ಬೆಂಗಳೂರು : ಈಗಾಗಲೇ KPSC ಮರು ಪರೀಕ್ಷೆ ಮಾಡಿ ಎಂದು ಸೂಚನೆ ಕೊಡಲು ಈಗ ಸಾಧ್ಯವಿಲ್ಲ, ಪ್ರಕರಣ ನ್ಯಾಯಾಲಯದಲ್ಲಿದೆ. ಮರು ಪರೀಕ್ಷೆಗೆ ನ್ಯಾಯಾಲಯ ಸೂಚನೆ ಕೊಟ್ಟರೆ ಮರು ಪರೀಕ್ಷೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇದೀಗ KAS ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆ ಪ್ರಶ್ನೆಪತ್ರಿಕೆಯ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಆಯೋಗಕ್ಕೆ ಸೂಚನೆ ನೀಡಲು ನಿರ್ಧರಿಸಿದ್ದೇವೆ ಎಂದರು.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆ ಪ್ರಶ್ನೆಪತ್ರಿಕೆಯ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಆಯೋಗಕ್ಕೆ ಸೂಚನೆ ನೀಡಲು ನಿರ್ಧರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಲೋಪದೋಷಗಳಿಗೆ ಕಾರಣರಾದ ವಿಷಯ ತಜ್ಞರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಅವರ ಮೇಲೆ ಕ್ರಮಗಳನ್ನು ತೆಗೆದುಕೊಳ್ಳಬೇಕು.
ಭಾಷಾಂತರಕಾರರ ಲೋಪವಿದ್ದರೆ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು.
ಆಯೋಗವು ನಡೆಸುವ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಮೊದಲು ಕನ್ನಡದಲ್ಲಿ ತಯಾರಿಸಿ, ನಂತರ ಇ೦ಗ್ಲೀಷ್ ಬಗ್ಗೆ ಭಾಷಾಂತರ ಮಾಡಲು ಆಯೋಗಕ್ಕೆ ಸೂಚನೆಯನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
‘KPSC’ ಮರು ಪರೀಕ್ಷೆ ಸಾಧ್ಯವಿಲ್ಲ
KPSC ಪರೀಕ್ಷೆಯಲ್ಲಿ ಭಾಷಾಂತರದಲ್ಲಿ ಆದ ಲೋಪದ ಕಾರಣಕ್ಕೆ ಅಭ್ಯರ್ಥಿಗಳಿಗೆ ಆಗಿರುವ ಸಮಸ್ಯೆ ಬಗ್ಗೆ ವಿರೋಧ ಪಕ್ಷದ ನಿಲುವಳಿ ಸೂಚನೆ ಮೇಲೆ ಕೆಪಿಎಸ್‌ಸಿ ಕುರಿತ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಿ, KPSC ನಲ್ಲಿ ಹಲವು ಬಾರಿ ನಾನಾ ಗೊಂದಲಗಳಾಗಿ, ನ್ಯಾಯಾಲಯಗಳ ಮೆಟ್ಟಿಲು ಏರಿರುವ ಚರಿತ್ರೆ ಇದೆ. ಭ್ರಷ್ಟಾಚಾರ KPSC ಯಿಂದ ಹೊರಗೆ ಹೋಗಬೇಕು ಇದರ ಬಗ್ಗೆ ಎರಡು ಮಾತಿಲ್ಲ. ನಾನು ಯಾವತ್ತಿಗೂ ಅಧಿಕಾರಿಗಳನ್ನು ವಹಿಸಿಕೊಂಡು ಹಾಗೂ ಕೆಪಿಎಸ್ಸಿ ವಹಿಸಿಕೊಂಡು ಮಾತನಾಡಲ್ಲ. ಎಲ್ಲಿ ನ್ಯಾಯ ಸಿಗಬೇಕು ಅದರ ಪರವಾಗಿಯೇ ಇರುತ್ತೇನೆ.
ಯಾರು ತಪ್ಪು ಮಾಡಿದ್ದಾರೋ ಆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಅಧಿಕಾರಿಗಳ ವಿರುದ್ಧ ಅಕ್ರಮ ಆಗಬೇಕು ಎಂದು ಸೂಚನೆ ನೀಡಿದ್ದೇನೆ. ಕ್ರಮ ತೆಗೆದುಕೊಳ್ಳುವಂತೆ ಸೆಕ್ರೆಟರಿಗೆ ಹೇಳಿದ್ದೇನೆ. ನಾವೆಲ್ಲರೂ ಪ್ರಾಮಾಣಿಕರು ಅಂತಾನೆ ಹೇಳೋದು. ಆದರೆ ಎಷ್ಟು ಜನರು ಅಪ್ರಾಮಾಣಿಕರು ಇರುತ್ತಾರೋ ಮರು ಪರೀಕ್ಷೆ ಮಾಡಲು ಹಿಂದೇಟು ಹಾಕಲ್ಲ. ಎಲ್ಲರನ್ನೂ ಕರೆದು ಸಲಹೆ ಪಡೆದು ತೀರ್ಮಾನ ಮಾಡುತ್ತೇನೆ ಅದರಿಂದ ನೀವು ಹೇಳಿದ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ಇದನ್ನು ಸರಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. 2 ಕೇಸ್ ಕೋರ್ಟ್ ನಲ್ಲಿ ಇರುವ ಕಾರಣ ಮರು ಪರೀಕ್ಷೆ ಅಸಾಧ್ಯ ಎಂದರು.
ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆ ಪ್ರಶ್ನೆಪತ್ರಿಕೆಯ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಆಯೋಗಕ್ಕೆ ಸೂಚನೆ ನೀಡಲು ನಿರ್ಧರಿಸಿದ್ದೇವೆ #KPSC #GovtJobs pic.twitter.com/aDuxUiRRWM
— Siddaramaiah (@siddaramaiah) March 12, 2025