ಕೊಡಗು : ಕೊಡಗು ಜಿಲ್ಲೆಯ ಹಲವೆಡೆ ಇಂದು ಬೆಳಗ್ಗೆ ಲಘು ಭೂಕಂಪನ ಅನುಭವವಾಗಿದೆ ಎಂದು ತಿಳಿದುಬಂದಿದೆ. ಮಡಿಕೇರಿ ತಾಲೂಕಿನ ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನ ಅನುಭವವಾಗಿದೆ.
ಹೌದು ಈ ಕುರಿತು ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಸದ್ಯ, ಈ ವಿಚಾರದ ಬಗ್ಗೆ ಭೂ ವಿಜ್ಞಾನಿಗಳಿಗೆ ಮಾಹಿತಿ ನೀಡಲು ಗ್ರಾಮ ಪಂಚಾಯತ್ ಅಧಿಕಾರಿಗಳು ಮುಂದಾಗಿದ್ದಾರೆ.ಸದ್ಯ ಈ ಬಗ್ಗೆ ಅಧಿಕಾರಿಗಳು ಭೂವಿಜ್ಞಾನಿಗಳಿಗೆ ಮಾಹಿತಿ ನೀಡಲು ಮುಂದಾಗಿದ್ದಾರೆ.ಅದೃಷ್ಟವಶಾತ್ ಯಾವುದೇ ರೀತಿಯಲ್ಲಿ ಹಾನಿ, ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.