ಬೆಂಗಳೂರು: ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯವನ್ನು ಕಾರ್ಮಿಕ ಇಲಾಖೆಯಿಂದ ನೀಡಲಾಗುತ್ತಿದೆ. ಈ ಪಿಂಚಣಿ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಹೇಗೆ.? ದಾಖಲೆಗಳು ಏನು ಅಂತ ಮುಂದೆ ಓದಿ.
60 ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರಿಗೆ ಮಂಡಳಿಯು ಮಾಸಿಕ ಪಿಂಚಣಿ ಸೌಲಭ್ಯವನ್ನು ನೀಡುತ್ತದೆ. ಈ ಸೌಲಭ್ಯವನ್ನು ಪಡೆಯಲು ಫಲಾನುಭವಿಯು 60 ವರ್ಷ ಪೂರ್ಣಗೊಳ್ಳುವ ಮೊದಲು ಕನಿಷ್ಠ 3 ವರ್ಷ ನಿರಂತರವಾಗಿ ಮಂಡಳಿಯ ಸದಸ್ಯತ್ವವನ್ನು ನವೀಕರಿಸಿ ಫಲಾನುಭವಿಯಾಗಿ ಮುಂದುವರೆದಿರಬೇಕು.
ಅರ್ಜಿಸಲ್ಲಿಸಲು ಈ ದಾಖಲೆಗಳು ಕಡ್ಡಾಯ
ಮಂಡಳಿಯಿಂದ ನೀಡಿರುವ ಗುರುತಿನ ಚೀಟಿ
ಫಲಾನುಭವಿಯ ಬ್ಯಾಂಕ್ ಬುಕ್ ಪ್ರತಿ
ಜೀವಿತ ಪ್ರಮಾಣಪತ್ರ ( ಜೀವಿತ ಅವಧಿಯವರೆಗೆ ಪ್ರತಿ ವರ್ಷ ಸಲ್ಲಿಸುವುದು)
ರೇಷನ್ ಕಾರ್ಡ್
ಆಧಾರ್ ಕಾರ್ಡ್
ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ
ನೋಂದಾಯಿತ ಕಾರ್ಮಿಕರು ನಿಮ್ಮ ಸಮೀಪದ ಕಾರ್ಮಿಕ ಇಲಾಖೆಗೆ ಭೇಟಿ ನೀಡಿ, ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಲ್ಲವೇ ಆನ್ ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ ಸಂಖ್ಯೆ 155214ಗೆ ಕರೆ ಮಾಡಿ ಪಡೆಯಬಹುದಾಗಿದೆ.