Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈತರಿಗೆ ವರದಾನ ‘ಕಿಸಾನ್ ಕ್ರೆಡಿಟ್ ಕಾರ್ಡ್’: ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.!

13/04/2026 7:16 AM

ದಕ್ಷಿಣ ಲೆಬನಾನ್‌ಗೆ ನೆತನ್ಯಾಹು ಭೇಟಿ:’ಯುದ್ಧ ಇನ್ನೂ ನಿಂತಿಲ್ಲ’: ಹಿಜ್ಬುಲ್ಲಾ ವಿರುದ್ಧ ಇಸ್ರೇಲ್ ಗುಡುಗು!

13/04/2026 7:11 AM

BIG NEWS : ದೇಶಾದ್ಯಂತ 7.36 ಕೋಟಿ ಮತದಾರರ ಹೆಸರು ಡಿಲೀಟ್ : `SIR’ 2ನೇ ಹಂತ ಮುಕ್ತಾಯ

13/04/2026 7:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ‘DCC ಬ್ಯಾಂಕ್’ ಮೂಲಕ ‘ಸಾಲ ಸೌಲಭ್ಯ’.!
KARNATAKA

GOOD NEWS : ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ‘DCC ಬ್ಯಾಂಕ್’ ಮೂಲಕ ‘ಸಾಲ ಸೌಲಭ್ಯ’.!

By kannadanewsnow5719/03/2025 5:05 AM

ಬೆಂಗಳೂರು : ಅರ್ಹತೆ ಇರುವ ರೈತ ಫಲಾಬುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಿಳಿಸಿದರು.

ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್. ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, 2023-24ನೇ ಸಾಲಿನ ಆಯವ್ಯಯ ಮಂಡನೆ ಸಂದರ್ಭದಲ್ಲಿ ಶೂನ್ಯ ಬಡ್ಡಿ ದರದಲ್ಲಿ ವಿತರಿಸುವ ಬೆಳೆ ಸಾಲದ ಮಿತಿಯನ್ನು ರೂ. 3.00 ಲಕ್ಷದಿಂದ ರೂ. 5.00 ಲಕ್ಷ ಏರಿಸಲಾಗಿದ್ದು, ಈ ಮಿತಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು 2023-24ನೇ ಸಾಲಿನಲ್ಲಿ 6,744 ರೈತರಿಗೆ ರೂ. 290.51 ಕೋಟಿ ಮತ್ತು 2024-25ನೇ ಸಾಲಿನಲ್ಲಿ 2025ನೇ ಫೆಬ್ರವರಿ 28 ರ ವರೆಗೆ 13,689 ರೈತರಿಗೆ ರೂ 589.12 ಕೋಟಿ ಮೊತ್ತದ ಸಾಲ ವಿತರಿಸಲಾಗಿರುತ್ತದೆ.

ರಾಜ್ಯದ 19 ಕೃಷಿ ವಲಯಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ತಜ್ಞರ ಸಮಿತಿಯಲ್ಲಿ ಪ್ರತಿ ಬೆಳೆಗೆ ನಿಗದಿಪಡಿಸಿದ ಸ್ಕೇಲ್ ಆಫ್ ಫೈನಾನ್ಸ್ ಮಿತಿ, ರೈತರು ಹೊಂದಿರುವ ಭೂ ಹಿಡುವಳಿ ಹಾಗೂ ಬೆಳೆಯುವ ಬೆಳೆ ಆಧರಿಸಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಪ್ರತಿ ರೈತರಿಗೆ ಗರಿಷ್ಠ ಸಾಲದ ಮಿತಿಯನ್ನು ನಿಗದಿಪಡಿಸಿದ್ದು ಇದರನ್ವಯ 1,73,449 ರೈತರು ರೂ. 3.00 ಲಕ್ಷದಿಂದ ರೂ. 5.00 ಲಕ್ಷಗಳವರೆಗಿನ ಬೆಳೆಸಾಲ ಪಡೆಯಲು ಅರ್ಹತೆ ಹೊಂದಿರುತ್ತಾರೆ ಎಂದು ತಿಳಿಸಿದರು.

