Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರದಲ್ಲಿ ಭಾರಿ ಕಡಿತ: ಆಗಸ್ಟ್ ವರೆಗೆ 400ಕ್ಕೂ ಹೆಚ್ಚು ವಿಮಾನಗಳು ರದ್ದು!

ಪ್ರಧಾನಿ ಮೋದಿ ಐದು ರಾಷ್ಟ್ರಗಳ ಐತಿಹಾಸಿಕ ಪ್ರವಾಸ ನಾಳೆಯಿಂದ ಆರಂಭ: ಯುಎಇ ಜೊತೆ ಇಂಧನ ಭದ್ರತೆ ಕುರಿತು ಮಹತ್ವದ ಚರ್ಚೆ

ಗ್ರಾಹಕರೇ ಗಮನಿಸಿ : LPG, CNG, PNG, LNG ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಸೂರು ಎಕ್ಸ್‌ ಪ್ರೆಸ್‌ ವೇಯಲ್ಲಿ ತಾಲೂಕುಗಳ ಆಗಮನ-ನಿರ್ಗಮನ ಮಾರ್ಗ ಮುಚ್ಚಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ
KARNATAKA

ಮೈಸೂರು ಎಕ್ಸ್‌ ಪ್ರೆಸ್‌ ವೇಯಲ್ಲಿ ತಾಲೂಕುಗಳ ಆಗಮನ-ನಿರ್ಗಮನ ಮಾರ್ಗ ಮುಚ್ಚಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಮೈಸೂರು ಎಕ್ಸ್‌ಪ್ರೆಸ್‌ವೇಗೆ ಸಂಬಂಧಪಟ್ಟಂತೆ ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ವಿವಿಧೆಡೆ ನೀಡಲಾಗಿದ್ದ ಪ್ರವೇಶ ಹಾಗೂ ನಿರ್ಗಮನ ಮಾರ್ಗಗಳನ್ನು ಮುಚ್ಚಲಾಗಿಲ್ಲ ಎಂದು ಲೋಕೋಪಯೋಗಿ ಸಚಿವರಾದ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು, ಅಪಘಾತಗಳ ಹಿನ್ನೆಲೆಯಲ್ಲಿ ತೂಬಿನಕೆರೆ ಬಳಿ ಟೋಲ್‌ ಬೈಪಾಸ್‌ ಮಾಡುವ ಸ್ಥಳದಲ್ಲಿ ಟ್ರಕ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ಕೇಂದ್ರಗಳಲ್ಲಿ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇಗೆ ಸಂಬಂಧಿಸಿದ ಆಗಮನ-ನಿರ್ಗಮನ ಪ್ರವೇಶದ್ವಾರಗಳನ್ನು ಯಾವುದೇ ಮುನ್ಸೂಚನೆ ಇಲ್ಲದೆ ಮುಚ್ಚಿರುವುದು ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡುತ್ತಿದೆ. ಇದು ಸರ್ಕಾರದ ಗಮನಕ್ಕೆ ಬಂದಿದೆಯೇ ಎಂದು ದಿನೇಶ್‌ ಗೂಳಿಗೌಡ ಪ್ರಶ್ನೆ ಮಾಡಿದ್ದರು. ಇದಕ್ಕೆ ಉತ್ತರಿಸಿದ ಸಚಿವರು, ಎನ್‌ಎಚ್‌ -275 ರ ಬೆಂಗಳೂರು – ಮೈಸೂರು ವಿಭಾಗದ ತೂಬಿನಕೆರೆ ಬಳಿ ಬೆಂಗಳೂರಿನಿಂದ ಮೈಸೂರು ಕಡೆಗೆ ಸಂಚರಿಸುತ್ತಿರುವ ಭಾರಿ ವಾಹನಗಳು ಟೋಲ್ ಪ್ಲಾಜಾವನ್ನು ಬೈಪಾಸ್ ಮಾಡುವ ಸರ್ವಿಸ್ ರಸ್ತೆಯಲ್ಲಿ ನಿರ್ಗಮಿಸುತ್ತಿದ್ದವು. ಇಲ್ಲಿ ಪಕ್ಕದ ಹಳ್ಳಿಗರು, ಸ್ಥಳೀಯ ಸಂಚಾರ ಮತ್ತು ದ್ವಿಚಕ್ರ ವಾಹನಗಳು ಸಂಚರಿಸುತ್ತಿದ್ದರಿಂದ ವಾಹನಗಳ ದಟ್ಟಣೆಯಿಂದ ಸರ್ವೀಸ್ ರಸ್ತೆಯಲ್ಲಿ ಅಪಘಾತಗಳಾಗುತ್ತಿದ್ದವು.

