ಬೆಂಗಳೂರು: ನಗರದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದಂತ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ರೋಪಿಗಳಿಂದ 3 ಕೆಜಿ 200 ಗ್ರಾಂ ಗಾಂಜಾ ಜಪ್ತಿ ಮಾಡಿದ್ದಾರೆ. ಇದರ ಮೌಲ್ಯ ಬರೋಬ್ಬರಿ 1.80 ಲಕ್ಷವಾಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಬೆಂಗಳೂರು ನಗರ ಪೊಲೀಸರು, ದೇವನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ದಿನಾಂಕ:08/03/2025 ರಂದು ಬಾತ್ಮೀದಾರರಿಂದ ಖಚಿತ ಮಾಹಿತಿಯೊಂದು ದೊರೆತಿರುತ್ತದೆ. ಮಾಹಿತಿಯಲ್ಲಿ ಠಾಣಾ ಸರಹದ್ದಿನ ಎಂ.ಆರ್.ಲೇಔಟ್‌ನ ರಾಣಿ ಕ್ರಾಸ್ ಬಳಿ ಇಬ್ಬರು ವ್ಯಕ್ತಿಗಳು ಒಂದು ದ್ವಿ-ಚಕ್ರ ವಾಹನದಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾವನ್ನಿಟ್ಟುಕೊಂಡು ಮಾರಾಟ ಮಾಡುತ್ತಿರುವುದಾಗಿ ಮಾಹಿತಿಯಲ್ಲಿ ತಿಳಿಸಿರುತ್ತಾರೆ. ಈ ಮಾಹಿತಿಯನ್ನಾಧರಿಸಿ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಿ, ನಂತರ ಬಾತ್ಮಿದಾರರು ತಿಳಿಸಿದ ಸ್ಥಳಕ್ಕೆ ಧಾವಿಸಿ, ದಾಳಿ ಮಾಡಿ, ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳಿಬ್ಬರಿಂದ 3 ಕೆ.ಜಿ 200 ಗಾಂಜಾ, 02 ಮೊಬೈಲ್ ಫೋನ್, 01 ತೂಕದ ಯಂತ್ರ ಹಾಗೂ 01 ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಯಿತು ಎಂದಿದೆ.
ವಶಕ್ಕೆ ಪಡೆದ ಇಬ್ಬರು ಆರೋಪಿಗಳನ್ನು ವಿಚಾರಣೆ ಮಾಡಲಾಗಿ, ಮತ್ತೋರ್ವ ಸಹಚರನ ಬಗ್ಗೆ ಮಾಹಿತಿಯನ್ನು ನೀಡಿದ್ದು, ಆ ಸಹಚರನು ಗಾಂಜಾವನ್ನು ಮಾರಾಟ ಮಾಡಿಕೊಡುವಂತೆ ಆರೋಪಿಗಳಿಗೆ ನೀಡುತ್ತಿದ್ದುದ್ದಾಗಿ ತಿಳಿಸಿರುತ್ತಾರೆ. ಈ ಆರೋಪಿಗಳಿಬ್ಬರ ಮಾಹಿತಿ ಮೇರೆಗೆ, ದಿನಾಂಕ:08/03/2025 ರಂದು ಸಹಚರನು ವಾಸವಿರುವ ಮನೆಯಾದ ಬಿ.ಟಿ.ಎಂ ಲೇಔಟ್ ನ್ಯೂ ಗುರಪ್ಪನಪಾಳ್ಯದಿಂದ ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆ ಮಾಡಲಾಗಿ, ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತಪ್ಪೋಪ್ಪಿಕೊಂಡಿದ್ದು, ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಕಡಿಮೆ ಬೆಲೆಗೆ ಓರ್ವ ಅಪರಿಚಿತ ವ್ಯಕ್ತಿಯಿಂದ ಪಡೆದಿರುವುದಾಗಿ ತಿಳಿಸಿರುತ್ತಾನೆ ಎಂದಿದೆ.
ಈ ಪ್ರಕರಣದ ಆರೋಪಿಗಳ ವಶದಿಂದ 3 ಕೆ.ಜಿ 200 ಗ್ರಾಂ ಗಾಂಜಾ, 02 ಮೊಬೈಲ್ ಫೋನ್, 01 ತೂಕದ ಯಂತ್ರ ಹಾಗೂ 01 ದ್ವಿ-ಚಕ್ರ ವಾಹನ ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ ಕೆ 1,80,000/- (ಒಂದು ಲಕ್ಷದ ಎಂಬತ್ತು ಸಾವಿರ ರೂಪಾಯಿ). ದಿನಾಂಕ:09/03/2025 ರಂದು ಮೂವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ ಎಂದಿದೆ.
ಈ ಕಾರ್ಯಾಚರಣೆಯನ್ನು ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರು .ವಿ.ಜೆ.ಸುಜೀತ್, ಐಪಿಎಸ್ ಅವರು, ಸಹಾಯಕ ಪೊಲೀಸ್ ಆಯುಕ್ತರು, ದೇವನಹಳ್ಳಿ ಉಪ ವಿಭಾಗ ನವೀನ್ ಕುಮಾರ್ ಅವರ ಮಾರ್ಗದರ್ಶನದಲಿ, ದೇವನಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರಾಕೇಶ್.ಸಿ ಹಾಗೂ ಅಧಿಕಾರಿ/ಸಿಬ್ಬಂದಿರವರು ತಂಡ ಪಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ ಎಂಬುದಾಗಿ ಹೇಳಿದೆ.
ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಚಿನ್ನದ ಪದಕದ ಗರಿಮೆ: ಸಂತಸ ಹಂಚಿಕೊಂಡ ಸಿಎಂ ಸಿದ್ಧರಾಮಯ್ಯ
178 ಪ್ರಯಾಣಿಕರಿದ್ದ ಅಮೇರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ: 12 ಜನರಿಗೆ ಗಾಯ
ಭಾರತದಲ್ಲಿ ಶೇ.57ರಷ್ಟು ಕಾರ್ಪೊರೇಟ್ ಪುರುಷರು ವಿಟಮಿನ್ ಬಿ12 ಕೊರತೆ ಎದುರಿಸುತ್ತಿದ್ದಾರೆ: ಸಮೀಕ್ಷೆ