ನಬಾರ್ಡ್ ನಿಯಮದಂತೆ ಜಿಲ್ಲಾ ಕೆಂದ್ರ ಸಹಕಾರ ಕೇಂದ್ರ ಬ್ಯಾಂಕುಗಳು ಕಳೆದ ಮೂರು ವರ್ಷಗಳಲ್ಲಿ ವಿತರಣೆ ಮಾಡಿದ ಸರಾಸರಿ ಸಾಲದ ಆಧಾರವಾಗಿ ತಯಾರಿಸಬೇಕಾದ ಆರ್.ಎಲ್.ಪಿ ಗೆ ನಬಾರ್ಡ್ ರಿಯಾಯಿತಿ ಬಡ್ಡಿ ದರದಲ್ಲಿ ಶೇ. 40 ರಷ್ಟು ಮತ್ತು ಹೆಚ್ಚಿನ ಬಡ್ಡಿ ದರದಲ್ಲಿ ಶೇ. 69 ರಷ್ಟು ಮಾತ್ರ ಪುನರ್ಧನವನ್ನು ನೀಡಲು ನೀತಿ ಇದ್ದು ಉಳಿದ ಬಂಡವಾಳವನ್ನು ಡಿ.ಸಿ.ಸಿ ಬ್ಯಾಂಕುಗಳು ತನ್ನ ಸಂಪನ್ಮೂಲದಿಂದಲೇ ಭರಿಸಬೇಕಿದ್ದು ಬಂಡವಾಳದ ಕೊರತೆಯಾಗಿರುತ್ತದೆ.

ನಬಾರ್ಡ್ ಸಂಸ್ಥೆ ಶೇ. 40 ರಷ್ಟು ಪ್ರಮಾಣದಲ್ಲಿ ನೀಡಬೇಕಾದ ರಿಯಾಯಿತಿ ಬಡ್ಡಿ ದರದ ಮಿತಿಯನ್ನು ವರ್ಷದಿಂದ ವರ್ಷಕ್ಕೆ ಕಡಿಮೆ ಮಾಡುತ್ತಾ ಬಂದಿರುತ್ತದೆ. ನಬಾರ್ಡ್ ಸಂಸ್ಥೆ 2024-25 ನೇ ಸಾಲಿನಲ್ಲಿ ರಿಯಾಯಿತಿ ಬಡ್ಡಿ ದರದಲ್ಲಿ ನೀಡುವ ಪುನರ್ಧನದ ಮಿತಿಯನ್ನು ಕಳೆದ ವರ್ಷದಲ್ಲಿ ಇದ್ದ ರೂ. 5600 ಕೋಟಿಗಳಿಂದ ಪ್ರಾರಂಭದಲ್ಲಿ ರೂ. 2340.00 ಕೋಟಿಗಳಿಗೆ ನಿಗದಿಮಾಡಿ ನಂತರ ರೂ. 896.11 ಕೋಟಿಗಳ ಹೆಚ್ಚುವರಿ ಮಿತಿಯನ್ನು ನೀಡಿದ್ದು ರೂ. 2363.89 ಕೋಟಿ ಕಡಿಮೆಯಾಗಿರುತ್ತದೆ

ಪ್ರತಿ ವರ್ಷ ಹೊಸ ಸದಸ್ಯರು ಸಹ ಸಾಲಕ್ಕೆ ಅರ್ಜಿ ಸಲ್ಲಿಸುತ್ತಿದ್ದು, ಡಿ.ಸಿ.ಸಿ. ಬ್ಯಾಂಕುಗಳು ಈ ಹೊಸ ರೈತರಿಗೆ ಪ್ರಥಮ ಅದ್ಯತೆ ನೀಡಿ ರೂ. 3.00 ಲಕ್ಷದವರೆಗೆ ಸಾಲ ವಿತರಿಸುತ್ತಿದ್ದು, ರೂ 3.00 ಲಕ್ಷಕ್ಕಿಂತ ಹೆಚ್ಚಿನ ಮಿತಿಗೆ ನಂತರದ ಆದ್ಯತೆ ನೀಡಲಾಗುತ್ತಿದೆ.

