ಬೆಂಗಳೂರು : ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯವನ್ನು ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡುವ ವಿಧೇಯಕಕ್ಕೆ ಇಂದು ವಿಧಾನ ಪರಿಷತ್‌ನಲ್ಲಿ ಅಂಗೀಕಾರ ದೊರೆತಿದೆ.
ಇದು ಐತಿಹಾಸಿಕ ಹಿನ್ನೆಲೆಯಲ್ಲಿ ತೆಗೆದುಕೊಂಡ ನಿರ್ಧಾರವಾಗಿದೆ. ಮಹಾತ್ಮ ಗಾಂಧಿ ಅವರು 1924ರಲ್ಲಿ ಬೆಳಗಾವಿ ಎಐಸಿಸಿ ಅಧಿವೇಶನದಲ್ಲಿ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಆ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಮಹತ್ವವಾಗಿದ್ದವು. ಹೀಗಾಗಿ ಈ ವಿಶ್ವವಿದ್ಯಾಲಯಕ್ಕೆ ಮಹಾತ್ಮ ಗಾಂಧಿ ಅವರ ಹೆಸರು ಇರಿಸುವುದು ಸೂಕ್ತ ಎಂದು ತೀರ್ಮಾನ ಕೈಗೊಳ್ಳಲಾಗಿದೆ.
ಮುಂದಿನ ದಿನಗಳಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಈ ವಿಶ್ವವಿದ್ಯಾಲಯವನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸುವುದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.