ವಿಜಯನಗರ : ವಿಜಯನಗರದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರು ಪಾಲಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೊದಲಗಟ್ಟೆ ಗ್ರಾಮದ ಬಳಿ ನಡೆದಿದೆ.
ನೀರು ಪಾಲಾಗಿರುವ ಯುವಕನನ್ನು ವಿನೋದ ಸ್ವಾಮಿ ಚನ್ನವೀರಯ್ಯ ಹಿರೇಮಠ (25) ಎಂದು ತಿಳಿದುಬಂದಿದೆ. ಈತ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದವ ಎಂದು ತಿಳಿದುಬಂದಿದೆ.ವಿನೋದ ಮುಂಡರಗಿ ತಾಲೂಕಿನ ಶೀರನಹಳ್ಳಿ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಮೊದಲಗಟ್ಟಿ ಬಳಿ ಇರುವ ನದಿಗೆ ಈಜಲು ಹೋಗಿದ್ದಾನೆ.
ಈ ಸಂದರ್ಭದಲ್ಲಿ ನೀರು ಪಾಲಾಗಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಪತ್ತೆ ಕಾರ್ಯಚರಣೆ ಪ್ರಾರಂಭಿಸಿದ್ದಾರೆ. ಇದೇ ಸ್ಥಳದಲ್ಲಿ ಕಳೆದ 4-5 ದಿನಗಳ ಹಿಂದೆ ಮೂವರು ಯುವಕರು ನೀರು ಪಾಲಾಗಿದ್ದರು. ಇದೀಗ ಇಂದು ಮತ್ತೊಂದು ದುರ್ಘಟನೆ ನಡೆದಿದೆ. ಘಟನೆ ಕುರಿತು ಹೂವಿನಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.