ಹುಬ್ಬಳ್ಳಿ: ನೈಋತ್ಯ ರೈಲ್ವೆಯ ನೂತನ ಪ್ರಧಾನ ವ್ಯವಸ್ಥಾಪಕರಾಗಿ ಆಗಮಿಸಿದ ಮುಕುಲ್ ಸರನ್ ಮಾಥುರ್ ಅವರಿಗೆ ಅಖಿಲ ಭಾರತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ನೈರುತ್ಯ ರೈಲ್ವೆ ನೌಕರರ ಸಂಘವು ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಲಾಯಿತು.
ಅಖಿಲ ಭಾರತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ನೈರುತ್ಯ ರೈಲ್ವೆ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಮೋಹನ್, ಅಧ್ಯಕ್ಷ ಕೆ.ಎಸ್.ದ್ಯಾಮಣ್ಣವರ್ ಹಾಗೂ ಹುಬ್ಬಳ್ಳಿ, ಮೈಸೂರು ವಿಭಾಗಗಳ ಮತ್ತು ಹುಬ್ಬಳ್ಳಿ ಕಾರ್ಯಾಗಾರದ ಪದಾಧಿಕಾರಿಗಳು ಮಾಥುರ್ ಅವರನ್ನು ಭೇಟಿ ಮಾಡಿ ಪುಷ್ಪಗುಚ್ಛ ನೀಡಿ ಸನ್ಮಾನಿಸಿದರು.
ನೂತನವಾಗಿ ಆಯ್ಕೆಯಾಗಿ ಬಂದಿದ್ದಕ್ಕೆ ಶುಭ ಕೋರಲಾಯಿತು. ಈ ಸಂದರ್ಭದಲ್ಲಿ, ಅಖಿಲ ಭಾರತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ರೈಲ್ವೆ ನೌಕರರ ಕಲ್ಯಾಣ ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿ, ಮನವಿ ಪತ್ರವನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥುರ್, ಆತ್ಮೀಯ ಸ್ವಾಗತಕ್ಕೆ ಕೃತಜ್ಞತೆ ಸಲ್ಲಿಸಿ, ಎಲ್ಲಾ ಉದ್ಯೋಗಿಗಳಿಗೆ ಸಮಾನ ಮತ್ತು ಅಂತರ್ಗತ ಕೆಲಸದ ವಾತಾವರಣವನ್ನು ನಿರ್ಮಿಸುವ ಭರವಸೆ ನೀಡಿದರು.
BREAKING NEWS: ‘KPSC ಮರು ಪರೀಕ್ಷೆ’ ಅಸಾಧ್ಯ, ಉಪ್ಪು ತಿಂದವರು ನೀರು ಕುಡಿಯಲೇಬೇಕು: ಸಿಎಂ ಸಿದ್ಧರಾಮಯ್ಯ
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ :ರೈಲ್ವೆಯಲ್ಲಿ 1,003 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ | Jobs Alert