ಬೆಂಗಳೂರು : ರಾಜ್ಯಾದ್ಯಂತ ಯಾವುದೇ ವಾಣಿಜ್ಯ, ವಸತಿ ಕಟ್ಟಡಗಳು ಸ್ವಾಧೀನಾನುಭವ ಪತ್ರ (OC) ಹೊಂದಿಲ್ಲದಿದ್ದರೆ ವಿದ್ಯುತ್ ಸಂಪರ್ಕ ನೀಡಬಾರದು ಎಂದು ಬೆಸ್ಕಾಂ ಸೇರಿ ಎಲ್ಲಾ ಎಸ್ಕಾಂಗಳಿಗೂ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಸೂಚನೆ ನೀಡಿದೆ.
ಸುಪ್ರೀಂ ಕೋರ್ಟ್ ನ ಆದೇಶದಲ್ಲಿ ಅನಧಿಕೃತವಾಗಿ ಕಟ್ಟಡ ಹಾಗೂ ನಕ್ಷೆ ಉಲ್ಲಂಘಿಸಿ ನಿರ್ಮಾಣವಾಗುತ್ತಿರುವ ಕಟ್ಟಡಗಳ ಮೇಲೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿದ್ದು. ಅದರಂತೆ ಬೆಂಗಳೂರಿನ ಬೆಸ್ಕಾಂ, ಮಂಗಳೂರು, ಹುಬ್ಬಳ್ಳಿ, ಚಾಮುಂಡೇಶ್ವರಿ (ಮೈಸೂರು), ಕಲಬುರಗಿ, ಹುಕ್ಕೇರಿ ಗ್ರಾಮೀಣ ವಿದ್ಯುತ್ ಸರಬರಾಜು ಸಹಕಾರ ಸೊಸೈಟಿ ಸೇರಿ ಆರೂ ಎಸ್ಕಾಂಗಳು ಒಸಿ ಪ್ರಮಾಣಪತ್ರ ಇಲ್ಲದಿದ್ದರೆ ವಿದ್ಯುತ್ ಸಂಪರ್ಕ ನೀಡಬಾರದು ಎಂದು ತಿಳಿಸಿದೆ.
2022ರಲ್ಲಿ ನಗರಾಭಿವೃದ್ಧಿ ಇಲಾಖೆ ಈ ನಿಯಮ ಸಡಿಲಿಸಿ ವಿದ್ಯುತ್ ಸಂಪರ್ಕ ಪಡೆಯಲು ಇನ್ನು ಮುಂದೆ ಗುರುತಿನ ಚೀಟಿ ಹಾಗೂ ಸ್ವತ್ತಿನ ದಾಖಲೆ ಇದ್ದರೆ ಸಾಕು ಎಂದು ಮಾಡಿತ್ತು. ಇದೀಗ ಸುಪ್ರೀಂ ಕೋರ್ಟ್ ನಕ್ಷೆ ಮಂಜೂರಾತಿ ಉಲ್ಲಂಘಿಸಿ ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸುತ್ತಿರುವ ಬಗ್ಗೆ ಹಾಗೂ ಕಾನೂನು ಬಾಹಿರವಾಗಿ ನಿರ್ಮಾಣಗೊಂಡಿ ರುವ ಕಟ್ಟಡಗಳಿಗೆ ವಿದ್ಯುತ್, ಕುಡಿಯುವ ನೀರು, ಒಳಚರಂಡಿ ಸಂಪರ್ಕ ನೀಡುತ್ತಿರುವ ಬಗ್ಗೆ ತೀವ್ರ ಕಿಡಿಕಾರಿದೆ.
ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಯಾವುದೇಕಾರಣಕ್ಕೂಸಕ್ಷಮಪ್ರಾಧಿಕಾರದಿಂದ ನಕ್ಷೆ ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಾಣ ಮಾಡುವಂತಿಲ್ಲ. ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ನಿರ್ಮಾಣ ಆಗುತ್ತಿರುವ ಕಟ್ಟಡವನ್ನು ನಿರಂತವಾಗಿ ಪರಿಶೀಲನೆ ನಡೆಸ ಬೇಕು. ಯಾವುದೇ ನಕ್ಷೆ ಉಲ್ಲಂಘನೆ ಆಗುತ್ತಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಕಟ್ಟಡ ನಿರ್ಮಾಣ ಸ್ಥಳದಲ್ಲಿ ನಕ್ಷೆ ಮಂಜೂರಾತಿ ಪ್ರತಿ ಯೊಂದನ್ನು ಪ್ರದರ್ಶಿಸಬೇಕು. ಕಟ್ಟಡ ನಿರ್ಮಾಣ ಪೂರ್ಣಗೊಂಡ ಬಳಿಕ ಸ್ಥಳ ಪರಿಶೀಲನೆ ನಡೆಸಿದ ಬಳಿಕವಷ್ಟೇ ಸ್ವಾಧೀನಾ ನುಭವ ಪತ್ರ ವಿತರಣೆ ಮಾಡಬೇಕು. ಒಂದೊಮ್ಮೆ ನಕ್ಷೆ ಮಂಜೂರಾತಿ ನಿಯಮ ಉಲ್ಲಂಘಿಸಿ ನಿರ್ಮಾಣ ಆಗಿದ್ದರೆ ಕ್ರಮಕೈಗೊಳ್ಳ ಬೇಕು ಎಂದು ಸೂಚಿಸಲಾಗಿದೆ.