Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಮೆದುಳಿನ ಸಾಮರ್ಥ್ಯವನ್ನೇ ಕುಂದಿಸಬಹುದು ಈ 5 ಮುಂಜಾನೆಯ ತಪ್ಪು ಅಭ್ಯಾಸಗಳು; ಇಂದೇ ಎಚ್ಚೆತ್ತುಕೊಳ್ಳಿ!

Lay off : `AI’ ತಂತ್ರಜ್ಞಾನದ ಅಬ್ಬರ : ಸಿಸ್ಕೋ ಸಂಸ್ಥೆಯಿಂದ 4,000 ಉದ್ಯೋಗ ಕಡಿತ.!

ಒಂದೆಡೆ ಶಾಂತಿ ಮಾತುಕತೆ, ಇನ್ನೊಂದೆಡೆ ಸಾವಿನ ಅಟ್ಟಹಾಸ: ಉಕ್ರೇನ್ ಮೇಲೆ 800 ಡ್ರೋನ್‌ಗಳಿಂದ ರಷ್ಯಾ ದಾಳಿ, 6 ಸಾವು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗ್ರೇಟರ್ ಬೆಂಗಳೂರು ವಿಧೇಯಕ ತಿರಸ್ಕರಿಸುವಂತೆ ಜೆಡಿಎಸ್ ಪ್ರತಿಭಟನೆ: ರಾಜ್ಯಪಾಲರಿಗೂ ಮನವಿ
KARNATAKA

ಗ್ರೇಟರ್ ಬೆಂಗಳೂರು ವಿಧೇಯಕ ತಿರಸ್ಕರಿಸುವಂತೆ ಜೆಡಿಎಸ್ ಪ್ರತಿಭಟನೆ: ರಾಜ್ಯಪಾಲರಿಗೂ ಮನವಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಿಯಲ್‌ ಎಸ್ಟೇಟ್‌ ದಂಧೆ ನಡೆಸುವುದು ಹಾಗೂ ಬೆಂಗಳೂರು ನಗರದಲ್ಲಿ ಕನ್ನಡಿಗರನ್ನು ಒಡೆದು ಆಳುವ ದುರುದ್ದೇಶದಿಂದ ಕಾಂಗ್ರೆಸ್‌ ಸರಕಾರವು ಬಿಬಿಎಂಪಿಯನ್ನು ಗ್ರೇಟರ್‌ ಬೆಂಗಳೂರು ಹೆಸರಿನಲ್ಲಿ ಏಳು ಭಾಗಗಳನ್ನಾಗಿ ಛಿಧ್ರ ಮಾಡಲು ಹೊರಟಿದೆ ಎಂದು ಜೆಡಿಎಸ್‌ ಆರೋಪ ಮಾಡಿದೆ.

ಗ್ರೇಟರ್‌ ಬೆಂಗಳೂರು ರಚನೆಯ ವಿರುದ್ಧ ಜೆಡಿಎಸ್‌ ಕಾರ್ಯರ್ತರು ನಗರದ ಫ್ರೀಡಂ ಪಾರ್ಕ್‌ ನಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಜೆಡಿಎಸ ನಗರ ಘಟಕದ ಅಧ್ಯಕ್ಷ ಹೆಚ್.‌ಎಂ.ರಮೇಶ್‌ ಗೌಡ ಅವರು; ಕೇವಲ ಭೂ ದಂಧೆ ನಡೆಸುವ ಏಕೈಕ ಉದ್ದೇಶ ಹಾಗೂ ಬೆಂಗಳೂರಿನಲ್ಲಿಯೇ ಕನ್ನಡಿಗರನ್ನು ಪರಕೀಯರನ್ನಾಗಿ ಮಾಡುವ ದುರುದ್ದೇಶದಿಂದ ಸರಕಾರವು ಗ್ರೇಟರ್‌ ಬೆಂಗಳೂರು ಮಾಡಲು ಹೊರಟಿದೆ ಎಂದು ಗಂಭೀರ ಆರೋಪ ಮಾಡಿದರು.

