ನವದೆಹಲಿ:ಜಾರ್ಖಂಡ್ನ ಗಿರಿದಿಹ್ ಜಿಲ್ಲೆಯಲ್ಲಿ ಶುಕ್ರವಾರ ಹೋಳಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿ ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಸಮಯದಲ್ಲಿ ಕನಿಷ್ಠ ಮೂರು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಆರೋಪಿಸಲಾಗಿದೆ.ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘೋಡ್ತಂಬಾದಲ್ಲಿ ಹೋಳಿ ಮೆರವಣಿಗೆಯ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಇದನ್ನು ಗುಂಪೊಂದು ವಿರೋಧಿಸಿದ್ದು, ಘರ್ಷಣೆಗೆ ಕಾರಣವಾಯಿತು. ಎರಡೂ ಕಡೆಯವರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ.