Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ‘ಸೋಷಿಯಲ್ ಮೀಡಿಯಾ’ಗಳ ಹಾನಿಕಾರಕ ‘ಪೋಸ್ಟ್‌’ಗಳನ್ನು 3 ಗಂಟೆಗಳಲ್ಲಿ ತೆಗೆದುಹಾಕಬೇಕು: ಕೇಂದ್ರ ಸರ್ಕಾರ ಆದೇಶ

10/02/2026 5:30 PM

ಐದು ದಿನಗಳ ‘ಕುಟುಂಬ ಯಾತ್ರಾ ಪ್ರವಾಸ’ ಯಶಸ್ವಿಯಾಗಿ ಮುಕ್ತಾಯ: ಪ್ರವೀಣ್ ಕುಮಾರ್.ಹೆಚ್‍.ಡಿ

10/02/2026 5:23 PM
BREAKING NEWS

ಸಾಮಾಜಿಕ ಮಾಧ್ಯಮ ಸಂಸ್ಥೆಗಳು ಹಾನಿಕಾರಕ ವಿಷಯವನ್ನು 3 ಗಂಟೆಗಳಲ್ಲಿ ತೆಗೆದುಹಾಕಬೇಕು: ಕೇಂದ್ರ ಸರ್ಕಾರ ಸೂಚನೆ

10/02/2026 5:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬಿಸಿಲಿನಿಂದ ರಕ್ಷಣೆ ಪಡೆಯಲು ಆರೋಗ್ಯ ಇಲಾಖೆಯಿಂದ `ಮಾರ್ಗಸೂಚಿ’ ಪ್ರಕಟ : ತಪ್ಪದೇ ಈ ಸಲಹೆಗಳನ್ನು ಪಾಲಿಸಿ.!
KARNATAKA

BIG NEWS : ಬಿಸಿಲಿನಿಂದ ರಕ್ಷಣೆ ಪಡೆಯಲು ಆರೋಗ್ಯ ಇಲಾಖೆಯಿಂದ `ಮಾರ್ಗಸೂಚಿ’ ಪ್ರಕಟ : ತಪ್ಪದೇ ಈ ಸಲಹೆಗಳನ್ನು ಪಾಲಿಸಿ.!

By kannadanewsnow5719/03/2025 5:05 AM

ಬೆಂಗಳೂರು: ರಾಜ್ಯದಲ್ಲಿ ಸೂರ್ಯನ ಶಾಖವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರು ಈ ಕೆಳಕಂಡ ಸಲಹೆಗಳನ್ನು ಪಾಲಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸೂರ್ಯನ ಶಾಖ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಏನು ಮಾಡಬೇಕು ಅಂತ ಈ ಕೆಳಗಿನಂತೆ ಮಾರ್ಗಸೂಚಿಯಲ್ಲಿ ಸಲಹೆ ನೀಡಿದೆ.

