ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ನೋಂದಣಿ ಮಾಡಿಸುವುದು ಕಡ್ಡಾಯ ಎಂಬುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಮೂಲಕ ಅಕ್ರಮ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಬ್ರೇಕ್ ಹಾಕುವಂತ ನಿರ್ಧಾರವನ್ನು ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ. ರಾಜ್ಯ ಸರ್ಕಾರವು ‘ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ ( ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025 ಅನ್ನು ಜಾರಿಗೆ ತಂದಿದೆ ಎಂದರು.
ನೋಂದಣಿಯಾಗದ, ಸುರಕ್ಷತಾ ಕ್ರಮಗಳನ್ನು ಅನುಸರಿಸದ, ಸಾರ್ವಜನಿಕರೊಂದಿಗೆ ನಿಯಮಬಾಹಿರವಾಗಿ ನಡೆದುಕೊಳ್ಳುವ ಮೈಕ್ರೋ ಫೈನಾನ್ಸ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ ಪರಮೇಶ್ವರ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ. ರಾಜ್ಯ ಸರ್ಕಾರವು 'ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ ( ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025 ಅನ್ನು ಜಾರಿಗೆ ತಂದಿದೆ. ನೋಂದಣಿಯಾಗದ, ಸುರಕ್ಷತಾ ಕ್ರಮಗಳನ್ನು ಅನುಸರಿಸದ, ಸಾರ್ವಜನಿಕರೊಂದಿಗೆ ನಿಯಮಬಾಹಿರವಾಗಿ ನಡೆದುಕೊಳ್ಳುವ ಮೈಕ್ರೋ ಫೈನಾನ್ಸ್ ಗಳ ವಿರುದ್ಧ ಕಠಿಣ ಕ್ರಮ… pic.twitter.com/4UVREJFccq
— DIPR Karnataka (@KarnatakaVarthe) March 18, 2025
ಇದು ಸಿದ್ದರಾಮಯ್ಯನ ಗ್ಯಾರಂಟಿ ಅಲ್ಲ, ಕನ್ನಡಿಗರ ಗ್ಯಾರಂಟಿ: ಸಿಎಂ ಸಿದ್ಧರಾಮಯ್ಯ