ಕೋಲಾರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಕಾಮುಕ ತಂದೆಯೊಬ್ಬ ಮಗಳ ಮೀ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿರುವ ಹೀನ ಕೃತ್ಯ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ಈ ಒಂದು ಬೆಚ್ಚಿ ಬೆಳಿಸುವ ಘಟನೆ ವರದಿಯಾಗಿದೆ.
ಹೌದು ಕಾಮುಕ ತಂದೆಯೊಬ್ಬ ತನ್ನ 20 ವರ್ಷದ ಮಗಳ ಮೇಲೆ 5 ತಿಂಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಆರೋಪಿಗೆ ಮೂವರು ಹೆಣ್ಣು ಮಕ್ಕಳು ಹಾಗೂ ಓರ್ವ ಪುತ್ರನಿದ್ದಾನೆ. ತಾಯಿ ಇಲ್ಲದ ಹೆಣ್ಣು ಮಕ್ಕಳನ್ನು ತಂದೆ ತಾನೆ ನೋಡಿಕೊಳ್ಳುತ್ತಿದ್ದ. ಅಲ್ಲದೇ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಆಗಿದೆ.
ಇದೀಗ 20 ವರ್ಷದ ಮಗಳ ಮೇಲೆ ನಿರಂತರವಾಗಿ 5 ತಿಂಗಳಿನಿಂದ ಅತ್ಯಾಚಾರ ಎಸಗಿದ್ದಾನೆ. ಹೊಟ್ಟೆನೋವು ಎಂದು ಆಸ್ಪತ್ರೆಗೆ ಹೋದಾಗ ಈ ಒಂದು ಕೃತ್ಯ ಬೆಳಕಿಗೆ ಬಂದಿದೆ. ಮಗಳ ದೂರಿನ ಮೇರೆಗೆ ಪೊಲೀಸರು ತಂದೆಯನ್ನು ಅರೆಸ್ಟ್ ಮಾಡಿದ್ದಾರೆ. ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.