ರಾಮನಗರ : ಬಿಡದಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿರು ಕಾರ್ಖಾನೆಯೊಂದರ ಶೌಚಾಲಯದ ಗೋಡೆಯ ಮೇಲೆ ಪಾಕಿಸ್ತಾನ ಪರ ಘೋಷಣೆಗಳನ್ನು ಬರೆಯಲಾಗಿದೆ.
ಶೌಚಾಲಯದ ಗೋಡೆ ಮೇಲೆ ಪಾಕಿಸ್ತಾನಕ್ಕೆ ಜೈ , ಪಾಕಿಸ್ತಾನಕ್ಕೆ ಜಯವಾಗಲಿ ಎಂದು ಗೋಡೆ ಬರಹ ಬರೆಯಲಾಗಿದೆ. ಕಾರ್ಖಾನೆಯಲ್ಲಿ ಕೆಲಸ ಮಾಡುವ ಯಾರೋ ಕಿಡಿಗೇಡಿಗಳು ಈ ಬರಹ ಬರೆದಿರುವ ಶಂಕೆ ವ್ಯಕ್ತವಾಗಿದೆ.
ಇಂತಹ ಕೃತ್ಯ ಕಾರ್ಖಾನೆಯ ಉದ್ಯೋಗಿಗಳ ಮನಸ್ಸಿನಲ್ಲಿ ಅಶಾಂತಿಯನ್ನು ಸೃಷ್ಟಿಸುವುದಲ್ಲದೇ. ದೇಶದ್ರೋಹಿ ಅಪರಾಧವಾಗುತ್ತದೆ. ಅಂತಹ ಕಾರ್ಮಿಕರನ್ನು ಕಾನೂನು ಚೌಕಟ್ಟಿನಲ್ಲಿ ದೇಶದ್ರೋಹಿ ಎಂದು ಪೊಲೀಸರಿಗೆ ಒಪ್ಪಿಸಿ ಜೈಲು ಶಿಕ್ಷೆಯಾಗುವಂತೆ ಕ್ರಮ ವಹಿಸುತ್ತೇವೆ ಎಂದು ಕಾರ್ಖಾನೆ ಆಡಳಿತ ಮಂಡಳಿ ಎಚ್ಚರಿಕೆ ನೀಡಿದೆ.