ಬೆಂಗಳೂರು : ರಾಜ್ಯದ ಪ್ರತಿಯೊಬ್ಬ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೈಬರ್ ಅಪರಾಧಗಳ ಕುರಿತು ಹೆಚ್ಚಿನ ಅರಿವು ಮತ್ತು ತರಬೇತಿ ನೀಡಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದ್ದಾರೆ.
ಸಿಐಡಿ ಹಾಗೂ ಸೈಬರ್ ಕ್ರೈಂ ತನಿಖಾ ತರಬೇತಿ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ನಗರದ ಖಾಸಗಿ ಹೋಟೆಲ್‌ನಲ್ಲಿ ಶನಿವಾರ CIDECODE, ‘ ಅಪರಾಧ ಶೃಂಗಸಭೆ-2025’ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸೈಬರ್ ಅಪರಾಧ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿವೆ. ಜಗತ್ತಿನಲ್ಲಿ ನಡೆಯುತ್ತಿರುವ ಸೈಬರ್ ಅಪರಾಧಗಳ ಕುರಿತು ಪೊಲೀಸರಿಗೂ ಅರಿವು ಇರಬೇಕು ಹಾಗೂ ಪ್ರಕರಣಗಳ ಪರಿ ಣಾಮಕಾರಿ ತನಿಖೆಗೆ ಸಜ್ಜುಗೊಳಿಸಬೇಕೆಂಬ ಉದ್ದೇಶದಿಂದ ಸಿಸಿಐಟಿಆರ್ ಸ್ಥಾಪಿಸಲಾಗಿದೆ. ಇದುವರೆಗೂ 46 ಸಾವಿರಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ ಎಂದರು.
ಒಟಿಪಿ ಪಡೆದು ಬ್ಯಾಂಕ್ ಖಾತೆಗಳಿಂದ ಹಣ ದೋಚುವುದು, ಡೇಟಾ ಹ್ಯಾಕ್, ಸರಕಾರದ ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡುವುದು ಸೇರಿದಂತೆ ನಾನಾ ಬಗೆಯ ಸೈಬರ್ ಅಪರಾಧಗಳು ನಡೆಯು ತ್ತಿವೆ. ಬೆಂಗಳೂರು ನಗರದಲ್ಲಿ ದಾಖಲಾಗು ತ್ತಿರುವ ಸಾಮಾನ್ಯ ಅಪರಾಧಗಳ ಪೈಕಿ ಸೈಬರ್ ಪ್ರಕರಣಗಳ ಸಂಖ್ಯೆಯೇ ಶೇ. 30 ರಷ್ಟಿದೆ. ವೈಟ್‌ಫೀಲ್ಡ್ ವಿಭಾಗದ ವ್ಯಾಪ್ತಿಯಲ್ಲಿಶೇ.40ರಷ್ಟು ಸೈಬರ್‌ಅಪರಾಧ ಪ್ರಕರಣಗಳು ದಾಖಲಾಗುತ್ತಿವೆ. ಇದು ಇನ್ನು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಆರಂಭಿಕ ಹಂತದಲ್ಲೇ ಸೈಬರ್ ಅಪರಾಧ ತಡೆಗಟ್ಟಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.