ಹೀಗಾಗಿ ಇಲ್ಲಿನ ಸೇವಾ ರಸ್ತೆಯಲ್ಲಿ ಸಂಚರಿಸುವ ಭಾರಿ ವಾಹನಗಳನ್ನು ನಿಲ್ಲಿಸುವಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರಿಂದ ರಸ್ತೆ ಸುರಕ್ಷತಾ ಸಮಸ್ಯೆಗಳ ಹಿತದೃಷ್ಟಿಯನ್ನು ಪರಿಗಣಿಸಿ ಬೆಂಗಳೂರಿನಿಂದ ಮೈಸೂರು ಕಡೆಗೆ ಪ್ರಯಾಣಿಸುವ ಭಾರಿ ವಾಹನಗಳ (ಟ್ರಕ್‌ ಇತ್ಯಾದಿ) ನಿರ್ಗಮನಕ್ಕೆ ತೂಬಿನಕೆರೆ ಟೋಲ್ ಬೈಪಾಸ್ ಮಾಡುವ ಸ್ಥಳದಲ್ಲಿ ನಿರ್ಬಂಧಿಸಲಾಗಿದೆ. ಆದರೆ, ಇತರೆ ಎಲ್ಲ ವಾಹನಗಳು (ಕಾರುಗಳು, ಜೀಪುಗಳು ಇತ್ಯಾದಿ) ಪಾಂಡವಪುರ ಒಳಗೊಂಡಂತೆ ಪಕ್ಕದ ಹಳ್ಳಿಗಳನ್ನು ತಲುಪಲು ಸೇವಾ ರಸ್ತೆಗೆ ಪ್ರವೇಶಿಸಲು ಮತ್ತು ನಿರ್ಗಮಿಸಲು ಅನುಮತಿ ನೀಡಲಾಗಿರುತ್ತದೆ. ಸರ್ವೀಸ್ ರಸ್ತೆಯನ್ನು ಸಂಪೂರ್ಣವಾಗಿ ಮುಚ್ಚಿರುವುದಿಲ್ಲ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ವರದಿ ನೀಡಿರುತ್ತಾರೆ ಎಂಬುದಾಗಿ ಸಚಿವರು ಹೇಳಿದ್ದಾರೆ.

ಇನ್ನು ಎಕ್ಸ್‌ಪ್ರೆಸ್‌ವೇದಲ್ಲಿನ ಎರಡೂ ಬದಿಯ ಕಾಮಗಾರಿಗೆ ಸಂಬಂಧಿಸಿದಂತೆ ಯೋಜನಾ ಒಪ್ಪಂದದ ಪ್ರಕಾರ ಬೆಂಗಳೂರಿನಿಂದ ಮೈಸೂರು ಎನ್‌ಎಚ್‌-275 ರವರೆಗೆ ಸರ್ವೀಸ್ ರಸ್ತೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಬೆಂಗಳೂರಿಂದ ಮೈಸೂರು ಮಾರ್ಗದಲ್ಲಿ ಆಗಮನ-ನಿರ್ಗಮನ

ಬೆಂಗಳೂರಿನಿಂದ ಮೈಸೂರಿಗೆ ಹೋಗಬೇಕಾದಲ್ಲಿ ವಂಡರ್‌ಲಾ, ಬಿಡದಿ ಬಳಿ ನಿರ್ಗಮನಕ್ಕೆ ದಾರಿ ಇದ್ದರೆ, ಬಿಡದಿಯಲ್ಲಿ ಆಗಮನಕ್ಕೂ ಅವಕಾಶವಿದೆ. ರಾಮನಗರದಲ್ಲಿ ಒಂದು ಕಡೆ, ಚನ್ನಪಟ್ಟಣ, ಮದ್ದೂರು, ಮಂಡ್ಯದಲ್ಲಿ ತಲಾ ಎರಡು ಕಡೆ ಆಗಮನ-ನಿರ್ಗಮನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ಇನ್ನು ತೂಬಿನಕೆರೆ ಇಂಡಸ್ಟ್ರಿಯಲ್‌ ಪ್ರದೇಶದಲ್ಲಿ ಆಗಮನಕ್ಕೆ ಅವಕಾಶವಿದ್ದರೆ, ಭಾರೀ ವಾಹನಗಳಿಗೆ ನಿರ್ಗಮಕ್ಕೆ ಅನುಮತಿಯನ್ನು ನೀಡಲಾಗಿಲ್ಲ. ಶ್ರೀರಂಗಪಟ್ಟಣದ ಎರಡು ಕಡೆ ಆಗಮನ-ನಿರ್ಗಮನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ.

