ಬೆಂಗಳೂರು : ಸ್ಯಾಂಡಲ್ವುಡ್ನಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾ, ರಾಗಿಣಿಗೆ ಸಿಸಿಬಿ ಶಾಕ್ ನೀಡಿದ್ದು, ಹೈಕೋರ್ಟ್ ಆದೇಶ ರದ್ದುಕೋರಿ ಸಿಸಿಬಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ನಟಿ ಸಂಜನಾ ಮತ್ತು ರಾಗಿಣಿ ಎಫ್ ಐ ಆರ್ ರದ್ದು ಪ್ರಶ್ನಿಸಿ ಸುಪ್ರೀಂಕೋರ್ಟ್’ಗೆ ಸಿಸಿಬಿ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಡ್ರಗ್ಸ್ ಕೇಸ್ ನಲ್ಲಿ ಪ್ರಕರಣ ರದ್ದುಮಾಡುವಂತೆ ನಟಿಯರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅಂತೆಯೇ ನಟಿ ಸಂಜನಾ ಮತ್ತು ರಾಗಿಣಿ ಎಫ್ ಐ ಆರ್ ರದ್ದಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿತ್ತು.
ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗರ್ಲಾನಿ, ರಾಗಿಣಿಗೆ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿತ್ತು. ಸಿಸಿಬಿಯಿಂದ ನಟಿಯರು ಸೇರಿದಂತೆ ಡ್ರಗ್ಸ್ ಪೆಡ್ಲರ್ ಗಳ ಬಂಧನವಾಗಿತ್ತು. ಸಂಜನಾ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಎಫ್ಐಆರ್ ರದ್ದುಗೊಳಿಸಲಾಗಿತ್ತು.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 2024 ಜೂನ್ 24 ರಂದು ಹೈಕೋರ್ಟ್ ಬಿಡುಗಡೆಗೊಳಿಸಿ ಆದೇಶ ನೀಡಿತ್ತು. ಈ ಒಂದು ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ತಯಾರಿ ಮಾಡಿಕೊಳ್ಳಲಾಗಿದೆ. ನಟಿ ಸಂಜನಾ ಗಲ್ರಾಣಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದರು. ಜಾಮೀನಿನ ಮೇಲೆ ನಟಿ ಸಂಜನಾ ಜೈಲಿನಿಂದ ಹೊರಗಡೆ ಬಂದಿದ್ದರು. ಹೀಗಾಗಿ ನಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ತಯಾರಿ ಮಾಡಿಕೊಳ್ಳಲಾಗಿದೆ. ಈಗಾಗಲೇ ಸಭೆ ನಡೆಸಿ ಸರ್ಕಾರದ ಮಟ್ಟದಲ್ಲಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಪ್ರಕರಣ ಹಿನ್ನೆಲೆ?
2020ರ ಆಗಸ್ಟ್ 26ರಂದು ಸೆಲಿಬ್ರಿಟಿಗಳು, ಸಿನಿ ನಟ, ನಟಿಯರು ಹಾಗೂ ಉದ್ಯಮಿಗಳ ಮಕ್ಕಳು ಡ್ರಗ್ಸ್ ಪಾರ್ಟಿ ಮಾಡುತ್ತಿದ್ದಾರೆ ಎಂಬ ಮಾಹಿತಿ ಆಧರಿಸಿ ಎನ್‌ಸಿಬಿ ಅಧಿಕಾರಿಗಳು ಬೆಂಗಳೂರಿನ ಕಲ್ಯಾಣ ನಗರದಲ್ಲಿರುವ ರಾಯಲ್ ಸೂಟ್ಸ್ ಹೋಟೆಲ್ ಮೇಲೆ ದಾಳಿ ಮಾಡಿದ್ದರು. ಆಗ ಅಪಾರ ಪ್ರಮಾಣದ ಮಾದಕ ವಸುಗಳನ್ನು ವಶಪಡಿಸಿಕೊಂಡಿದ್ದ ಅಧಿಕಾರಿಗಳು ಅನೂಪ್, ರವೀಂದ್ರನ್ ಹಾಗೂ ಡಿ. ಅಂಕಿತ ಎಂಬ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದರು. ನಂತರ ತನಿಖೆ ವೇಳೆ ಇವರು ಸ್ಯಾಂಡಲ್‌ವುಡ್ ನಟ, ನಟಿಯರಿಗೆ ಮಾದಕ ವಸ್ತು ಪೂರೈಕೆ ಮಾಡಲಾಗುತ್ತಿದ್ದರು ಎಂಬ ಸ್ಫೋಟಕ ಸಂಗತಿ ಹೊರಬಿದ್ದಿತ್ತು. ಬಳಿಕ ಪ್ರಕರಣದಲ್ಲಿ ಹಲವರನ್ನು ಬಂಧಿಸಲಾಗಿತ್ತು.