ಅಲ್ಲದೇ; ವಿಧಾನಮಂಡಲದಲ್ಲಿ ಕಾಂಗ್ರೆಸ್‌ ಸರಕಾರ ಬೆಂಗಳೂರು ಜನರ ಭಾವನೆಗಳಿಗೆ ವಿರುದ್ಧವಾಗಿ ಗ್ರೇಟರ್‌ ಬೆಂಗಳೂರು ವಿಧೇಯಕವನ್ನು ಪಾಸ್‌ ಮಾಡಿಕೊಂಡಿದೆ. ಗೌರವಾನ್ವಿತ ರಾಜ್ಯಪಾರು ಯಾವುದೇ ಕಾರಣಕ್ಕೂ ಈ ವಿಧೇಯಕಕ್ಕೆ ಸಹಿ ಹಾಕಬಾರದು. ಮತ್ತೂ ಆ ವಿಧೇಯಕವನ್ನು ತಿರಸ್ಕರಿಸಬೇಕು ಎಂದು ಕೋರುತ್ತೇವೆ. ಈ ಬಗ್ಗೆ ನಮ್ಮ ಪಕ್ಷದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಒಂದೂವರೆ ಕೋಟಿ ಜನರು ವಾಸ ಮಾಡುತ್ತಿದ್ದಾರೆ. ಜನರಿಗೆ ಕುಡಿಯುವ ನೀರಿಲ್ಲ, ಸರಿಯಾದ ಮಲಸೌಕರ್ಯಗಳು ಇಲ್ಲ. ರಸ್ತೆಗುಂಡಿಗಳನ್ನು ಮುಚ್ಚಲು ಈ ಸರಕಾರದಲ್ಲಿ ನಯಾಪೈಸೆ ಹಣವಿಲ್ಲ. ಈಗ ಗ್ರೇಟರ್‌ ಬೆಂಗಳೂರು ಹೆಸರಿನಲ್ಲಿ ಜನರನ್ನು ಯಾಮಾರಿಸಲು ಹೊರಟಿದೆ ಎಂದು ಅವರು ಟೀಕಾಪ್ರಹಾರ ನಡೆಸಿದರು.

ಬೇಸಿಗೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಶುರುವಾಗಿಲ್ಲ. ಆಗಲೇ ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ ಎದ್ದಿದೆ. ಒಂದು ನೀರಿನ ಟ್ಯಾಂಕರ್‌ ಗೆ ಐದು ಸಾವಿರ, ಆರು ಸಾವಿರ ಕೊಡಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ. ಬೆಂಗಳೂರಿನ ಜನ ನಿಜಕ್ಕೂ ದಿನಿತ್ಯವೂ ಸತ್ತು ಬದುಕುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್‌ ಸರಕಾರದ ದುರಾಡಳಿತವೇ ಕಾರಣ ಎಂದು ಆರೋಪ ಮಾಡಿದರು.

ಕೂಡಲೇ ಗ್ರೇಟರ್‌ ಬೆಂಗಳೂರು ವಿಧೇಯಕವನ್ನು ರಾಜ್ಯ ಸರಕಾರ ವಾಪಸ್‌ ವಿಧೇಯಕವನ್ನು ವಾಪಸ್‌ ಪಡೆಯಬೇಕು. ಇಲ್ಲವಾದರೆ ನಗರದಲ್ಲಿ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಶಾಸಕರ ಕಾರ್ಯಕ್ರಮಗಳನ್ನು ನಡೆಯಲು ಬಿಡುವುದಿಲ್ಲ. ಅಲ್ಲೆಲ್ಲ ನಾವು ಪಕ್ಷದ ವತಿಯಿಂದ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ಮಾಡುತ್ತೇವೆ ಎಂದು ಅವರು ಎಚ್ಚರಿಕೆ ಕೊಟ್ಟರು.

