ಬೆಂಗಳೂರು: ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶಾಸಕರಿಗೆ ಔತಣ ಕೂಟವನ್ನು ಆಯೋಜಿಸಿದ್ದಾರೆ. ಈ ಔತಣ ಕೂಟದಲ್ಲಿ ಇಬ್ಬರು ಬಿಜೆಪಿಯ ಶಾಸಕರು ಭಾಗಿಯಾಗಿದ್ದಾರೆ.
ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಅವರು ಐದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಔತಣ ಕೂಟವನ್ನು ಆಯೋಜಿಸಲಾಗಿದೆ. ಈ ಔತಣ ಕೂಟದಲ್ಲಿ ಕಾಂಗ್ರೆಸ್ ಮುಖಂಡರು, ಶಾಸಕರು ಭಾಗಿಯಾಗಿದ್ದಾರೆ.
ಸಚಿವರು, ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಆಯೋಜಿಸಿರುವಂತ ಔತಣ ಕೂಟದಲ್ಲಿ ಬಿಜೆಪಿಯ ಶಾಸಕ ಎಸ್.ಟಿ ಸೋಮಶೇಖರ್ ಹಾಗೂ ಹೆಬ್ಬಾರ್ ಕೂಡ ಆಗಮಿಸಿ, ಭಾಗಿಯಾಗಿದ್ದಾರೆ.
ಕಾಂಗ್ರೆಸ್ ಜೊತೆಗೆ ಉತ್ತಮ ಸಂಬಂಧ ಹೊಂದಿದ್ದಂತ ಈ ಇಬ್ಬರು ನಾಯಕರು, ಎಲ್ಲಾ ವಿಚಾರದಲ್ಲೂ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬೆಂಬಲಿಸಿದ್ದಾರೆ. ಇಂತಹ ಇಬ್ಬರು ಬಿಜೆಪಿ ಶಾಸಕರು ಡಿಸಿಎಂ ಡಿಕೆ ಶಿವಕುಮಾರ್ ಡಿನ್ನರ್ ನಲ್ಲಿ ಭಾಗಿಯಾಗಿದ್ದಾರೆ.
ಬಳ್ಳಾರಿ: ಮಾ.14ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
BREAKING: 1,300 ಕೋಟಿ ಕಟ್ಟಡ ನಿರ್ಮಾಣ ಹಗರಣ: ಸಿಸೋಡಿಯಾ, ಸತ್ಯೇಂದ್ರ ಜೈನ್ ವಿರುದ್ಧದ FIRಗೆ ರಾಷ್ಟ್ರಪತಿ ಅನುಮೋದನೆ