ಗಾಝಾ: ಮುಂಜಾನೆ ಸ್ಫೋಟಗಳು ಕೇಳಿಬಂದಿದ್ದರಿಂದ ಗಾಜಾ ನಗರದಲ್ಲಿ “ಭಯೋತ್ಪಾದಕ ಗುರಿಗಳ ಮೇಲೆ ವ್ಯಾಪಕ ದಾಳಿ” ನಡೆಸುತ್ತಿದ್ದೇವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ.
ಫೆಲೆಸ್ತೀನ್ ಎನ್ ಕ್ಲೇವ್ ನಲ್ಲಿರುವ ಹಮಾಸ್ ನೆಲೆಗಳ ಮೇಲೆ ದಾಳಿ ನಡೆಸಿರುವುದಾಗಿ ಸೇನೆ ತಿಳಿಸಿದೆ.ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 66 ಜನರು ಸಾವನ್ನಪ್ಪಿದ್ದಾರೆ ಎಂದು ಗಾಝಾದ ನಾಗರಿಕ ರಕ್ಷಣಾ ಸಂಸ್ಥೆ ಹೇಳಿಕೊಂಡಿದೆ.
ಇಸ್ರೇಲ್ ತಮ್ಮ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಫೆಲೆಸ್ತೀನ್ ಉಗ್ರಗಾಮಿ ಗುಂಪು ಹಮಾಸ್ ಆರೋಪಿಸಿದ ಕಾರಣ ಈ ದಾಳಿಗಳು ಕದನ ವಿರಾಮದ ಮೇಲೆ ಪರಿಣಾಮ ಬೀರುತ್ತವೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ “ನೆತನ್ಯಾಹು ಮತ್ತು ಅವರ ಉಗ್ರಗಾಮಿ ಸರ್ಕಾರವು ಕದನ ವಿರಾಮ ಒಪ್ಪಂದವನ್ನು ರದ್ದುಗೊಳಿಸಲು ನಿರ್ಧರಿಸಿದೆ, ಗಾಝಾದಲ್ಲಿರುವ ಕೈದಿಗಳನ್ನು ಅಪರಿಚಿತ ವಿಧಿಗೆ ಒಡ್ಡಿದೆ” ಎಂದು ಹಮಾಸ್ ಹೇಳಿಕೆಯಲ್ಲಿ ತಿಳಿಸಿದೆ.
ಇಸ್ರೇಲ್ ಏಕಪಕ್ಷೀಯವಾಗಿ ಕದನ ವಿರಾಮವನ್ನು ಕೊನೆಗೊಳಿಸುತ್ತಿದೆ ಎಂದು ಹೆಸರು ಹೇಳಲಿಚ್ಛಿಸದ ಹಮಾಸ್ನ ಹಿರಿಯ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ರಾಯಿಟರ್ಸ್ಗೆ ತಿಳಿಸಿದ್ದಾರೆ.
ನಮ್ಮ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್ ಪದೇ ಪದೇ ನಿರಾಕರಿಸಿದ ಹಿನ್ನೆಲೆಯಲ್ಲಿ ಗಾಝಾ ಪಟ್ಟಿಯ ಮೇಲೆ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಸರ್ಕಾರ ಹೇಳಿದೆ