ಬಿಸಿಲ ಝಳ ಹೆಚ್ಚಳ: ಈ ಸಲಹೆ ಪಾಲಿಸೋದು ಮರಯೆಬೇಡಿ

  • ಸಾರ್ವಜನಿಕರು ರೇಡಿಯೋ, ಟಿವಿ ದಿನ ಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಕುರಿತು ಮುನ್ಸೂಚನೆಗಳನ್ನು ಪಡೆದುಕೊಳ್ಳುವುದು.
  • ಬಾಯಾರಿಕೆಯಿಲ್ಲದಿದ್ದರೂ ಸಾಕಷ್ಟು ಮತ್ತು ಸಾಧ್ಯವಾದಷ್ಟು ಹೆಚ್ಚಾಗಿ ನೀರನ್ನು ಕುಡಿಯುವುದು.
  • ಹಗುರವಾದ, ತಿಳಿ-ಬಣ್ಣದ, ಸಡಿಲವಾದ ಮತ್ತು ರಂಧ್ರವುಳ್ಳ ಹತ್ತಿ ಬಟ್ಟೆಗಳನ್ನು ಧರಿಸಿ.
  • ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಟೋಪಿ, ಬೂಟಗಳು ಅಥವಾ ಚಪ್ಪಲಗಳನ್ನು ಬಳಸಿ
  • ಬಸ್ಸಿನಲ್ಲಿ ದೂರದ ಪ್ರಯಾಣವನ್ನು ರಾತ್ರಿ ವೇಳೆ ಮಾಡುವುದು ಉತ್ತಮ, ಒಂದು ವೇಳೆ ಪ್ರಯಾಣ ಮಾಡುವ ಸಂದರ್ಭ ಬಂದರೆ, ಪ್ರಯಾಣ ಮಾಡುವಾಗ, ನಿಮ್ಮೊಂದಿಗೆ ನೀರನ್ನು ಒರಿ. ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿಯನ್ನು ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈ ಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಸಹ ಬಳಸಿ.
  • ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಶರಬತ್, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ ಅದು ದೇಹವನ್ನು ಪುನಃ ತಂಪಾಗಿಡಲು ಸಹಾಯ ಮಾಡುತ್ತದೆ. ಪ್ರಾಣಿ/ಪಕ್ಷಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ. ಆದಷ್ಟು ಫ್ಯಾನಗಳನ್ನು ಬಳಸಿ, ಒದ್ದೆಯಾದ ಬಟ್ಟೆಗಳನ್ನು ಮತ್ತು ಆಗಾಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡಿ, ಕೆಲಸದ ಸಮಯವನ್ನು ಆದಷ್ಟು ತಂಪಾದ ಸಮಯದಲ್ಲಿ ಮಾಡುವುದು ಹಾಗೂ ಕೆಲಸದ ಸ್ಥಳದ ಬಳಿ ತಂಪಾದ ಕುಡಿಯುವ ನೀರನ್ನು ಒದಗಿಸಿ.
  • ಕೆಲಸ ನಿರ್ವಹಿಸುವ ಗರ್ಭಿಣಿ ಮಹಿಳೆಯರು ಮತ್ತು ಅನಾರೋಗ್ಯದಲ್ಲಿರುವ ಕಾರ್ಮಿಕರಿಗೆ ಹೆಚ್ಚಿನ ಗಮನ ನೀಡಬೇಕು.
  • ಕಲ್ಲಂಗಡಿ, ಕರಬೂಜ, ಕಿತ್ತಳೆ ದ್ರಾಕ್ಷಿ, ಅನನಾಸ್, ಸೌತೆಕಾಯಿ, ಎಳನೀರನ್ನು ಹೆಚ್ಚಾಗಿ ಸೇವಿಸಬೇಕು.
  • ನವಜಾತ ಶಿಶುಗಳು ಹಾಗೂ ಚಿಕ್ಕ ಮಕ್ಕಳು, ಗರ್ಣಿಣಿಯರು, ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವವರು, ಮಾನಸಿಕ ಸಮಸ್ಯೆಗಳಂದ ಬಳಲುತ್ತಿರುವವರ ಹಾಗೂ ಇತರ ಅರೋಗ್ಯ ಸಮಸ್ಯೆಗಳರುವವರು. ಅದರಲ್ಲೂ ವಿಶೇಷವಾಗಿ ಹೃದ್ರೋಗ ಹಾಗೂ ರಕ್ತದ ಒತ್ತಡದಿಂದ ಬಳಲುತ್ತಿರುವವರು ಹೆಜ್ಜೆ ಜಾಗರೂಕತೆ ವಹಿಸಬೇಕು.

ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಏನು ಮಾಡಬಾರದು ಎಂಬುದರ ಆರೋಗ್ಯ ಇಲಾಖೆಯಿಂದ ಮಾಹಿತಿ

  • ಮಕ್ಕಳ ಅಥವಾ ಸಾಕುಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಿದ ವಾಹಗಳ ಹತ್ತಿರ ಬಿಡಬೇಡಿ. ಕಪ್ಪು ಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಿ.
  • ಹೊರಗಿನ ತಾಪಮಾನ ಹೆಚ್ಚಾದಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ. ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ.
  • ಬಿಸಿಲಿನ ಸಮಯದಲ್ಲಿ ಅಡುಗೆ ಮಾಡುವುದನ್ನು ತಪ್ಪಿಸಿ.
  • ಅಡುಗೆ ಪ್ರದೇಶವನ್ನು ಸಮರ್ಪಕವಾಗಿ ಗಾಳಿಯಾಡಲು ಬಾಗಿಲು ಮತ್ತು ಕಿಟಕಿಗಳನ್ನು ತೆರೆಯಿರಿ.
  • ದೇಹವನ್ನು ನಿರ್ಜಲೀಕರಣಗೊಳಿಸುವ ಆರೋಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕ ತಂಪು ಪಾನೀಯಗಳನ್ನು ಸೇವಿಸಬೇಡಿ.
  • ಹಾನಿಕಾರಕವಾದ ಆಹಾರ ಮತ್ತು ಹಳಸಿದ ಆಹಾರವನ್ನು ಸೇವಿಸಬೇಡಿ.
  • ಬಿಸಿಲಿನಲ್ಲಿ, ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಬೇಕು.
  •  ಈ ಸಂದರ್ಭದಲ್ಲಿ ಹೊರಾಂಗಣ ಚಟುವಟಿಕೆಗಳನ್ನು ಮಾಡಬಾರದು.
  • ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
  • ಮಧ್ಯಪಾನ, ಚಹಾ, ಕಾಫಿ ಮತ್ತು ಕಾಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಂದ ದೂರವಿರಿ.
  • ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
  • ಹೆಚ್ಚು ಪ್ರೋಟೀನ್‌ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ. ಮಕ್ಕಳ ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಿಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನ ತಾಪಮಾನವು ಅವರಿಗೆ/ಅವುಗಳಿಗೆ ಅಪಾಯಕಾರಿಯಾಗಬಹುದು.
  • ಇಷ್ಟೇ ಅಲ್ಲದೆ ಕೆಲಸದ ಸ್ಥಳಗಳಲ್ಲಿ ಮಾಡಬೇಕಾದ ವ್ಯವಸ್ಥೆಗಳೂ ಸೇರಿದಂತೆ ಇನ್ನೂ ಅನೇಕ ಸಲಹೆ ಸೂಚನೆಗಳನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಆರೋಗ್ಯ ಇಲಾಖೆಯಿಂದ ಸಲಹೆ ಸೂಚನೆಗಳನ್ನೂ ನೀಡಲಾಗುತ್ತದೆ.

