ಮಂಡ್ಯ : ಮಂಡ್ಯದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಅನಾಥಶ್ರಮದಲ್ಲಿ ಪುಡ್ ಪಾಯಿಸನ್ ನಿಂದಾಗಿ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ವಿದ್ಯಾರ್ಥಿ ಮೃತಪಟ್ಟಿದ್ದಾನೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ಫುಡ್ ಪಾಯ್ಸನ್ ನಿಂದಾಗಿ ಅನಾಥಾಶ್ರಮದ ಹಲವು ಮಕ್ಕಳು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ಮಕ್ಕಳನ್ನು ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇದೀಗ ಮತ್ತೊಬ್ಬ ವಿದ್ಯಾರ್ಥಿ ನಮೀಬ್ ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಇದಕ್ಕೂ ಮುಂಚೆ 6ನೇ ತರಗತಿ ವಿದ್ಯಾರ್ಥಿ ಕೇರ್ಲಾಂಗ್ (13) ಸಾವನ್ನಪ್ಪಿದ್ದ. ಈ ಮೂಲಕ ಫುಡ್ ಪಾಯಿಸನ್ ನಿಂದ ಮೃತಪಟ್ಟವರ ಸಂಖ್ಯೆ 2 ಕ್ಕೆ ಏರಿಕೆಯಾಗಿದೆ.
ಮಳವಳ್ಳಿಯಲ್ಲಿ ಉದ್ಯಮಿಯೊಬ್ಬರು ಹೋಳಿ ಹಬ್ಬ ಆಚರಿಸಿದ್ದರು. ಈ ವೇಳೆ ಉಳಿದ ಊಟವನ್ನು ಅನಾಥಾಶ್ರಮಕ್ಕೆ ನೀಡಿದ್ದರು. ಈ ಊಟ ಸೇವಿಸಿ ಫುಡ್ ಪಾಯ್ಸನ್ ಆಗಿ ಮಕ್ಕಳು ಅಸ್ವಸ್ಥರಾಗಿದ್ದಾರೆ. ಊಟ ಸೇವಿಸಿದ್ದ ಹಲವರು ಅಸ್ವಸ್ಥಗೊಂಡಿದ್ದಾರೆ.