ಬೆಂಗಳೂರು: ನಗರದಲ್ಲಿ ಪುಂಡರ ಅಟ್ಟಹಾಸ ಮುಂದುವರೆದಿದೆ. ಇಬ್ಬರು ಯುವಕ ಮೇಲೆ ಹಲ್ಲೆ ಮಾಡಿರುವಂತ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನ ಮೈಸೂರು ರಸ್ತೆಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಈ ಘಟನೆ ನಡೆದಿದೆ. ಪೆಟ್ರೋಲ್ ಹಾಕಿಸಿಕೊಳ್ಳುತ್ತಿದ್ದಂತ ಇಬ್ಬರು ಯುವಕ ಮೇಲೆ ಪುಂಡರಿಂದ ಹಲ್ಲೆ ಮಾಡಲಾಗಿದೆ. ಕಾರಿಗೆ ಪೆಟ್ರೋಲ್ ಹಾಕಿಸುತ್ತಿದ್ದಂತ ಯುವಕರಿಬ್ಬರ ಮೇಲೆ ಪುಂಡರು ಹಲ್ಲೆ ಮಾಡಿದ್ದಾರೆ.
ಈ ವಿಷಯ ತಿಳಿದು ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆಯ ಪೊಲೀಸರು ಆಗಮಿಸಿದ್ದರು. ಓರ್ವ ಪುಂಡನನ್ನು ಹಿಡಿದು, ವಿಚಾರಣೆ ನಡೆಸುತ್ತಿದ್ದಾರೆ. ಹಲ್ಲೆಗೊಳಗಾದಂತ ಯುವಕರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
BREAKING NEWS: ಬೆಂಗಳೂರಲ್ಲಿ ಮತ್ತೊಂದು ‘ಹಿಟ್ ಅಂಡ್ ರನ್’ ಪ್ರಕರಣ: ಆಟೋ ಚಾಲಕನ ‘ಕಾಲು ಕಟ್’
BIG NEWS: `ಇ ಖಾತಾ’ ಇಲ್ಲದೆ ಆಸ್ತಿ ನೋಂದಣಿ ಇಲ್ಲ: ರಾಜ್ಯ ಸರ್ಕಾರದಿಂದ ಮಹತ್ವದ ಸೂಚನೆ.!