ಬೆಂಗಳೂರು: ನಟಿ ರನ್ಯಾ ರಾವ್ ಅವರನ್ನು ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿದೆ. ಇಂತಹ ಅವರು ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಆರ್ಥಿಕ ಅಪರಾಧಗಳ ನ್ಯಾಯಾಲಯ ನಡೆಸಿತು. ವಾದ, ಪ್ರತಿವಾದವನ್ನು ಆಲಿಸಿದಂತ ಕೋರ್ಟ್ ಮಾರ್ಚ್.14ಕ್ಕೆ ಜಾಮೀನು ಅರ್ಜಿಯ ಆದೇಶದ ತೀರ್ಪು ಕಾಯ್ದಿರಿಸಿದೆ.
ಚಿನ್ನ ಸಾಗಾಣಿಕೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧಿಸಲಾಗಿದೆ. ಅವರಿಗೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪ್ರಕರಣದಲ್ಲಿ ಜಾಮೀನು ನೀಡುವಂತೆ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ವೇಳೆ ಡಿ ಆರ್ ಐ ಪರ ವಕೀಲ ಮಧು ರಾವ್ ವಾದ ಮಂಡಿಸಿದರು.
ಕಸ್ಟಡಿ ಅವಧಿಯಲ್ಲಿ ನಟಿ ರನ್ಯಾ ರಾವ್ ಅವರು ತನಿಖೆಗೆ ಯಾವುದೇ ರೀತಿಯಲ್ಲಿ ಸಹಕರಿಸಿಲ್ಲ. ಅಪರಾಧದ ಮನಸ್ಥಿತಿಯ ಬಗ್ಗೆ ಪರಿಶೀಲಿಸಬೇಕು. ಜಾಮೀನು ನೀಡಿದರೇ ಸಮಸ್ಯೆ ಆಗಲಿದೆ. ಮಹಿಳೆಯಾಗಿದ್ದರೂ ಕೂಡ ಬೇಲ್ ನೀಡಬಾರದು. ದೊಡ್ಡ ಮಟ್ಟದ ಸ್ಮಗ್ಲಿಂಗ್ ಆಗಿರುವುದು ಪರಿಗಣಿಸಬೇಕು ಎಂಬುದಾಗಿ ವಾದಿಸಿದರು.
ವಾದ ಪ್ರತಿವಾದವನ್ನು ಆಲಿಸಿದಂತ ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯವು, ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ಆದೇಶವನ್ನು ಮಾರ್ಚ್.14ಕ್ಕೆ ಕಾಯ್ದಿರಿಸಿದೆ.
ಯುನಿವರ್ಸಿಟಿ ಮುಚ್ಚುವ ಬದಲು ಕಾಂಗ್ರೆಸ್ ಪಕ್ಷವನ್ನೇ ಮುಚ್ಚಿ ಬಿಡಿ: ಛಲವಾದಿ ನಾರಾಯಣಸ್ವಾಮಿ ಆಗ್ರಹ
BREAKING : ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ : ಯೂಟ್ಯೂಬರ್ ಸಮೀರ್ ವಿರುದ್ಧದ ‘FIR’ ಗೆ ಹೈಕೋರ್ಟ್ ತಡೆ