ಶಿವಮೊಗ್ಗ : ಇತ್ತೀಚಿಗೆ ಬೆಂಗಳೂರಲ್ಲಿ ಕುಡಿಯುವ ನೀರು ಹಿಡಿಯುವ ವೇಳೆ ವಿದ್ಯುತ್ ಪ್ರವಹಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ, ಇದೀಗ ಶಿವಮೊಗ್ಗದಲ್ಲಿ ವಿದ್ಯುತ್ ತಗುಲಿ ಯುವತಿಯೊರ್ವಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ನಡೆದಿದೆ.
ಮೃತ ಯುವತಿಯನ್ನು ನಿಸರ್ಗ (18) ಎಂದು ತಿಳಿದುಬಂದಿದೆ. ನಿಸರ್ಗ ತಮ್ಮ ಮನೆಯಲ್ಲಿನ ಕುಡಿಯುವ ನೀರಿನ ಟ್ಯಾಂಕ್‌ಗೆ ನೀರು ಬಿಡುವ ಸಲುವಾಗಿ ಮೋಟಾರ್ ಆನ್ ಮಾಡಲು ತೆರಳಿದ್ದರು. ಈ ವೇಳೆ ಅವರಿಗೆ ಕರೆಂಟ್ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ. ಘಟನೆ ಕುರಿತು ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.