ಮಂಗಳೂರು : ಮತಾಂತರ ಎಂದು ಬಡಿದಾಡಿದ್ದು ಸಾಕು ಮಾಡಿ. ಎಲ್ಲಿವರೆಗೆ ಲವ್ ಜಿಹಾದ್, ಮತಾಂತರ ಬಗ್ಗೆ ಮಾತನಾಡೋದು ಎಂದಿದ್ದರಲ್ಲದೇ, ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತಿಯಪ್ಪ. ಬೇರೆ ಧರ್ಮದ ಹುಡುಗಿಯರನ್ನೂ ನೋಡು. ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಬೇಕು ಎಂದು ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದ್ದರು. ಇದೀಗ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮುಸ್ತಫಾ ಅಬ್ದುಲ್ಲಾ ದೂರು ಆಧರಿಸಿ FIR ದಾಖಲಾಗಿದೆ.
ಮತಾಂತರ ಎಂದು ಬಡಿದಾಡಿದ್ದು ಸಾಕು ಮಾಡಿ. ಎಲ್ಲಿವರೆಗೆ ಲವ್ ಜಿಹಾದ್, ಮತಾಂತರ ಬಗ್ಗೆ ಮಾತನಾಡೋದು ಎಂದಿದ್ದರಲ್ಲದೇ, ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತಿಯಪ್ಪ. ಬೇರೆ ಧರ್ಮದ ಹುಡುಗಿಯರನ್ನೂ ನೋಡು. ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಬೇಕು ಎಂದು ಹಿಂದೂ ಯುವಕರಿಗೆ ಕರೆ ನೀಡಿದ್ದರು. ಮಾ.9ರಂದು ನಡೆದ ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಸೂಲಿಬೆಲೆ ಅವರು ಭಾಷಣ ಮಾಡಿದ್ದರು.
ಕಳೆದ ಮಾರ್ಚ್ 9ರಂದು ದಕ್ಷಿಣಕನ್ನಡ ಜಿಲ್ಲೆಯ ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ ಹಿಂದೂ ಯುವಕರು ಅನ್ಯಧರ್ಮದವರನ್ನು ಪ್ರೀತಿಸಿ ವಿವಾಹವಾಗಿ ಎಂದು ಕರೆ ನೀಡಿದ್ದರು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಪ್ರಚೋದನಕಾರಿ ಹೇಳಿಕೆ ಮೂಲಕ ಕೋಮುದ್ವೇಷ ಬಿತ್ತುತ್ತಿದ್ದಾರೆ ಎಂದು ಆರೋಪಿಸಿ ಸೂಲಿಬೆಲೆ ವಿರುದ್ಧ ದೂರು ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ.