ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಅವರನ್ನು ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಅವರು ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ.
ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ ಸಂಬಂಧ ನಟಿ ರನ್ಯಾ ರಾವ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಕೋರ್ಟ್ ನಡೆಸದ್ದು, ಜಾಮೀನು ಅರ್ಜಿಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿತ್ತು. ಅವರನ್ನು ಡಿ.ಆರ್.ಐ. ಅಧಿಕಾರಿಗಳು ವಶಕ್ಕೆ ಕೇಳದ ಹಿನ್ನೆಲೆಯಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದರು..ರನ್ಯಾ ರಾವ್ ಬಳಿ ಒಟ್ಟು 14.8 ಕೆಜಿ ಚಿನ್ನ ಸಿಕ್ಕಿರುವ ಮಾಹಿತಿ ಇದೆ.