ಮತ್ತೆ ಹಾಲಿನ ದರ ಏರಿಕೆ ಮಾಡಲು ಈ ಸರಕಾರ ಹೊರಟಿದೆ. ಬೆಂಗಳೂರು ಜನರನ್ನು ಈ ಸರಕಾರ ಏನು ಮಾಡಲು ಹೊರಟಿದೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಈ ಸರಕಾರ ಬಂದಾಗಿನಿಂದ 43,೦೦೦ ಕೋಟಿ ರೂಪಾಯಿ ಹೆಚ್ಚುವರಿ ತರೆಇಗೆ ಹಾಕಿದ್ದೀರಿ. ಇದು ಬಹಳ ಅನ್ಯಾಯ ಎಂದು ಅವರು ಕಿಡಿಕಾರಿದರು.

ವಿಧಾನ ಪರಿಷತ್‌ ಸದಸ್ಯ ಟಿ.ಎ.ಜವರಾಯಿ ಗೌಡ, ಮಾಜಿ ಎಂಎಲ್‌ ಸಿ ಕೆ.ಎ. ತಿಪಪೇಸ್ವಾಮಿ. ಬೆಂಗಳೂರು ಜೆಡಿಎಸ್‌ ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ರಾವ್‌, ಮುಖಂಡರಾದ ನಾಗೇಶ್‌ ರಾವ್‌, ವೆಂಕಟಸ್ವಾಮಿ, ವೇಣುಗೋಪಾಲ್‌, ಮಂಗಳಮ್ಮ ಪ್ರವೀಣ್‌ ಕುಮಾರ್‌, ಸ್ಯಾಮುಯಲ್‌, ಅಪ್ರೋಜ್‌ ಬೇಗ್‌ ಸೇರಿದಂತೆ ನಗರದ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಪಕ್ಷದ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಹಣ ಡಬ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಕಾರು ಚಾಲಕ ದೀಪಕ್ ಅರೆಸ್ಟ್

BREAKING : ಶಿವಮೊಗ್ಗದಲ್ಲಿ ಘೋರ ದುರಂತ : ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು!

Share. Facebook Twitter LinkedIn WhatsApp Email

Related Posts

ALERT : ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನಿಂದ ಪಾರಾಗಲು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

2 Mins Read

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : 2026-27ನೇ ಸಾಲಿನ ಮೆಟ್ರಿಕ್ ಪೂರ್ವ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

1 Min Read

ನಿಮ್ಮ ಮನೆಯ `ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ | Electricity bill

1 Min Read
Recent News

ನಿಮ್ಮ ಮೆದುಳಿನ ಸಾಮರ್ಥ್ಯವನ್ನೇ ಕುಂದಿಸಬಹುದು ಈ 5 ಮುಂಜಾನೆಯ ತಪ್ಪು ಅಭ್ಯಾಸಗಳು; ಇಂದೇ ಎಚ್ಚೆತ್ತುಕೊಳ್ಳಿ!

Lay off : `AI’ ತಂತ್ರಜ್ಞಾನದ ಅಬ್ಬರ : ಸಿಸ್ಕೋ ಸಂಸ್ಥೆಯಿಂದ 4,000 ಉದ್ಯೋಗ ಕಡಿತ.!

ಒಂದೆಡೆ ಶಾಂತಿ ಮಾತುಕತೆ, ಇನ್ನೊಂದೆಡೆ ಸಾವಿನ ಅಟ್ಟಹಾಸ: ಉಕ್ರೇನ್ ಮೇಲೆ 800 ಡ್ರೋನ್‌ಗಳಿಂದ ರಷ್ಯಾ ದಾಳಿ, 6 ಸಾವು!

ALERT : ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನಿಂದ ಪಾರಾಗಲು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

State News
KARNATAKA

ALERT : ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನಿಂದ ಪಾರಾಗಲು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

By kannadanewsnow57 KARNATAKA 2 Mins Read

ಪ್ರಸ್ತುತ ದಿನಗಳಲ್ಲಿ ಬಿಸಿಲಿನ ಪ್ರಕರತೆ ಮತ್ತು ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ವಯೋವೃದ್ದರು ಆರೋಗ್ಯದ…

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : 2026-27ನೇ ಸಾಲಿನ ಮೆಟ್ರಿಕ್ ಪೂರ್ವ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ನಿಮ್ಮ ಮನೆಯ `ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ | Electricity bill

ಗ್ರಾಹಕರೇ ಗಮನಿಸಿ : LPG, CNG, PNG, LNG ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.