ಮೈಸೂರಿಂದ ಬೆಂಗಳೂರಿಗೆ ಆಗಮನ-ನಿರ್ಗಮನ

ಶ್ರೀರಂಗಪಟ್ಟಣ, ತೂಬಿನಕೆರೆ ಇಂಡಸ್ಟ್ರಿಯಲ್‌ ಏರಿಯಾ, ಮಂಡ್ಯ, ಮದ್ದೂರು, ಚನ್ನಪಟ್ಟಣ, ಬಿಡದಿಗಳಲ್ಲಿ ತಲಾ ಎರಡು ಕಡೆ ಆಗಮನ-ನಿರ್ಗಮನಕ್ಕೆ ಅವಕಾಶವಿದ್ದರೆ, ರಾಮನಗರದಲ್ಲಿ ಒಂದು ಕಡೆ ಅವಕಾಶವನ್ನು ಕಲ್ಪಿಸಲಾಗಿದೆ.

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ತನಿಖೆಯ ನಂತ್ರ ಎಲ್ಲಾ ಮಾಹಿತಿ ಗೊತ್ತಾಗುತ್ತೆ- ಗೃಹ ಸಚಿವ ಪರಮೇಶ್ವರ್

BREAKING : ಶಿವಮೊಗ್ಗದಲ್ಲಿ ಘೋರ ದುರಂತ : ಮೋಟಾರ್ ಸ್ಟಾರ್ಟ್ ಮಾಡುವಾಗ ವಿದ್ಯುತ್ ತಗುಲಿ ಯುವತಿ ಸಾವು!

Share. Facebook Twitter LinkedIn WhatsApp Email

Related Posts

ಗ್ರಾಹಕರೇ ಗಮನಿಸಿ : LPG, CNG, PNG, LNG ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read

Rain Alert : ರಾಜ್ಯದಲ್ಲಿ ಇಂದು, ನಾಳೆ `ಆಲಿಕಲ್ಲು ಮಳೆ’ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

1 Min Read

ರೈಲು ಪ್ರಯಾಣಿಕರೇ ಗಮನಿಸಿ : ರೈಲಿನ ಟಿಕೆಟ್ ಕನ್ಫರ್ಮ್ ಆಗುತ್ತೋ ಇಲ್ಲವೋ ಎಂದು ಬುಕ್ಕಿಂಗ್‌ಗೂ ಮುನ್ನವೇ ಹೇಳುತ್ತೆ ಈ ಆಪ್!

2 Mins Read
Recent News

ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರದಲ್ಲಿ ಭಾರಿ ಕಡಿತ: ಆಗಸ್ಟ್ ವರೆಗೆ 400ಕ್ಕೂ ಹೆಚ್ಚು ವಿಮಾನಗಳು ರದ್ದು!

ಪ್ರಧಾನಿ ಮೋದಿ ಐದು ರಾಷ್ಟ್ರಗಳ ಐತಿಹಾಸಿಕ ಪ್ರವಾಸ ನಾಳೆಯಿಂದ ಆರಂಭ: ಯುಎಇ ಜೊತೆ ಇಂಧನ ಭದ್ರತೆ ಕುರಿತು ಮಹತ್ವದ ಚರ್ಚೆ

ಗ್ರಾಹಕರೇ ಗಮನಿಸಿ : LPG, CNG, PNG, LNG ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಬೀಜಿಂಗ್‌ನಲ್ಲಿ ಟ್ರಂಪ್ – ಷಿ ಜಿನ್‌ಪಿಂಗ್ ಹೈವೋಲ್ಟೇಜ್ ಭೇಟಿ: ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!

State News
KARNATAKA

ಗ್ರಾಹಕರೇ ಗಮನಿಸಿ : LPG, CNG, PNG, LNG ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow57 KARNATAKA 2 Mins Read

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಜಾಗತಿಕವಾಗಿ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರ ಪರಿಣಾಮವಾಗಿ ಭಾರತದಲ್ಲಿಯೂ ಎಲ್ಪಿಜಿ ಕೊರತೆಯ ಬಗ್ಗೆ ಚರ್ಚೆಗಳು…

Rain Alert : ರಾಜ್ಯದಲ್ಲಿ ಇಂದು, ನಾಳೆ `ಆಲಿಕಲ್ಲು ಮಳೆ’ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರೈಲು ಪ್ರಯಾಣಿಕರೇ ಗಮನಿಸಿ : ರೈಲಿನ ಟಿಕೆಟ್ ಕನ್ಫರ್ಮ್ ಆಗುತ್ತೋ ಇಲ್ಲವೋ ಎಂದು ಬುಕ್ಕಿಂಗ್‌ಗೂ ಮುನ್ನವೇ ಹೇಳುತ್ತೆ ಈ ಆಪ್!

ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಧರಿಸಬಹುದಾದರೆ ಹಿಂದೂಗಳಿಗೆ ನಾನೇ ಕೇಸರಿ ಶಾಲನ್ನು ಕೊಡುತ್ತೇನೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.