ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಐಸ್ ಕ್ರೀಂ ಆಸೆ ತೋರಿಸಿ 9 ವರ್ಷದ ಬಾಲಕಿ ಮೇಲೆ ವೃದ್ದನೊಬ್ಬ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಚಿತ್ರದುರ್ಗದ ಅಗಸನಹಳ್ಳಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಮನೆ ಬಳಿ ಆಟವಾಡುತ್ತಿದ್ದ 9 ವರ್ಷದ ಬಾಲಕಿಗೆ ವೃದ್ಧನೊಬ್ಬ ಐಸ್‌ಕ್ರೀಂ ಕೊಡಿಸುತ್ತೇನೆಂದು ಹೇಳಿ ಗುಡ್ಡಕ್ಕೆ ಕರೆದೊಯ್ದು ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.
ಅಗಸನಹಳ್ಳಿ ಬಡಾವಣೆಯ ಸಾಧಿಕ್ (56) ಬಾಲಕಿ ಮೇಲೆ ಅತ್ಯಚಾರ ಎಸಗಿದ ಆರೋಪಿಯಾಗಿದ್ದು, ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಬಾಲಕಿ 3ನೇ ತರಗತಿಯಲ್ಲಿ ಓದುತ್ತಿದ್ದಳು. ಸಂತ್ರಸ್ತ ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಆರೋಪಿಯನ್ನು ಪೋಕ್ಸ ಕಾಯ್ದೆಯಡಿ ಬಂಧಿಸಲಾಗಿದೆ.