ರಿಯಾಯಿತಿ ಬಡ್ಡಿ ದರದ ಸಾಲದ ಮಿತಿಯನ್ನು ಹೆಚ್ಚಿಸುವಂತೆ ನಬಾರ್ಡ್ ಗೆ ಸೂಚಿಸಲು ವಿತ್ತಿಯ ಸಚಿವರು ಕೇಂದ್ರ ಸರ್ಕಾರದ ಮತ್ತು ಮಾನ್ಯ ಪ್ರಧಾನಮಂತ್ರಿಗಳಿಗೆ ಮಾನ್ಯ ಮುಖ್ಯ ಮಂತ್ರಿಗಳು ಪತ್ರ ಬರೆದಿರುತ್ತಾರೆ. ಕೇಂದ್ರ ವಿತ್ತ ಸಚಿವರು, ಕೇಂದ್ರ ಸರ್ಕಾರದವರು ನಬಾರ್ಡ್ ನಲ್ಲಿ ಮಾರುಕಟ್ಟೆ ದರ ಆಧಾರಿತ ಹೆಚ್ಚಿನ ಬಡ್ಡಿ ದರದ ಪುನರ್ಧನವು ಲಭ್ಯವಿರುವುದಾಗಿ ತಿಳಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ನಬಾರ್ಡ್ ರೂ. 896.11ಕೋಟಿಗಳ ಹೆಚ್ಚುವರಿ ಮಿತಿಯನ್ನು ರಿಯಾಯಿತಿ ಬಡ್ಡಿ ದರದಲ್ಲಿ ನೀಡಿರುತ್ತದೆ.

ಡಿ.ಸಿ.ಸಿ. ಬ್ಯಾಂಕುಗಳ ಬಂಡವಾಳವನ್ನು ಹೆಚ್ಚಿಸಲು ಜಿಲ್ಲೆಯ ಸಹಕಾರ ಸಂಘಗಳು ಹೊಂದಿರುವ ಮೀಸಲು ನಿಧಿಯನ್ನು ಕಡ್ಡಾಯವಾಗಿ ಡಿ.ಸಿ.ಸಿ. ಬ್ಯಾಂಕುಗಳಲ್ಲಿಯೇ ವಿನಿಯೋಗಿಸಲು ಸುತ್ತೋಲೆ ನೀಡಲಾಗಿದೆ. ಅಲ್ಲದೇ ಮುಜರಾಯಿ ಇಲಾಖೆ ಮತ್ತು ತಾಲ್ಲೂಕು ಕೃಷಿ ಮಾರುಕಟ್ಟೆ ಸಮಿತಿಗಳು ಹೊಂದಿರುವ ಹೆಚ್ಚುವರಿ ನಿಧಿಯನ್ನು ಡಿ.ಸಿ.ಸಿ ಬ್ಯಾಂಕುಗಳಲ್ಲಿ ವಿನಿಯೋಗಿಸುವಂತೆ ಮನವೊಲಿಸಲಾಗುತ್ತಿದೆ.

ಸರ್ಕಾರದಿಂದ ರೈತರ ಪರವಾಗಿ ಸಹಕಾರ ಸಂಘಗಳಿಗೆ ಮಾಡಬೇಕಾದ ಬಡ್ಡಿ ಸಹಾಯಧನವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲು ಕ್ರಮ ವಹಿಸಲಾಗಿದ್ದು ಮಾರ್ಚ್ 2024 ರ ಅಂತ್ಯದ ಎಲ್ಲಾ ಬಿಲ್ಲುಗಳನ್ನು ಪಾವತಿ ಮಾಡಲಾಗಿದೆ ಎಂದು ತಿಳಿಸಿದರು.

