮನಸಿನಿಂದ ತೆಗೆದು ಹಾಕಿ ನೀವು ಹೀಗೆ ಮಾಡುವುದು ನನಗೆ ಸ್ವಲ್ಪವೂ ಇಷ್ಟವಾಗುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆ; ಆರು ತಿಂಗಳಿನಲ್ಲಿ ಕಾಮಗಾರಿ ಮುಗಿಸಿ ನೀರು ಹರಿಸಲು ಚಿಂತನೆ: ಡಿಸಿಎಂ ಡಿ.ಕೆ.ಶಿವಕುಮಾರ್