ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಅರ್ಥ ಶಾಸ್ತ್ರ ವಿಷಯದ ಪರೀಕ್ಷೆ ನಡೆಯಿತು. ಈ ಪರೀಕ್ಷೆಗೆ 3.5 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರೇ, 17,444 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಅಲ್ಲದೇ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದಂತ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ.
ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಇಂದಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಅರ್ಥಶಾಸ್ತ್ರ ವಿಷಯದ ಪರೀಕ್ಷೆ ನಡೆಯಿತು. ಈ ಪರೀಕ್ಷೆಗೆ 3,68,338 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 3,50,894 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 17,444 ವಿದ್ಯಾರ್ಥಿಗಳು ಗೈರಾಗಿದ್ದಾರೆ ಅಂತ ತಿಳಿಸಿದೆ.
ಇಂದಿನ ಅರ್ಥಶಾಸ್ತ್ರ ವಿಷಯದ ಪರೀಕ್ಷೆ ವೇಳೆಯಲ್ಲಿ ಬೆಂಗಳೂರು ಸೌತ್ ವಿಭಾಗದಲ್ಲಿ ಅಗರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡುತ್ತಿದ್ದಂತ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ ಎಂಬುದಾಗಿ ಹೇಳಿದೆ.
ಸೆನ್ಸೆಕ್ಸ್ 200.85 ಪಾಯಿಂಟ್ಸ್ ಕಳೆದುಕೊಂಡು ಕೊನೆ, ನಿಫ್ಟಿ 73.30 ಪಾಯಿಂಟ್ಸ್ ಕುಸಿತ | Sensex, Nifty Update
ತಿಮ್ಮಪ್ಪನ ಸನ್ನಿಧಿಗೆ ದಾಖಲೆಯ ‘ನಂದಿನಿ ತುಪ್ಪ’ ರವಾನೆ: ಯುಗಾದಿಗಾಗಿ ‘2000 ಟನ್’ಗೆ ಡಿಮ್ಯಾಂಡ್ | Nandini Ghee