GOOD NEWS: Good news for farmers from the state government: 'Loan facility' through 'DCC Bank'!
Share. Facebook Twitter LinkedIn WhatsApp Email

Related Posts

ರೈತರಿಗೆ ವರದಾನ ‘ಕಿಸಾನ್ ಕ್ರೆಡಿಟ್ ಕಾರ್ಡ್’: ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.!

13/04/2026 7:16 AM2 Mins Read

ಪೋಷಕರೇ ಗಮನಿಸಿ : `RTE’ ಉಚಿತ ಸೀಟಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ, ಏ.21 ರಿಂದ ಅರ್ಜಿ ಸಲ್ಲಿಕೆ ಆರಂಭ

13/04/2026 7:02 AM1 Min Read

Rain Alert : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

13/04/2026 6:53 AM1 Min Read
Recent News

ರೈತರಿಗೆ ವರದಾನ ‘ಕಿಸಾನ್ ಕ್ರೆಡಿಟ್ ಕಾರ್ಡ್’: ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.!

13/04/2026 7:16 AM

ದಕ್ಷಿಣ ಲೆಬನಾನ್‌ಗೆ ನೆತನ್ಯಾಹು ಭೇಟಿ:’ಯುದ್ಧ ಇನ್ನೂ ನಿಂತಿಲ್ಲ’: ಹಿಜ್ಬುಲ್ಲಾ ವಿರುದ್ಧ ಇಸ್ರೇಲ್ ಗುಡುಗು!

13/04/2026 7:11 AM

BIG NEWS : ದೇಶಾದ್ಯಂತ 7.36 ಕೋಟಿ ಮತದಾರರ ಹೆಸರು ಡಿಲೀಟ್ : `SIR’ 2ನೇ ಹಂತ ಮುಕ್ತಾಯ

13/04/2026 7:10 AM

ಪೋಷಕರೇ ಗಮನಿಸಿ : `RTE’ ಉಚಿತ ಸೀಟಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ, ಏ.21 ರಿಂದ ಅರ್ಜಿ ಸಲ್ಲಿಕೆ ಆರಂಭ

13/04/2026 7:02 AM
State News
KARNATAKA

ರೈತರಿಗೆ ವರದಾನ ‘ಕಿಸಾನ್ ಕ್ರೆಡಿಟ್ ಕಾರ್ಡ್’: ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.!

By kannadanewsnow5713/04/2026 7:16 AM KARNATAKA 2 Mins Read

ಬೆಂಗಳೂರು: ದೇಶದ ಬೆನ್ನೆಲುಬಾದ ರೈತರಿಗೆ ಕೃಷಿ ಚಟುವಟಿಕೆಗಳಿಗಾಗಿ ಸಕಾಲದಲ್ಲಿ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಜಾರಿಗೆ ತಂದಿರುವ ‘ಕಿಸಾನ್ ಕ್ರೆಡಿಟ್…

ಪೋಷಕರೇ ಗಮನಿಸಿ : `RTE’ ಉಚಿತ ಸೀಟಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ, ಏ.21 ರಿಂದ ಅರ್ಜಿ ಸಲ್ಲಿಕೆ ಆರಂಭ

13/04/2026 7:02 AM

Rain Alert : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಸಹಿತ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

13/04/2026 6:53 AM

BIG NEWS: ಕರ್ನಾಟಕದಲ್ಲಿ 5.11 ಲಕ್ಷ ಕೋಟಿ ರೂ. ಹೂಡಿಕೆ : 7.16 ಲಕ್ಷ ಉದ್ಯೋಗ ಸೃಷ್ಟಿ.!

13/04/2026 6:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.