ಬೆಂಗಳೂರು : ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಆಸ್ಪತ್ರೆಗೆ `ರೋಬೋಟಿಕ್ ಶಸ್ತ್ರಚಿಕಿತ್ಸಾ ಸೌಲಭ್ಯಗಳನ್ನು ಪರಿಚಯಿಸಲುಸರ್ಕಾರ ಹೆಚ್ಚುವರಿಹಣ ಮಂಜೂರು ಮಾಡಲಿದೆ ಎಂದು ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಘೋಷಣೆ ಮಾಡಿದ್ದಾರೆ.
ಬೆಂಗಳೂರಿನಲ್ಲಿರುವ ಜಯದೇವ ಹೃದಯ ರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ಭೇಟಿ ನೀಡಿ, ಅಲ್ಲಿನ ವೈದ್ಯರೊಂದಿಗೆ ಸಂವಾದ ನಡೆಸಿ ಮಾತನಾಡಿದ ಸಚಿವರು, ಸಂವಾದದ ವೇಳೆ ಜಯದೇವ ಹಿರಿಯ ವೈದ್ಯರು ಕೆಲವು ಮಹತ್ವದ ವಿಷಯಗಳನ್ನು ಪ್ರಸ್ತಾಪಿಸಿದರು. ಅವರ ಪ್ರಶ್ನೆಗಳಿಗೆ ಉತ್ತರಿಸಿ ಮಾತನಾಡುತ್ತಾ, ವೈದ್ಯಕೀಯ ಶಿಕ್ಷಣದಲ್ಲಿ ಹೆಚ್ಚು ಸಮಯ ಕಳೆಯಲಾಗುತ್ತದೆ ಆ ನಿಟ್ಟಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಅನುಭವಿ ವೈದ್ಯರನ್ನು ಉಳಿಸಿಕೊಳ್ಳಲು ನಿವೃತ್ತಿಯ ಅವಧಿಯನ್ನು ವಿಸ್ತರಿಸಲು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಉತ್ತಮ ವೈದ್ಯರನ್ನು ಸದುಪಯೋಗಪಡಿಸಿಕೊಳ್ಳಲು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ವೈದ್ಯರ ನಿವೃತ್ತಿ ವಯಸ್ಸಿನ ಅವಧಿ ವಿಸ್ತರಣೆ ಕುರಿತು ಪ್ರಸ್ತಾಪಿಸುವೆ ಎಂದು ಭರವಸೆ ನೀಡಿದ್ದಾರೆ.
ವೈದ್ಯಕೀಯ ರಂಗದ ಯೋಜನೆಗಳನ್ನು ಹಾಗೂ ಮೂಲಸೌಕರ್ಯಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ವೈದ್ಯರ ಜೊತೆಗೆ ನಮ್ಮ ಸರ್ಕಾರ ನಿಲ್ಲಲಿದೆ. ಮುಖ್ಯವಾದ ವಿಷಯವೆನೆಂದರೆ ಜಯದೇವ ಆಸ್ಪತ್ರೆಗೆ ರೋಬೋಟಿಕ್ ಶಸ್ತ್ರಚಿಕಿತ್ಸಾ ಸೌಲಭ್ಯಗಳನ್ನು ಪರಿಚಯಿಸಲು ಸರ್ಕಾರ ಹೆಚ್ಚುವರಿ ಹಣವನ್ನು ಮಂಜೂರು ಮಾಡಲಿದೆ ಎಂದು ಸಂವಾದದಲ್ಲಿ ಘೋಷಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರು, ಹಿರಿಯ ವೈದ್ಯರು ಹಾಗೂ ಕಿರಿಯ ವೈದ್ಯರು ಸಹ ಉಪಸ್ಥಿತರಿದ್ದರು.