ಮಂಗಳೂರು: ನಗರದಲ್ಲಿ ಬೃಹತ್ ಅಕ್ರಮ ಪಿಸ್ತೂಲ್ ಮಾರಾಟ ಜಾಲವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇದರ ಜೊತೆಗೆ ಕರಾವಳಿಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಮತ್ತೆ ಆಕ್ಟೀವ್ ಆಗಿದ್ಯಾ ಎನ್ನುವಂತ ಸಂದೇಹವನ್ನು ಹುಟ್ಟು ಹಾಕಿದೆ.
ಮಂಗಳೂರು ಸಿಸಿಬಿ ಪೊಲೀಸರು ಕೇರಳ ಮೂಲದ ನಟೋರಿಯಸ್ ಅಕ್ರಮ ಪಿಸ್ತೂಲ್ ಮಾರಾಟ ಡೀಲರ್ ಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಕೇರಳ ಮೂಲದ ಅಬ್ದುಲ್ ಲತೀಫ್, ಮನ್ಸೂರು, ನೌಫಾಲ್, ಮಹಮ್ಮದ್ ಅಸ್ಗರ್ ಹಾಗೂ ಮಹಮ್ಮದ್ ಸಾಲಿ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.
ಸಿಸಿಬಿ ಪೊಲೀಸರು ಬಂಧಿತ ಆರೋಪಿಗಳಿಂದ ಮೂರು ಪಿಸ್ತೂಲ್, 6 ಜೀವಂತ ಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳಲ್ಲಿ ಅಬ್ದುಲ್ ಲತೀಫ್ ಯಾನೆ ತೋಕ್ ಲತೀಫ್ ನಿಷೇಧಿತ ಪಿಎಫ್ಐ ಮುಖಂಡರಿಗೆ ಪಿಸ್ತೂಲ್ ನೀಡಿದ್ದಾಗಿ ಹೇಳಲಾಗುತ್ತಿದೆ. ಪಿಎಫ್ಐ ಕ್ಯಾಡರ್ ಗಳಿಗೆ ಶಸ್ತ್ರಾಸ್ತ್ರ ಸರಬರಾಜು ಮಾಡಿದ್ದಾಗಿ ವಿಚಾರಣೆಯ ವೇಳೆಯಲ್ಲಿ ತಿಳಿದು ಬಂದಿದೆ ಎನ್ನಲಾಗುತ್ತಿದೆ.
ಬೆಂಗಳೂರಲ್ಲಿ ದೇವಸ್ಥಾನಕ್ಕೆ ಕನ್ನ ಹಾಕಿದ ಕಳ್ಳ ಅರೆಸ್ಟ್: 2.40 ಲಕ್ಷ ಮೌಲ್ಯದ ಚಿನ್ನಾಭರಣ, ವಸ್ತು ಜಪ್ತಿ