BIG NEWS: Health Department issues guidelines to protect yourself from the sun: Follow these tips without fail!
Share. Facebook Twitter LinkedIn WhatsApp Email

Related Posts

ಐದು ದಿನಗಳ ‘ಕುಟುಂಬ ಯಾತ್ರಾ ಪ್ರವಾಸ’ ಯಶಸ್ವಿಯಾಗಿ ಮುಕ್ತಾಯ: ಪ್ರವೀಣ್ ಕುಮಾರ್.ಹೆಚ್‍.ಡಿ

10/02/2026 5:23 PM1 Min Read

ಸಾಗರದಲ್ಲಿ ಅರಣ್ಯ ಜಮೀನು ತೆರವು ನೋಟೀಸ್: ತಮ್ಮದೇ ಸರ್ಕಾರದ ವಿರುದ್ದ ಕೆಡಿಪಿ ಸದಸ್ಯ ಅಸಮಾಧಾನ

10/02/2026 5:11 PM3 Mins Read

ವೀರ ಕಂಬಳಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!

10/02/2026 5:02 PM2 Mins Read
Recent News

BREAKING: ‘ಸೋಷಿಯಲ್ ಮೀಡಿಯಾ’ಗಳ ಹಾನಿಕಾರಕ ‘ಪೋಸ್ಟ್‌’ಗಳನ್ನು 3 ಗಂಟೆಗಳಲ್ಲಿ ತೆಗೆದುಹಾಕಬೇಕು: ಕೇಂದ್ರ ಸರ್ಕಾರ ಆದೇಶ

10/02/2026 5:30 PM

ಐದು ದಿನಗಳ ‘ಕುಟುಂಬ ಯಾತ್ರಾ ಪ್ರವಾಸ’ ಯಶಸ್ವಿಯಾಗಿ ಮುಕ್ತಾಯ: ಪ್ರವೀಣ್ ಕುಮಾರ್.ಹೆಚ್‍.ಡಿ

10/02/2026 5:23 PM
BREAKING NEWS

ಸಾಮಾಜಿಕ ಮಾಧ್ಯಮ ಸಂಸ್ಥೆಗಳು ಹಾನಿಕಾರಕ ವಿಷಯವನ್ನು 3 ಗಂಟೆಗಳಲ್ಲಿ ತೆಗೆದುಹಾಕಬೇಕು: ಕೇಂದ್ರ ಸರ್ಕಾರ ಸೂಚನೆ

10/02/2026 5:21 PM

VIDEO : ಶ್ರೀಲಂಕಾದಲ್ಲಿ ಪಾಕ್ ತಂಡಕ್ಕೆ ವಿಚಿತ್ರ ಆತಿಥ್ಯ, ಸೋಷಿಯಲ್ ಮೀಡಿಯಾದಲ್ಲಿ ಅಪಹಾಸ್ಯ, ವಿಡಿಯೋ ವೈರಲ್!

10/02/2026 5:14 PM
State News
KARNATAKA

ಐದು ದಿನಗಳ ‘ಕುಟುಂಬ ಯಾತ್ರಾ ಪ್ರವಾಸ’ ಯಶಸ್ವಿಯಾಗಿ ಮುಕ್ತಾಯ: ಪ್ರವೀಣ್ ಕುಮಾರ್.ಹೆಚ್‍.ಡಿ

By kannadanewsnow0910/02/2026 5:23 PM KARNATAKA 1 Min Read

ಚಿತ್ರದುರ್ಗ: ಹೊನ್ನೇಕೆರೆ ಗೊಲ್ಲರಹಟ್ಟಿ (ಅಮರಾವತಿ ಗೊಲ್ಲರಹಟ್ಟಿ) ಗ್ರಾಮದ ಆರಾಧ್ಯ ದೈವಗಳಾದ ಶ್ರೀ ಮೇಲುಕುಂಟೆ ರಂಗನಾಥ ಸ್ವಾಮಿ, ಶ್ರೀ ಮಲೆಯಾಂಬಿಕೆ ದೇವಿ ಹಾಗೂ…

ಸಾಗರದಲ್ಲಿ ಅರಣ್ಯ ಜಮೀನು ತೆರವು ನೋಟೀಸ್: ತಮ್ಮದೇ ಸರ್ಕಾರದ ವಿರುದ್ದ ಕೆಡಿಪಿ ಸದಸ್ಯ ಅಸಮಾಧಾನ

10/02/2026 5:11 PM

ವೀರ ಕಂಬಳಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!

10/02/2026 5:02 PM

BIG NEWS : ದಕ್ಷಿಣಕನ್ನಡದಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ‘FIR’ ದಾಖಲು

10/02/2026 4:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.