ಶಿವಮೊಗ್ಗ: ಸಾಗರದ ಆನಂದಪುರ ಹೋಬಳಿಯ ನಾಗರೀಕ ಸನ್ಮಾನ ಸಮಿತಿಯಿಂದ ಮಾರ್ಚ್.15ರಂದು ಕಾಗೋಡು ತಿಮ್ಮಪ್ಪ ಅವರಿಗೆ ನಾಗರೀಕ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಅಂತ ಕಾಂಗ್ರೆಸ್ ಮುಖಂಡ ಸೋಮಶೇಖರ್ ಲಾವಿಗ್ಗೆರೆ ತಿಳಿಸಿದ್ದಾರೆ.
ಇಂದು ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್.15ರಂದು ಆನಂದಪುರದಲ್ಲಿ ಕಾಗೋಡು ತಿಮ್ಮಪ್ಪ ಅವರಿಗೆ ನಾಗರೀಕ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಶಾಸಕ ಗೋಪಾಲಕೃಷ್ಣ ಬೇಳೂರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಭಿನಂದನ ನುಡಿಯಾಡಲಿದ್ದಾರೆ. ಕಾಗೋಡು ತಿಮ್ಮಪ್ಪ ಅವರ ವಿಶೇಷ ಭಾವಚಿತ್ರವನ್ನು ಶಾಲಾ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೆರವೇರಿಸಲಿದ್ದಾರೆ ಎಂದರು.
ಈ ಕಾರ್ಯಕ್ರಮದಲ್ಲಿ ಬಿಆರ್ ಜಯಂತ್ ಅವರು ಪ್ರಾಸ್ತಾವಿಕ ನುಡಿಗಳನ್ನು ಆಡಲಿದ್ದಾರೆ. ಸಿಗಂದೂರು ಧರ್ಮದರ್ಶಿ ಡಾ.ರಾಮಪ್ಪ, ವಕೀಲ ಮತ್ತು ಖ್ಯಾತ ವಾಗ್ಮಿ ಸುಧೀರ್ ಕುಮಾರ್ ಮುರೊಳ್ಳಿ ಘನ ಉಪಸ್ಥಿತರಿರಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಗರೀಕ ಸನ್ಮಾನ ಸಮಿತಿಯ ಅಧ್ಯಕ್ಷ ಬಿ.ಟಾಕಪ್ಪ ಕಣ್ಣೂರು ವಹಿಸಲಿದ್ದಾರೆ ಎಂದು ತಿಳಿಸಿದರು.
ಈ ಸುದ್ದಿಗೋಷ್ಠಿಯಲ್ಲಿ ಚೇತನ್ ರಾಜ್ ಕಣ್ಣೂರು, ಕಿರಣ್ ದೊಡ್ಮನೆ, ಗಜೇಂದ್ರ, ಈಶ್ವರ್, ಜ್ಯೋತಿ ಕೋವಿ ಉಪಸ್ಥಿತರಿದ್ದರು.
ವರದಿ: ವಸಂತ ಬಿ ಈಶ್ವರಗೆರೆ