ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಹೇಯ ಕೃತ್ಯ ಬೆಳಕಿಗೆ ಬಂದಿದ್ದು, ತಂದೆಯೇ ಮಗಳ ಮೇಲೆ ಅತ್ಯಾಚಾರ ನಡೆಸಿರುವ ಆರೋಪ ಕೇಳಿಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಟೌನ್ ನಲ್ಲಿ 19 ವರ್ಷದ ಮಗಳ ಮೇಲೆ ತಂದೆಯೇ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ.
ಮಂಜುನಾಥ್ ಎಂಬಾತ ಸ್ವಂತ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಗಳೇ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಮಂಜುನಾಥ್ ನನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಜುನಾಥ್ ಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಓರ್ವ ಪುತ್ರನಿದ್ದಾನೆ. ಹಿರಿಯ ಮಗಳ ಮೇಲೆ ತಂದೆ ಮಂಜುನಾಥ್ ಅತ್ಯಾಚಾರ ಎಸಗಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.